ದೃಷ್ಟಿಕೇಂದ್ರದ ಸೇವೆ ಎಲ್ಲರಿಗೂ ತಲುಪಲಿ: ಡಾ. ಮಂತರ್‌ ಗೌಡ

KannadaprabhaNewsNetwork |  
Published : Jul 09, 2025, 12:18 AM IST
 ಉದ್ಘಾಟನೆ ಸಂದರ್ಭ | Kannada Prabha

ಸಾರಾಂಶ

ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ಮಾಂದ್ಯತೆ ನಿಯಂತ್ರಣ ಕಾರ್ಯಕ್ರಮ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕುಶಾಲನಗರ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಆಶಾಕಿರಣ ದೃಷ್ಟಿಕೇಂದ್ರ ಉದ್ಘಾಟಿಸಲಾಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಯೋಜನೆಯಾದ ಆಶಾಕಿರಣ ದೃಷ್ಟಿಕೇಂದ್ರದ ಸೇವೆ ಅಗತ್ಯ ಇರುವ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ಮಾಂದ್ಯತೆ ನಿಯಂತ್ರಣ ಕಾರ್ಯಕ್ರಮ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕುಶಾಲನಗರ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಆಶಾಕಿರಣ ದೃಷ್ಟಿಕೇಂದ್ರ ಉದ್ಘಾಟಿಸಿ ಮಾತನಾಡಿದರು.ರಾಜ್ಯದಲ್ಲಿ 1 ಕೋಟಿ ಜನರಿಗೆ ದೃಷ್ಟಿ ಸಮಸ್ಯೆ ಇದೆ. 5 ವರ್ಷದಿಂದ 90 ವರ್ಷದ ವರೆಗೆ ಕಣ್ಣಿನ ಸಮಸ್ಯೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಂಧತ್ವ ಪ್ರಮಾಣ ಕಡಿಮೆ ಮಾಡಬೇಕು ಎಂಬ ಉದ್ದೇಶದಿಂದ ಆಶಾಕಿರಣ ದೃಷ್ಟಿ ಕೇಂದ್ರ ಸ್ಥಾಪಿಸಲಾಗಿದೆ. ಉಚಿತವಾಗಿ ಪರೀಕ್ಷೆ ಮಾಡಿ ಕನ್ನಡಕವನ್ನು ಕೊಡಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯತೆ ಕಂಡುಬಂದರೆ ಜಿಲ್ಲಾಸ್ಪತ್ರೆಗೆ ದಾಖಲಿಸುವ ಕೆಲಸವಾಗಬೇಕಾಗಿದೆ ಎಂದರು.

ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ವಿವಿಧ ಕಾಮಗಾರಿಗಳಿಗೆ 82 ಲಕ್ಷ ರು. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕರು ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಮಾತನಾಡಿ, ಆಶಾಕಿರಣ ಯೋಜನೆ ಸರ್ಕಾರದ ಕನಸಿನ ಯೋಜನೆಯಾಗಿದೆ. ಬಡವರಿಗೆ, ಜನಸಾಮಾನ್ಯರಿಗೆ ಕಣ್ಣಿನ‌ ತೊಂದರೆಗೆ ಉಚಿತ ಚಿಕಿತ್ಸೆ ಮಾಡಿ ಕನ್ನಡಕ ಕೊಡಲಾಗುತ್ತಿದೆ. ರಾಜ್ಯಾದ್ಯಂತ ಹಾಗೂ ಜಿಲ್ಲೆಯಲ್ಲೂ ಈ ಯೋಜನೆ ಅನುಷ್ಠಾನಗೊಂಡಿದೆ. ಕಳೆದ ವರ್ಷ ಆರು ಸಾವಿರ ಜನರಿಗೆ ತಪಾಸಣೆ ಮಾಡಲಾಗಿತ್ತು. ಈ ವರ್ಷ ಕೂಡ ತಪಾಸಣೆ ಮಾಡಲಾಗುತ್ತಿದ್ದು, ಇದುವರೆಗೆ 1220 ಮಂದಿಗೆ ಕನ್ನಡಕ ವಿತರಣೆ ಮಾಡಲಾಗಿದೆ ಎಂದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡೂರಾವ್, ಡಾ.ಆನಂದ್, ಆರೋಗ್ಯರಕ್ಷಾ ಸಮಿತಿ ಸದಸ್ಯರಾದ ದಾಮೋದರ್, ಕೂಡಿಗೆ ಟಿ.ಪಿ.ಹಮೀದ್, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಆರೋಗ್ಯ ಇಲಾಖೆಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಸಮುದಾಯ‌ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಎಂ.ಎನ್.ಮಧುಸೂದನ್ ಹಾಗೂ ವೈದ್ಯರು, ಇಲಾಖಾ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡ್ರಗ್ಸ್‌ ಆರ್ಭಟಕ್ಕೆ ಮದ್ಯ ಮಾರಾಟವೇ ಕುಸಿತ!
24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಅಸ್ತು : ಸಿದ್ದರಾಮಯ್ಯ