- ಬಂಜಾರ ಸಾಹಿತ್ಯ ಪರಿಷತ್ತು ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯ ಗೌರವಾಧ್ಯಕ್ಷ ಪಿ.ಕೆ.ಖಂಡೋಬಾ ಮನವಿ
ಕನ್ನಡಪ್ರಭ ವಾರ್ತೆ ದಾವಣಗೆರೆ
ಲಿಪಿಯೇ ಇಲ್ಲದ ಬಂಜಾರ ಭಾಷೆಯು ಸುಮಾರು 2 ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಇಂತಹ ಭಾಷೆಯನ್ನು ಉಳಿಸಿ, ಬೆಳೆಸುವ ಕೆಲಸವನ್ನು ಸಮಾಜ ಬಾಂಧವರು ಮಾಡಬೇಕು ಎಂದು ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು ರಾಜ್ಯ ಗೌರವಾಧ್ಯಕ್ಷ ಪಿ.ಕೆ.ಖಂಡೋಬಾ ಹೇಳಿದರು.ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಮಾತ್ರವಲ್ಲದೇ, ದೇಶಾದ್ಯಂತ ಎಲ್ಲ ರಾಜ್ಯಗಳಲ್ಲೂ ನೆಲೆಸಿರುವ ಬಂಜಾರ ಸಮುದಾಯದ ಲಿಪಿ ಇಲ್ಲದ ಭಾಷೆಯನ್ನು ಉಳಿಸಿಕೊಳ್ಳುವ ಕೆಲಸ ಈಗ ಆಗಬೇಕಾಗಿದೆ ಎಂದರು.
ಬಂಜಾರ ಸಾಹಿತ್ಯ ಪರಿಷತ್ತು ಸ್ಥಾಪಿಸಿದ್ದರಿಂದ ನಮ್ಮ ಬಂಜಾರ ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ, ಬೆಳೆಸಿಕೊಂಡು ಹೋಗಲು ಅನುಕೂಲವಾಗುತ್ತದೆ. ಬಂಜಾರ ಭಾಷೆಯಲ್ಲಿ ಅದ್ಭುತವಾದ ಸಾಹಿತ್ಯ ಸಂಪತ್ತಿದೆ. ಮಹಾಕಾವ್ಯ, ಪುರಾಣ ಸಾಹಿತ್ಯವನ್ನೂ ಬಂಜಾರ ಭಾಷೆ ಹೊಂದಿದೆ. ಅಭಿವೃದ್ಧಿ ಕಾರ್ಯಗಳ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳೂ ಪರಿಷತ್‌ಗೆ ಅಗತ್ಯ. ಸಾಹಿತ್ಯ, ಸಂಸ್ಕೃತಿಯ ಉನ್ನತೀಕರಣದ ಕೆಲಸ ವ್ಯವಸ್ಥಿತವಾಗಿ ಆಗಬೇಕು ಎಂದು ಹೇಳಿದರು.
ಅಲೆಮಾರಿ ಸಮುದಾಯವೆಂದೇ ಗುರುತಿಸಲ್ಪಡುವ, ಇಂದಿಗೂ ತಾಂಡಾಗಳಲ್ಲಿ, ಕಾಡು-ಮೇಡುಗಳ ಅಂಚಿನಲ್ಲಿ ಬದುಕುವ ಬಂಜಾರ ಸಮುದಾಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಔದ್ಯೋಗಿಕವಾಗಿ ಮುಖ್ಯವಾಹಿನಿಗೆ ಬರಬೇಕು. ಸಾವಿರಾರು ವರ್ಷಗಳಿಂದ ಬಂಜಾರ ಸಮುದಾಯದ ಉಳಿಸಿರಾಗಿರುವ ಬಂಜಾರ ಸಮುದಾಯಕ್ಕೆ ಮೌಖಿಕ ಸಾಹಿತ್ಯದ ಬಲ ಹೊಂದಿದೆ. ಈ ಸಮುದಾಯವು ಸಾಕಷ್ಟು ಸಾಹಿತ್ಯ ಕೃಷಿ ಮಾಡಬೇಕಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಕವಿತಾ ನಾಯ್ಕ ಪ್ರಾರ್ಥಿಸಿದರು. ಶಿವಕಾಂತ ನಾಯ್ಕ ಸ್ವಾಗತಿಸಿದರು.
(ಕೋಟ್)
- ಪಿ.ಕೆ.ಖಂಡೋಬಾ, ರಾಜ್ಯ ಗೌರವಾಧ್ಯಕ್ಷ.
-16ಕೆಡಿವಿಜಿ5, 6.ಜೆಪಿಜಿ:
ದಾವಣಗೆರೆಯಲ್ಲಿ ಭಾನುವಾರ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕವನ್ನು ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ ರಾಜ್ಯ ಗೌರವಾಧ್ಯಕ್ಷ ಪಿ.ಕೆ.ಖಂಡೋಬಾ ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದರು.