ಕನ್ನಡಪ್ರಭ ವಾರ್ತೆ ತರೀಕೆರೆ
ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಚಿಕ್ಕಮಗಳೂರು, ತಾಲೂಕು ಅಡಳಿತ, ತಾಲೂಕು ಪಂಚಾಯಿತಿ ತರೀಕೆರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ತಾಲೂಕು ಎಂ.ಆರ್.ಡಬ್ಯೂ.ಯು.ಆರ್, ಡಬ್ಲ್ಯೂ .ವಿ.ಆರ್..ಡಬ್ಲ್ಯೂ ಅವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆ ಅಂಗವಾಗಿ ಏರ್ಪಾಡಾಗಿದ್ದ ವಿಶೇಷ ಚೇತನರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿಶ್ವಚೇತನರು ತಮ್ಮಲ್ಲಿರುವ ನ್ಯೂನತೆಗಳಿಂದ, ಸಮಸ್ಯೆಗಳಿಂದ ಕುಗ್ಗಬಾರದು. ಸರ್ಕಾರ ಹಾಗೂ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.ಪುರಸಭೆ ಮುಖ್ಯಾಧಿಕಾರಿ ಪ್ರಶಾಂತ್ ಮಾತನಾಡಿ, ಸರ್ಕಾರದಿಂದ ಸಿಗುವ ಸೌಲಭ್ಯಗಳು ವಿಶೇಷ ಚೇತನರಿಗೆ ತಲುಪುವಂತೆ ಮಾಡಲು ಯು.ಆರ್..ಡಬ್ಲ್ಯೂ.ವಿ.ಆರ್.ಡಬ್ಲ್ಯೂಗಳ ಪಾತ್ರ ಮುಖ್ಯವಾಗಿದೆ ಎಂದು ವಿವರಿಸಿದರು.
ತಾಲೂಕು ವಿಕಲಚೇತನರ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಅಕ್ರಂಬಾಷ ಮಾತನಾಡಿ, ಸರ್ಕಾರ ಹಾಗೂ ಜಿಲ್ಲಾ ವಿಕಲಚೇತನರ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮತ್ತು ಪೋಷಕರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಜವಾಬ್ದಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.