ಕ್ರಿಯಾಶೀಲತೆ, ನೈಪುಣ್ಯತೆ, ಕಠಿಣ ಪರಿಶ್ರಮ ರೂಢಿಸಿಕೊಂಡಿರುವ ಕೊಡಗು ಜಿಲ್ಲೆಯ ಯುವ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವಂತಾಗಬೇಕು. ಈ ನಿಟ್ಟಿನಲ್ಲಿ ವಿಕಸಿತ ಭಾರತ ಯುವ ಸಂಸತ್ತು 2026 ಅಡಿಯಲ್ಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕ್ರಿಯಾಶೀಲತೆ, ನೈಪುಣ್ಯತೆ, ಕಠಿಣ ಪರಿಶ್ರಮ ರೂಢಿಸಿಕೊಂಡಿರುವ ಕೊಡಗು ಜಿಲ್ಲೆಯ ಯುವ ಪ್ರತಿಭೆಗಳು ರಾಷ್ಟ್ರ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವಂತಾಗಬೇಕು. ಈ ನಿಟ್ಟಿನಲ್ಲಿ ವಿಕಸಿತ ಭಾರತ ಯುವ ಸಂಸತ್ತು 2026 ಅಡಿಯಲ್ಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಕೊಡಗು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತ ಸರ್ಕಾರ ಮತ್ತು ಕೊಡಗು ವಿಶ್ವವಿದ್ಯಾಲಯ, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಕೊಡಗು ಸಂಯುಕ್ತಾಶ್ರಯದಲ್ಲಿ ವಿಕಸಿತ ಭಾರತ ಯುವ ಸಂಸತ್ತು 2026 ಅಡಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರಲ್ಲೂ ಪ್ರತಿಭೆ ಮತ್ತು ಕೌಶಲ್ಯಗಳಿವೆ. ಆದರೆ ಅದಕ್ಕೆ ಸೂಕ್ತ ವೇದಿಕೆ ಸಿಗಬೇಕಿದೆ. ಅಂತಹ ಅಧ್ಬುತ ವೇದಿಕೆಯನ್ನು ನಮ್ಮ ಕೊಡಗು ವಿಶ್ವವಿದ್ಯಾನಿಲಯವು ಯುವಜನತೆಗಾಗಿ ಕಲ್ಪಿಸಿಕೊಡುವಲ್ಲಿ ಕಾರ್ಯನಿರತವಾಗಿದೆ. ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ವಿಶ್ವವಿದ್ಯಾಲಯದ ಕುಲಸಚಿವರು ಮೌಲ್ಯಮಾಪನ ಪ್ರೊ. ಸುರೇಶ್ ಎಂ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸ್ಪರ್ಧೆಯ ತೀರ್ಪುಗಾರರಾಗಿ ಬೆಂಗಳೂರಿನ ಕುವೆಂಪು ಕಾನೂನು ಸಂಘದ ವಕೀಲರು ಮತ್ತು ನಿವೃತ್ತ ಹಿರಿಯ ನ್ಯಾಯಾಧೀಶರಾದ ಶಫೀರ್ ಅಹಮದ್ ಎ, ಏಕ್ ಭಾರತ್ ಅಭಿಯಾನ್ ಫೌಂಡೇಶನ್‌ನ ಸ್ಥಾಪಕರು ಮತ್ತು ಅಧ್ಯಕ್ಷರಾದ ಡಾ. ಹೊಟ್ಟೆಂಗಡ ಎ ಜೋಯಪ್ಪ, ಎಚ್.ಡಿ. ಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ ಪುಟ್ಟರಾಜು ಸಿ, ಮಡಿಲು ಗ್ರಾಮಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ತ್ರಿವೇಣಿ ಡಿ. ಎಂ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮೂರ್ತಿ ಕೆ. ಎಸ್ ಭಾಗವಹಿಸಿದ್ದರು.
ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಸುದರ್ಶನ ಕೆ ಎನ್ ಸ್ವಾಗತಿಸಿದರು. ಕನ್ನಡ ಅಧ್ಯಯನ ವಿಭಾಗದ ಡಾ. ಜಮೀರ್ ಅಹಮದ್ ನಿರೂಪಿಸಿದರು. ಕೊಡಗು ರಾಷ್ಟ್ರೀಯ ಸೇವಾ ಯೋಜನೆ ಘಟಕದ ನೋಡಲ್ ಅಧಿಕಾರಿಗಳು ಡಾ. ದಯಾನಂದ ಕೆ. ಸಿ. ವಂದಿಸಿದರು.ಸ್ಪರ್ಧೆಯಲ್ಲಿ ಕೊಡಗು ವಿಶ್ವವಿದ್ಯಾಲಯದ ಸಂಯೋಜಿತ ವಿವಿಧ ಪದವಿ ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರ ಪ್ರತಿಭೆಯ ಆಧಾರದ ಮೇಲೆ ನಿರ್ಣಾಯಕರು 5 ವಿದ್ಯಾರ್ಥಿಗಳನ್ನು ರಾಜ್ಯಮಟ್ಟದಲ್ಲಿ ಕೊಡಗು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲು ಆಯ್ಕೆ ಮಾಡಿದರು.ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು:1. ಬಿ ಕೆ ಇಶಾನಿ ದೇಚಮ್ಮ
2. ರಕ್ಷಿತಾ ಬಿ ಎಸ್3. ಮುತ್ತಮ್ಮ ಎನ್ ಬಿ 4. ದರ್ಶನ್ ಬಿ ಎಂ 5. ಮನ ಕೆ ಆರ್
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.