ಕಬ್ಬು ಖರೀದಿ ಪ್ರಕ್ರಿಯೆ ಪಾರದರ್ಶಕವಾಗಿರಲಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

KannadaprabhaNewsNetwork |  
Published : Oct 31, 2024, 12:51 AM IST
ಕಾರವಾರದಲ್ಲಿ ಕಬ್ಬು ಬೆಳೆಗಾರರ ಸಭೆ ನಡೆಯಿತು. | Kannada Prabha

ಸಾರಾಂಶ

ಕಬ್ಬು ಕಟಾವು, ಸಾಗಾಣಿಕೆ, ಖರೀದಿ, ತೂಕ ಸೇರಿದಂತೆ ಯಾವುದೇ ಪ್ರಕ್ರಿಯೆಗಳಲ್ಲಿ ಜಿಲ್ಲೆಯ ಕಬ್ಬು ಬೆಳಗಾರರಿಗೆ ವಂಚನೆಯಾಗದಂತೆ ಕಾರ್ಯನಿರ್ವಹಿಸುವಂತೆ ಡಿಸಿ. ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಕಾರವಾರ: ಸರ್ಕಾರದ ಆದೇಶದಂತೆ 2024- 25ನೇ ಸಾಲಿನ ಕಬ್ಬು ಅರೆಯುವ ಹಂಗಾಮು ನ. 15ರಿಂದ ಆರಂಭವಾಗಲಿದ್ದು, ಜಿಲ್ಲೆಯ ಕಬ್ಬು ಬೆಳಗಾರರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಜಿಲ್ಲೆಯಲ್ಲಿ ಸಂಪೂರ್ಣ ಪಾರದರ್ಶಕ ರೀತಿಯಲ್ಲಿ ಕಬ್ಬು ಖರೀದಿ ಪ್ರಕ್ರಿಯೆಯನ್ನು ನಡೆಸುವಂತೆ ಹಳಿಯಾಳದ ಇಐಡಿ ಪ್ಯಾರಿ ಕಂಪನಿಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲೆಯ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಮತ್ತು ಕಬ್ಬುಬೆಳೆಗಾರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 13,559.50 ಹೆಕ್ಟೇರ್‌ನಲ್ಲಿ ಕಬ್ಬು ಬೆಳೆಯಲಾಗಿದ್ದು, ಕಬ್ಬು ಬೆಳಗಾರರಿಗೆ ಪ್ರತಿ ಮೆ. ಟನ್‌ಗೆ ಗರಿಷ್ಠ ದರ ನೀಡಿ ಕಬ್ಬು ಖರೀದಿಸುವಂತೆ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳಿಗೆ ತಿಳಿಸಿದರು.

ಕಬ್ಬು ಕಟಾವು, ಸಾಗಾಣಿಕೆ, ಖರೀದಿ, ತೂಕ ಸೇರಿದಂತೆ ಯಾವುದೇ ಪ್ರಕ್ರಿಯೆಗಳಲ್ಲಿ ಜಿಲ್ಲೆಯ ಕಬ್ಬು ಬೆಳಗಾರರಿಗೆ ವಂಚನೆಯಾಗದಂತೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು.ಸಕ್ಕರೆ ಕಾರ್ಖಾನೆಯು ಕಬ್ಬಿನ ಉಪ ಉತ್ಪನ್ನಗಳಿಂದ ಪಡೆಯುವ ಲಾಭವನ್ನು ರೈತರಿಗೆ ಹಂಚಬೇಕು. ಕಬ್ಬು ಕಟಾವಿಗೆ ನಿಗದಿಪಡಿಸಿರುವ ಪ್ರದೇಶದ ವ್ಯಾಪ್ತಿಯ ಬಗ್ಗೆ ಪರಿಶೀಲಿಸಿ, ರೈತರಿಗೆ ಅನುಕೂಲವಾಗುವಂತೆ ವ್ಯಾಪ್ತಿ ಮಿತಿಯಲ್ಲಿ ಅಗತ್ಯ ಬದಲಾವಣೆ ಮಾಡಬೇಕು. ಕಬ್ಬು ಕಟಾವು ಮತ್ತು ಸಾಗಾಣಿಕಾ ವೆಚ್ಚವನ್ನು ಸರ್ಕಾರದ ಸುತ್ತೊಲೆ ಪ್ರಕಾರ ವಸೂಲಿ ಮಾಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ಮಾತನಾಡಿ, ಕಬ್ಬು ಅರೆಯುವ ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆ ಮತ್ತು ಕಬ್ಬು ಬೆಳೆಗಾರರು ಕಾನೂನು ಸುವ್ಯವಸ್ಥೆಗೆ ಭಂಗವಾಗದಂತೆ ಪರಸ್ಪರ ಸಮನ್ವಯದಿಂದ ವರ್ತಿಸಬೇಕು. ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಜಿಲ್ಲಾಡಳಿತ ಕಾರ್ಯೋನ್ಮುಖವಾಗಿದ್ದು, ಸಕ್ಕರೆ ಕಾರ್ಖಾನೆಯು ರೈತರ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದರು.ಇದೇ ವೇಳೆ ಹಿಂದಿನ ವರ್ಷ ಕಬ್ಬು ಕಟಾವು ಸಾಗಾಣಿಕೆ ವೆಚ್ಚ ಹೆಚ್ಚುವರಿ ಕಡಿತದ ಮೊತ್ತ ರೈತರಿಗೆ ₹120 ಹೆಚ್ಚುವರಿ ಹಣ ಪಾವತಿಸಬೇಕು. 2017- 18ರಿಂದ ಕಬ್ಬಿನ ಉಪ ಉತ್ಪನ್ನಗಳ ಲಾಭ ರೈತರಿಗೆ ಹಂಚಿಕೆ ಇದುವರೆಗೆ ಮಾಡದೇ ಇರುವುದರಿಂದ ಈ ಉಪ ಉತ್ಪನ್ನಗಳ ಆಡಿಟ್ ಮಾಡಿ ರೈತರಿಗೆ ಅದರ ಲಾಭ ಕಾನೂನಿನ ಪ್ರಕಾರ ನೀಡಬೇಕು. 2022- 23ನೇ ಸಾಲಿನ ಸರ್ಕಾರದ ಆದೇಶ ಮಾಡಿರುವ ಕಬ್ಬಿನ ಹೆಚ್ಚುವರಿ ದರ ರೈತರಿಗೆ ನೀಡಬೇಕು. ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಸರ್ಕಾರ ಜಾರಿ ಮಾಡಿರುವ ದ್ವಿಪಕ್ಷೀಯ ಒಪ್ಪಂದ ಪತ್ರ ಕೂಡಲೇ ಜಾರಿ ಮಾಡಬೇಕು ಮತ್ತಿತರ ವಿಷಯಗಳ ಬಗ್ಗೆ ರೈತರು ಮನವಿ ಸಲ್ಲಿಸಿದರು.ರೈತರ ಎಲ್ಲ ಮನವಿಗಳ ಬಗ್ಗೆ ರಾಜ್ಯ ಸಕ್ಕರೆ ಆಯುಕ್ತರ ಗಮನಕ್ಕೆ ತಂದು ಅಗತ್ಯ ಪರಿಹರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಕಾಂದೂ, ಉಪವಿಭಾಗಾಧಿಕಾರಿ ಕನಿಷ್ಕ, ಅಪರ ಜಿಲ್ಲಾಧಿಕಾರಿ ಸಾಜಿದ್ ಅಹ್ಮದ್ ಮುಲ್ಲಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!