ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆ ಬೆಳ್ಳಿಹಬ್ಬ ಊರಿಗೆ ಹಬ್ಬವಾಗಲಿ: ಸೀತಾರಾಮ ರೈ

KannadaprabhaNewsNetwork |  
Published : Aug 30, 2026, 02:15 AM IST
ಫೋಟೋ: ೨೯ಪಿಟಿಆರ್-ಸವಣೂರು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಬೆಳ್ಳಿಹಬ್ಬದ ಕುರಿತ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಬೆಳ್ಳಿಹಬ್ಬ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆಯು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಭಾಭವನದಲ್ಲಿ ಇತ್ತೀಚೆಗೆ ಸಂಸ್ಥೆಯ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪುತ್ತೂರು: ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಬೆಳ್ಳಿಹಬ್ಬ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆಯು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಭಾಭವನದಲ್ಲಿ ಇತ್ತೀಚೆಗೆ ಸಂಸ್ಥೆಯ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಡಿ. ೨೬ರಂದು ಸಂಸ್ಥೆಯ ಬೆಳ್ಳಿಹಬ್ಬ ಆಚರಿಸಲು ತೀರ್ಮಾನಿಸಲಾಯಿತು.

ಈ ಸಂದರ್ಭ ಮಾತನಾಡಿದ ಅವರು, ವಿದ್ಯಾರಶ್ಮಿನನ್ನ ತಂದೆ ಶೀಂಟೂರು ನಾರಾಯಣ ರೈ ಕನಸಿನ ಶಿಕ್ಷಣ ಸಂಸ್ಥೆಯಾಗಿದ್ದು, ಅವರ ಮಾತಿನಂತೆ ೨೦೦೧ರ ಮೇ ೨೩ರಂದು ಅವರ ಕೈಯಿಂದಲೇ ಉದ್ಘಾಟನೆಯಾಗಿತ್ತು. ಇದೀಗ ಸಂಸ್ಥೆಯು ೨೫ ವರ್ಷ ಪೂರೈಸಿರುವುದು ಹೆಮ್ಮೆಯ ವಿಷಯ. ಇದನ್ನು ಸಂಸ್ಥೆಯ ಹಬ್ಬವಾಗಿ ಮಾತ್ರವಲ್ಲ, ಇಡೀ ಸವಣೂರು ಸುತ್ತಮತ್ತಲಿನ ಪುಣ್ಚಪ್ಪಾಡಿ, ಸವಣೂರು, ಕುದ್ಮಾರು ಹಾಗೂ ಸರ್ವೆ ಗ್ರಾಮದ ಜನರು ಇಡೀ ದಿನ ಭಾಗವಹಿಸುವ ಹಬ್ಬದಂತೆ ಆಚರಿಸಬೇಕು ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಟ್ರಸ್ಟಿಗಳಾದ ಎನ್. ಸುಂದರ ರೈ, ರಶ್ಮಿ ಅಶ್ವಿನ್ ಶೆಟ್ಟಿ, ರಕ್ಷಕ- ಶಿಕ್ಷಕ ಸಂಘದ ಉಪಾಧ್ಯಕ್ಷ ಡಾ. ಜೀವನ್ ಪ್ರಕಾಶ್ ರೈ, ವಿದ್ಯಾರಶ್ಮಿ ಪ್ರತಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ರಾಜಲಕ್ಷ್ಮೀ ಎಸ್. ರೈ ಇದ್ದರು.

ಜಿಪಂ ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ, ಶಿಕ್ಷಕರಾದ ಶಿವರಾಮ ಏನೇಕಲ್, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಸಿಇಓ ಚಂದ್ರಶೇಖರ್ ಪಿ., ಸವಣೂರು ಗ್ರಾಪಂ ಮಾಜಿ ಸದಸ್ಯ ರಫೀಕ್ ಎಂ.ಎ., ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಕುಸುಮಾ ಪಿ. ಶೆಟ್ಟಿ ಕೆರೆಕೋಡಿ, ಉಪನ್ಯಾಸಕಿ ಪ್ರತಿಭಾ ಎಸ್. ಅವರು ಕಾರ್ಯಕ್ರಮದ ಕುರಿತಾಗಿ ವಿವಿಧ ಸಲಹೆ ನೀಡಿದರು.ಸವಣೂರು ವರ್ತಕರ ಸಂಘದ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಸವಣೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ನಡುಬೈಲು, ಕಾರ್ಯದರ್ಶಿ ಸತೀಶ್ ಬಲ್ಯಾಯ ಕನ್ನಡಕುಮೇರು, ಸವಣೂರು ಗ್ರಾಪಂ ಮಾಜಿ ಅಧ್ಯಕ್ಷೆ ರಾಜೀವಿ ಶೆಟ್ಟಿ ಕೆಡೆಂಜಿ, ತಾಪಂ ಮಾಜಿ ಸದಸ್ಯೆ ವಿಜಯ ಈಶ್ವರ ಗೌಡ ಕಾಯರ್ಗ, ಅಖಿಲಾ ನೆಕ್ರಾಜೆ, ನಾಟಿ ವೈದ್ಯ ವಾಸುದೇವ ಇಡ್ಯಾಡಿ, ಮಹಮ್ಮದ್ ಕಣಿಮಜಲು, ಪುತ್ತೂರು ವಕೀಲರ ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ ಕೊಮ್ಮಂಡ, ಶಿವರಾಮ ಗೌಡ ಮೆದು ಉಪಸ್ಥಿತರಿದ್ದರು. ವಿದ್ಯಾರಶ್ಮಿ ವಿದ್ಯಾಲಯದ ಪ್ರಾಚಾರ್ಯ ಶಶಿಕಲಾ ಎಸ್. ಆಳ್ವಸ್ವಾಗತಿಸಿದರು. ಉಪನ್ಯಾಸಕಿ ಕಸ್ತೂರಿ ವಂದಿಸಿದರು. ಚೇತನಾ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿವಿಧ ಸಮಸ್ಯೆಗಳ ಬಗ್ಗೆ ಮನವಿಗೆ ಆರೋಗ್ಯ ಇಲಾಖೆ ಸ್ಪಂದನೆ
ನಾರಾಯಣ ಗುರು ಜಯಂತಿ: ವಿದ್ಯಾರ್ಥಿ ವೇತನ ವಿತರಣೆ