ದೈವಜ್ಞ ಸಮಾಜದ ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸಲಿ

KannadaprabhaNewsNetwork |  
Published : Sep 07, 2026, 02:45 AM IST
ಪಟ್ಟಣದ ವಿಠಲ ದೇವಸ್ಥಾನದಲ್ಲಿ ದೈವಜ್ಞ ಸಮಾಜದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದೈವಜ್ಞ ಸಮಾಜದಿಂದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದರು. | Kannada Prabha

ಸಾರಾಂಶ

ದೈವಜ್ಞ ಸಮಾಜದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜದ ಕೀರ್ತಿ ಹೆಚ್ಚಿಸಬೇಕು ಎಂದು ದೈವಜ್ಞ ಸಮಾಜದ ತಾಲೂಕಾ ಅಧ್ಯಕ್ಷ ಸುಧಾಕರ ದೈವಜ್ಞ ಹೇಳಿದರು.

ಶಿಗ್ಗಾಂವಿ: ದೈವಜ್ಞ ಸಮಾಜದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜದ ಕೀರ್ತಿ ಹೆಚ್ಚಿಸಬೇಕು ಎಂದು ದೈವಜ್ಞ ಸಮಾಜದ ತಾಲೂಕಾ ಅಧ್ಯಕ್ಷ ಸುಧಾಕರ ದೈವಜ್ಞ ಹೇಳಿದರು.

ಪಟ್ಟಣದ ವಿಠಲ ದೇವಸ್ಥಾನದಲ್ಲಿ ದೈವಜ್ಞ ಸಮಾಜದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಎಲ್ಲ ವರ್ಗದ ಜನರು ಮುಖ್ಯವಾಹಿನಿಗೆ ಬರುತ್ತಿದ್ದಾರೆ. ಅದೇ ರೀತಿ ದೈವಜ್ಞ ಸಮಾಜದವರು ಸಹ ಶಿಕ್ಷಣ ಹಾಗೂ ಸಂಘಟನೆಯ ಮೂಲಕ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.

ಸಮಾಜದ ಮಾಜಿ ಅಧ್ಯಕ್ಷ ಪ್ರಕಾಶ ವೇರ್ಣೇಕರ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಸಂಘಟನೆ ಅತ್ಯಂತ ಪ್ರಮುಖವಾಗಿದೆ. ಸಂಘಟನೆಯ ಮೂಲಕ ಸಮಾಜದ ಎಲ್ಲ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯ ಎಂದರು.

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಾದ ಗೌರಿ ಆರ್. ವೇರ್ಣೇಕರ, ಸ್ಪಂದನಾ ಎಂ. ವೇರ್ಣೇಕರ, ರೀತಿಕಾ ಆರ್. ರಾಯ್ಕರ್, ರಂಜೀತಾ ಎಂ. ವೇರ್ಣೇಕರ ಹಾಗೂ ಸಂಧ್ಯಾ ಎನ್. ರಾಯ್ಕರ್ ಅವರನ್ನು ಸನ್ಮಾನಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಭೂದಾನಿ ವಾಸುದೇವ ರಾಯ್ಕರ್, ಚಂದ್ರಕಾಂತ ಪಾಲನಕರ, ದತ್ತಣ್ಣಾ ವೇರ್ಣೇಕರ, ವಿನಾಯಕ ರಾಯ್ಕರ್, ಮೋಹನ ರಾಯ್ಕರ್, ಪ್ರಕಾಶ ಪಾಲನಕರ, ರಾಮಕೃಷ್ಣ ರಾಯ್ಕರ್, ಸಂಕೇತ ರಾಯ್ಕರ್, ಮಂಜುನಾಥ ವೇರ್ಣೇಕರ, ಆನಂದ ವೇರ್ಣೇಕರ, ಜಗದೀಶ ಶೇಜವಾಡಕರ, ನಾಗೇಶ ರಾಯ್ಕರ್, ಸಂತೋಷ ರಾಯ್ಕರ್, ನಾಗರಾಜ ರಾಯ್ಕರ್, ವಿನೋದಾ ಕುರ್ಡೇಕರ, ಭೂಷಣ ರೇವಣಕರ, ರಾಘವೇಂದ್ರ ದೈವಜ್ಞ, ಗಣೇಶ ಕುಡತರಕರ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು. ರಾಯೇಶ್ವರ ರಾಯ್ಕರ್ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾವ್ಯಕ್ಕಿದೆ ಅಮಂಗಳ ನಾಶ ಮಾಡುವ ಶಕ್ತಿ: ಸ್ವರ್ಣವಲ್ಲೀ ಶ್ರೀ
ಪ್ಲಾಸ್ಟಿಕನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ: ರಾಘವೇಶ್ವರ ಶ್ರೀ