ಬ್ಯಾಡಗಿ: ಬುಡಕಟ್ಟು ಜನಾಂಗದವರು ಭಾರತದ ಮೂಲ ನಿವಾಸಿಗಳಾಗಿದ್ದು, ಸರ್ಕಾರದ ಸೌಲಭ್ಯಗಳನ್ನು ನೀಡುವ ಮೂಲಕ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.
ಬುಡಕಟ್ಟು ಜನರ ಪುನರ್ವಸತಿ ಎಂದರೆ ಸಾಮಾನ್ಯವಾಗಿ ಅಭಿವೃದ್ಧಿ ಯೋಜನೆಗಳನ್ನು ನೀಡುವುದಲ್ಲದೇ, ನೈಸರ್ಗಿಕ ವಿಕೋಪಗಳಿಂದ ಅವರನ್ನು ರಕ್ಷಿಸಬೇಕಾಗಿದೆ. ಬುಡಕಟ್ಟು ಸಮುದಾಯಗಳಿಗೆ ಅವರೆ ಸಾಂಪ್ರದಾಯಿಕ ಭೂಮಿಯಿಂದ ಸ್ಥಳಾಂತರಗೊಳಿಸಿ ಪುನರ್ವಸತಿ ಜತೆಗೆ ಜೀವನೋಪಾಯದ ಅವಕಾಶ ನೀಡುವ ಮೂಲಕ ನ್ಯಾಯಯುತ ಪರಿಹಾರ ನೀಡಬೇಕಾಗಿದೆ ಎಂದರು.
ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಬುಡಕಟ್ಟು ಜನರ ಕಳೆದುಹೋದ ಜೀವನಾಧಾರವನ್ನು ಬದಲಿಸಲು ಪರ್ಯಾಯ ಜೀವನೋಪಾಯದ ಅವಕಾಶಗಳನ್ನು ಒದಗಿಸುತ್ತಿದೆ. ಇದರಲ್ಲಿ ಕೌಶಲ್ಯ ಅಭಿವೃದ್ಧಿ, ವೃತ್ತಿಪರ ತರಬೇತಿ ಮತ್ತು ಹೊಸ ವ್ಯವಹಾರ ಪ್ರಾರಂಭಿಸಲು ಅಥವಾ ಉದ್ಯೋಗವನ್ನು ಹುಡುಕಲು ಅವರ ಬೆಂಬಲಕ್ಕೆ ನಿಲ್ಲಬೇಕಾಗಿದೆ. ಬುಡಕಟ್ಟು ಸಮುದಾಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಕೂಡ ಸಂರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಫಿರೋಜಶಾ, ಟಿಇಒ ಕೆ.ಎಂ. ಮಲ್ಲಿಕಾರ್ಜುನ, ಮುಖಂಡರಾದ ಸುರೇಶಗೌಡ ಪಾಟೀಲ, ರುದ್ರಣ್ಣ ಹೊಂಕಣದ, ಶಿವನಗೌಡ ವೀರನಗೌಡ್ರ, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.ವೀರಭದ್ರಯ್ಯ ಸ್ವಾಮಿಗಳ ಪುಣ್ಯಸ್ಮರಣೋತ್ಸವ
ಸಾನಿಧ್ಯವನ್ನು ಹಿರೇಮಣಕಟ್ಟಿಯ ಮುರುಘೇಂದ್ರಮಠದ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮಿಗಳು ವಹಿಸುವರು. ಅಧ್ಯಕ್ಷತೆಯನ್ನು ಹುಬ್ಬಳ್ಳಿಯ ರಾಜಶೇಖರ ಶಿವಾಚಾರ್ಯ ಸ್ವಾಮಿಗಳು, ಸಮ್ಮುಖವನ್ನು ಹಿರೇಬೆಂಡಿಗೇರಿಯ ವಿಶ್ವೇಶ್ವರ ಶಿವಾಚಾರ್ಯ ಸ್ವಾಮಿಗಳು, ಹಿರೇಮಣಕಟ್ಟಿ ಶಿದ್ದಯ್ಯ ಶಾಸ್ತ್ರಿಗಳು ವಹಿಸುವರು.ಮುಖ್ಯ ಅತಿಥಿಗಳಾಗಿ ಸಂಸದ ಬಸವರಾಜ ಎಸ್. ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಯಾಸೀರ ಅಹ್ಮದಖಾನ ಪಠಾಣ ಇತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.