ಸಾಹಿತ್ಯ ಸಮ್ಮೇಳನ ನಾಡ, ನೆಲದ ಸಂಸ್ಕೃತಿಯ ಪ್ರತಿಬಿಂಬವಾಗಲಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

KannadaprabhaNewsNetwork |  
Published : Jul 20, 2024, 12:45 AM IST
19ಕೆಎಂಎನ್ ಡಿ22,23 | Kannada Prabha

ಸಾರಾಂಶ

ರಾಜ್ಯದ ಕಲಾವಿದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ಎಲ್ಲ ಸಮಿತಿಗಳ ನಡುವೆ ಯಾವುದೇ ಗೊಂದಲವಿಲ್ಲದಂತೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು. ಇದು ಇಡೀ ರಾಜ್ಯದ ನುಡಿ ಹಬ್ಬ ಜಿಲ್ಲಾದ್ಯಂತ ಸಂಭ್ರಮ ಸಡಗರ ಇರುವಂತೆ ಎಲ್ಲಾ ವರ್ಗದವರನ್ನು ಸೇರಿಸಿ ಸಮ್ಮೇಳನ ಸಂಘಟಿಸಿ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಾಡು, ನೆಲೆದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜೊತೆಗೆ ಹೆಚ್ಚು ಅರ್ಥಪೂರ್ಣ, ವೈವಿದ್ಯಮಯವಾಗಿರುವಂತೆ ಮಂಡ್ಯ ಜಿಲ್ಲೆಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಬೇಕಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಹೇಳಿದರು.

ವಿಕಾಸಸೌಧದ ತಮ್ಮ ಕಚೇರಿ ಕೊಠಡಿಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಘಟನೆ ಕುರಿತು ಸಭೆ ನಡೆಸಿದ ಸಚಿವರು ಹಲವು ಸಲಹೆ ಸೂಚನೆ ಪಡೆದು ಎಲ್ಲಾ ಜನ ಪ್ರತಿನಿಧಿಗಳನ್ನು ತೊಡಗಿಸಿಕೊಂಡು ಅರ್ಥಪೂರ್ಣವಾಗಿ ಸಮ್ಮೇಳನ ಆಯೋಜಿಸಲು ಸೂಚನೆ ನೀಡಿದರು.

ಎಲ್ಲ ಸಮಿತಿಗಳಲ್ಲಿ ಸ್ಥಳೀಯ ಶಾಸಕರಿಗೆ ನೇತೃತ್ವ ನೀಡಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಜಿಲ್ಲೆಯ ಎಲ್ಲ ಸಂಘಟನೆಗಳನ್ನು ಸಹ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ರಾಜ್ಯದ ಕಲಾವಿದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ಎಲ್ಲ ಸಮಿತಿಗಳ ನಡುವೆ ಯಾವುದೇ ಗೊಂದಲವಿಲ್ಲದಂತೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು. ಇದು ಇಡೀ ರಾಜ್ಯದ ನುಡಿ ಹಬ್ಬ ಜಿಲ್ಲಾದ್ಯಂತ ಸಂಭ್ರಮ ಸಡಗರ ಇರುವಂತೆ ಎಲ್ಲಾ ವರ್ಗದವರನ್ನು ಸೇರಿಸಿ ಸಮ್ಮೇಳನ ಸಂಘಟಿಸಿ ಎಂದರು‌.

ಸಮ್ಮೇಳನದ ಯಶಸ್ವಿ ಸಂಘಟನೆಗೆ ವಿವಿಧ ಸಮಿತಿಗಳ ರಚನೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ವೇದಿಕೆ ನಿರ್ಮಾಣ, ನಿರ್ವಹಣೆ, ಶಿಷ್ಟಾಚಾರ ಪಾಲನೆ, ಮೆರವಣಿಗೆ ಸಾಂಸ್ಕೃತಿಕ, ಸಾಹಿತ್ಯಿಕ ಕಾರ್ಯಕ್ರಮಗಳು, ಗೋಷ್ಠಿ ಆಯೋಜನೆ, ವಸತಿ, ಕುಡಿಯುವ ನೀರು, ಸ್ವಚ್ಛತೆ ಊಟೋಪಚಾರ ಹಣಕಾಸು, ಪ್ರಚಾರ, ಪುಸ್ತಕ ಮಳಿಗೆ ಸ್ಮರಣ ಸಂಚಿಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಸಮ್ಮೇಳನದ ಸಂಘಟನೆ ಕುರಿತು ಮಾಹಿತಿ ಹಾಗೂ ಅಭಿಪ್ರಾಯ, ಸಲಹೆ ನೀಡಿದರು.

ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರಸ್ವಾಮಿ, ಕೆ.ಎಂ.ಉದಯ್, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಷಿ, ಲಾಂಛನ ರಚಿಸಿದ ಕಲಾವಿದರ ಶಂಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಡಾ. ಪಟೇಲ್ ಪಾಂಡು, ನೇ.ಭ ರಾಮಲಿಂಗ ಶೆಟ್ಟಿ, ಮೀರಾ ಶಿವಲಿಂಗಯ್ಯ, ಡಾ.ಪದ್ಮಿನಿ ನಾಗರಾಜ್, ಎಂ.ಎಸ್. ಶ್ರೀನಿವಾಸ ಮೂರ್ತಿ ಹಾಜರಿದ್ದರು.

ಲಾಂಛನ ಬಿಡುಗಡೆ

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸೌಧದ ಕೊಠಡಿ ಸಂಖ್ಯೆ 334 ರ ಸಮ್ಮೇಳನ ಸಭಾಂಗಣದಲ್ಲಿ ಲಾಂಛನ ಬಿಡುಗಡೆ ಮಾಡಿದರು.

ಈ ವೇಳೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್‌ ಜೋಷಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿ ನಾಯಿ ಮರಿ ದತ್ತು ಪಡೆದು ಮಾನವೀಯತೆ ತೋರಿ
5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಕಡ್ಡಾಯ