ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಶಿಶು, ಬಾಣಂತಿ ಸಾವು, ಆಯುಷ್ಮಾನ್‌ನಡಿ ಚಿಕಿತ್ಸೆಗೆ ಅವಕಾಶ ಸಿಗದೆ ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ತನ್ನ ಪಾತ್ರ ಏನು ಎಂಬ ಬಗ್ಗೆ ಜವಾಬ್ದಾರಿಯುತವಾಗಿ ವರ್ತಿಸದೆ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಿದೆ. ಇದು ನಾಚಿಕಗೇಡಿನ ಸಂಗತಿಯಾಗಿದೆ. ಬಾಣಂತಿಯರ ಸಾವು, ಔಷಧ ಪೂರೈಕೆಯಲ್ಲಿನ ನ್ಯೂನತೆಗಳ ಬಗ್ಗೆ ಮೊದಲೇ ವೈದ್ಯಾಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ಸರ್ಕಾರ ಕಣ್ಣುಚ್ಚಿ ಕುಳಿತಿರುವುದೇ ಇಷ್ಟೆಲ್ಲ ಗೊಂದಲಗಳಿಗೆ ಕಾರಣವಾಗಿದೆ ಎಂದರು.
ಪ್ರತಿಯೊಂದು ವಿಚಾರಕ್ಕೂ ಕೇಂದ್ರದತ್ತ ಕೈತೋರಿಸುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರಿಗೆ ಉಳಿದ ಬೆರಳುಗಳು ಕೂಡ ತಮ್ಮತ್ತ ತೋರಿಸುತ್ತವೆ ಎಂಬುದು ಜ್ಞಾಪಕದಲ್ಲಿರಲಿ. ಎಲ್ಲದಕ್ಕೂ ಕೇಂದ್ರದ ಮೇಲೆ ಆರೋಪಿಸಿದರೆ, ನೀವು ಏನು ಮಾಡುತ್ತೀರಿ? ಮೊಂಡು ಬುದ್ಧಿಯ ಕಾಂಗ್ರೆಸ್ ವಿರುದ್ಧ ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದರು.ಮುಖಂಡರಾದ ರಾಜಗೋಪಾಲ ರೈ, ಸತೀಶ್ ಪ್ರಭು, ಡೊಂಬಯ್ಯ ಅರಳ, ವರುಣ್‌ರಾಜ್, ಅರುಣ್ ಶೇಟ್, ವಸಂತ ಪೂಜಾರಿ ಇದ್ದರು.