ಕಾರವಾರ: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ. 1ರಿಂದ 20ರ ವರೆಗೆ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಎಲ್ಲ ಪರೀಕ್ಷೆಗಳು ಅತ್ಯಂತ ಪಾರದರ್ಶಕವಾಗಿ ಮತ್ತು ಪರೀಕ್ಷಾ ಮಾರ್ಗಸೂಚಿಗಳನ್ವಯ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಪರೀಕ್ಷಾ ಮಂಡಳಿಯ ನಿರ್ದೇಶನದಂತೆ ಜಿಲ್ಲೆಯ 34 ಪರೀಕ್ಷಾ ಕೇಂದ್ರಗಳಲ್ಲಿನ ಸಿಸಿ ಕ್ಯಾಮೆರಾ ಅಳವಡಿಸುವಂತೆ ಮತ್ತು ಸಿಸಿ ಕ್ಯಾಮೆರಾ ಆಡಿಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವುದು ಮತ್ತು ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವ ಕಾರ್ಯಗಳನ್ನು ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಮತ್ತು ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಾಟದ ವಾಹನಗಳಿಗೆ ಪೊಲೀಸ್ ಭದ್ರತೆ ನೀಡುವಂತೆ ಮತ್ತು ಕಾರವಾರ ಮತ್ತು ಶಿರಸಿ ಖಜಾನೆಗಳಿಗೆ ಕಡ್ಡಾಯವಾಗಿ 24*7 ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಮಂಡಳಿಯಿಂದ ಸಂಚಾರಿ ಜಾಗ್ರತ ದಳ, ಸ್ಥಾನಿಕ ಜಾಗೃತ ದಳ ನೇಮಕ ಮಾಡಲಾಗಿದ್ದು, ಕೇಂದ್ರಗಳಲ್ಲಿ ಪ್ರತಿ ಕೊಠಡಿಯಲ್ಲಿ ನಿಗದಿತ ವಿದ್ಯಾರ್ಥಿಗಳ ಸಂಖ್ಯೆ, ನೋಂದಣಿ ಸಂಖ್ಯೆಗಳನ್ನು ಹಾಕಬೇಕು. ಕೊಠಡಿಗಳಲ್ಲಿ ಸಾಕಷ್ಟು ಗಾಳಿ, ಬೆಳಕು ಹಾಗೂ ಶುಚಿತ್ವದಿಂದ ಇರುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಸರಬರಾಜುದಾರರನ್ನು ನೇಮಿಸಿಕೊಳ್ಳಲು ನಿಷೇಧಿಸಿದ್ದು, ಪ್ರತಿ ಕೊಠಡಿಯ ಹೊರಗಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದರು.ಪರೀಕ್ಷಾ ಕೇಂದ್ರಗಳಲ್ಲಿ ಅಧೀಕ್ಷಕರನ್ನೊಳಗೊಂಡಂತೆ ಎಲ್ಲ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಗುರುತಿನ ಚೀಟಿ
ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಪ್ಪ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಇದ್ದರು.