ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಎಲ್ಲ ಸಮುದಾಯಗಳಿಗೂ ಅವಕಾಶ:
ಪ್ರಸ್ತುತ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದ ಅಭ್ಯರ್ಥಿಗಳು ಹೆಸರು ನೋಂದಾಯಿಸಿಲ್ಲ. ಆದ್ದರಿಂದ ಅರ್ಹರು ಕೂಡಲೇ ತಮ್ಮ ಹೆಸರನ್ನು ನೋಂದಾಯಿಸಿ, ಸೌಲಭ್ಯಗಳ ಲಾಭ ಪಡೆಯಬೇಕು. ನಗರ ಮತ್ತು ಪಟ್ಟಣ ಪ್ರದೇಶ ಮಾತ್ರವಲ್ಲದೇ ಗ್ರಾ.ಪಂ. ಮಟ್ಟದಲ್ಲಿಯೂ ಅಭ್ಯರ್ಥಿಗಳು ಹೆಸರು ನೋಂದಾಯಿಸಬಹುದು. ಈ ಸಂಬಂಧ ಈಗಾಗಲೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆಗಳನ್ನು ಆಯೋಜಿಸಿ ಮಾಹಿತಿ ನೀಡಿ, ಗುರಿ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ ವಿಶ್ವಕರ್ಮ ಸಮುದಾಯದವರಲ್ಲದೇ, ಇತರೇ ಎಲ್ಲ ಸಮುದಾಯವರು ಯೋಜನೆಯಡಿ ಹೆಸರು ನೋಂದಾಯಿಸಬಹುದು ಎಂದು ಹೇಳಿದರು.ಪ್ರಮಾಣಪತ್ರ- ಉಪಕರಣ:
ಅಲ್ಲದೇ, ತರಬೇತಿ ಪಡೆದ ಕುಶಲಕರ್ಮಿಗಳಿಗೆ ಶೇ.5ರ ಬಡ್ಡಿ ದರದಲ್ಲಿ ₹1 ಲಕ್ಷ ಸಾಲ ಸೌಲಭ್ಯ, ನಂತರ 15 ದಿನಗಳ ಉನ್ನತಮಟ್ಟದ ತರಬೇತಿ ನೀಡಿ, ಮೊದಲು ಪಡೆದ ₹1 ಲಕ್ಷ ಸಾಲ ಮರುಪಾವತಿಯಾದ ನಂತರ ₹2 ಲಕ್ಷ ಸಾಲ ನೀಡಲಾಗುವುದು. ಅಲ್ಲದೇ, ಕುಶಲಕರ್ಮಿಗಳು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುವುದು ಎಂದರು.
ಸಭೆಯಲ್ಲಿ ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಗಣೇಶ್, ಉಪನಿರ್ದೇಶಕ ವೀರೇಶ್ ನಾಯ್ಕ್, ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್, ನಗರ ಯೋಜನಾ ನಿರ್ದೇಶಕ ಮನೋಹರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅಮರನಾಥ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.- - -
ಬಾಕ್ಸ್-1 ಈ ಕುಶಲಕರ್ಮಿಗಳು ನೋಂದಾಯಿಸಬಹುದುಈ ಯೋಜನೆಯಡಿ ಬಡಗಿಗಳು, ಅಕ್ಕಸಾಲಿಗರು, ಕುಂಬಾರರು, ಶಿಲ್ಪಿಗಳು, ಕುಶಲಕರ್ಮಿಗಳು, ಮೇಸ್ತ್ರಿಗಳು, ದರ್ಜಿಗಳು, ದೋಣಿ ತಯಾರಿಸುವವರು, ದುರಸ್ತಿ ಮತ್ತು ಸೇವೆ ಒದಗಿಸುವ ಅಸಂಘಟಿತ ವಲಯದ ಕುಶಲಕರ್ಮಿಗಳು, ಕಮ್ಮಾರ, ಸುತ್ತಿಗೆ ಮತ್ತು ಟೂಲ್ ಕಿಟ್ ತಯಾರಿಕೆ, ಬೀಗ ತಯಾರಕರು, ಆಭರಣ ತಯಾರಿಕೆ, ಚರ್ಮಗಾರಿಕೆ, ಹೂ ಮಾಲೆ ತಯಾರಕರು, ದೋಬಿ, ಮೀನಿನ ಬಲೆ ತಯಾರಿಸುವಂತಹ ಚಟುವಟಿಕೆಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಡಿಸಿ ಹೇಳಿದರು.- - - ಬಾಕ್ಸ್-2 ಕುಟುಂಬದಲ್ಲಿ ಒಬ್ಬರು ಮಾತ್ರ ಅರ್ಹರು ಹೆಸರು ನೋಂದಾಯಿಸಿಕೊಳ್ಳುವ ಫಲಾನುಭವಿಯು ಸ್ವಯಂ ಉದ್ಯೋಗಿಯಾಗಿದ್ದು, 18 ವರ್ಷ ಮೇಲ್ಪಟ್ಟವರಾಗಿರಬೇಕು. ಒಂದು ಕುಟುಂಬದಲ್ಲಿ ಓರ್ವರು ಮಾತ್ರ ನೋಂದಾಯಿಸಿಕೊಳ್ಳಬಹುದು. ಕುಟುಂಬದಲ್ಲಿ ಯಾವುದೇ ಸದಸ್ಯರು ಸರ್ಕಾರಿ ಕೆಲಸದಲ್ಲಿರಬಾರದು. ಕಳೆದ 5 ವರ್ಷಗಳ ಅವಧಿಯಲ್ಲಿ ಪಿ.ಎಂ. ಇ.ಜಿ.ಪಿ., ಮುದ್ರಾ ಮತ್ತು ಪಿ.ಎಂ. ಸ್ವನಿಧಿ ಸಾಲಗಳನ್ನು ಪಡೆದಿರಬಾರದು. ಮುದ್ರಾ ಮತ್ತು ಪಿ.ಎಂ.ಸ್ವ-ನಿಧಿ ಯೋಜನೆಗಳಲ್ಲಿ ಸಾಲ ಪಡೆದು ಪೂರ್ಣ ಮರುಪಾವತಿ ಮಾಡಿದ ಕುಶಲಕರ್ಮಿಗಳು ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
- - - -13KPSMG04.jpg:ಶಿವಮೊಗ್ಗ ಡಿಸಿ ಸಭಾಂಗಣದಲ್ಲಿ ಪಿ.ಎಂ.ವಿಶ್ವಕರ್ಮ ಯೋಜನೆಯ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾತನಾಡಿದರು.