ಕನ್ನಡಪ್ರಭ ವಾರ್ತೆ ಯಾದಗಿರಿ
ನಗರದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ರಾಯಚೂರು ವಿಶ್ವವಿದ್ಯಾಲಯದ ಪ್ರಸಾರಾಂಗದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪ್ರಚಾರ ಉಪನ್ಯಾಸ ಮಾಲೆಯನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಮಕ್ಕಳು ನಾಳಿನ ನಾಗರಿಕರು. ಸಮೃದ್ಧ ನಾಗರಿಕ ಸಮಾಜ ನಿರ್ಮಾಣವಾಗಬೇಕಾದರೆ ಉತ್ತಮ ನಾಗರಿಕರಿದ್ದಾಗ ಅದು ಸಾಧ್ಯವಾಗುತ್ತದೆ. ಅದಕ್ಕಾಗಿ ಮೌಲ್ಯಾಧಾರಿತ ಹಾಗೂ ನೀತಿಯುಕ್ತವಾದ ಗುಣಮಟ್ಟದ ಶಿಕ್ಷಣ ನೀಡುವದು ಅತ್ಯವಶ್ಯವೆಂದು ಹೇಳಿದರು.
ಜ್ಞಾನ ಪ್ರಸಾರ ಮಾಡುವಲ್ಲಿ ಪ್ರಸಾರಾಂಗ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಸಾರಾಂಗದ ವಿಷಯಗಳು ಜನ ಸಾಮಾನ್ಯರಿಗೂ ತಲುಪುವಂತಾಗಬೇಕು. ಹಳ್ಳಿಗರಿಗೆ ಶಿಕ್ಷಣದ ಮಹತ್ವವನ್ನು ತಿಳಿಸಿಕೊಡುವ ಕೆಲಸವನ್ನು ಪ್ರಸಾರಾಂಗ ಮಾಡಬೇಕೆಂದು ಸಲಹೆ ನೀಡಿದರು.ಜಿಪಂ ಉಪ ನಿರ್ದೇಶಕ ಕೆ.ಕುಮಲಯ್ಯ ಮುಖ್ಯ ಅತಿಥಿಗಳಾಗಿ ಮಾತನಾಡಿ, 371 ಜೆ ಕಲಂ ಜಾರಿಯಿಂದ ಈ ಭಾಗದಲ್ಲಿ ಶೈಕ್ಷಣಿಕ ರಂಗದಲ್ಲಿ ಮತ್ತು ಉದ್ಯೋಗ ಕ್ಷೇತ್ರದಲ್ಲಿ ವಿಫುಲ ಅವಕಾಶ ಲಭಿಸುವಂತಾಗಿದೆ ಎಂದರು. ಕಲ್ಯಾಣ ಕರ್ನಾಟಕ ಅಭವೃದ್ಧಿ ಮಂಡಳಿಯ ಒಟ್ಟು ಅನುದಾನದಲ್ಲಿ ಶೇ.25 ರಷ್ಟು ಹಣವನ್ನು ಶಿಕ್ಷಣ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ವ್ಯಯ ಮಾಡಲಾಗುತ್ತಿದ್ದು, ಶಿಕ್ಷಣ ಸಂಸ್ಥೆಗಳು ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನುರಿತ ಮತ್ತು ತಜ್ಞ ವಿದ್ವಾಂಸರಿಂದ ಮಂಡಿತವಾಗುವ ಪ್ರಬಂಧಗಳ ವಿಷಯವನ್ನು ವಿದ್ಯಾರ್ಥಿಗಳು ಚೆನ್ನಾಗಿ ಅರಿತುಕೊಂಡಾಗ ಮಾತ್ರ ಪ್ರಸಾರಾಂಗದ ಉದ್ದೇಶ ಸಫಲವಾಗುತ್ತದೆ ಎಂದರು.