ದೇವೇಗೌಡರ ಇಡೀ ಕುಟುಂಬ ರಾಜಕೀಯಕ್ಕೆ ರಾಜೀನಾಮೆ ನೀಡಲಿ

KannadaprabhaNewsNetwork |  
Published : May 03, 2024, 01:01 AM ISTUpdated : May 03, 2024, 08:42 AM IST
ಬೆಳಗಾವಿಯಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು | Kannada Prabha

ಸಾರಾಂಶ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಯಾರೂ ಪಾತ್ರ ವಹಿಸಿದ್ದಾರೆ ಎಂಬುವುದು ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ. ಇದು ಕರ್ನಾಟಕ ರಾಜಕೀಯದಲ್ಲಿ ತಲೆ ತಗ್ಗಿಸುವ ಕೆಲಸವಾಗಿದೆ.  

  ಬೆಳಗಾವಿ :  ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಯಾರೂ ಪಾತ್ರ ವಹಿಸಿದ್ದಾರೆ ಎಂಬುವುದು ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ. ಇದು ಕರ್ನಾಟಕ ರಾಜಕೀಯದಲ್ಲಿ ತಲೆ ತಗ್ಗಿಸುವ ಕೆಲಸವಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಇಡೀ ಕುಟುಂಬ ರಾಜಕೀಯಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆಗ್ರಹಿಸಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಕರ್ಮಕಾಂಡದಿಂದ ಇಡೀ ಕರ್ನಾಟಕದ ರಾಜಕೀಯ ಹೆಸರನ್ನು ಕೆಡಿಸಿದ್ದಾನೆ ಎಂದು ಕಿಡಿಕಾರಿದರು.

ಕಳೆದ‌ 2014ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನರೇಂದ್ರ ಮೋದಿ ಪ್ರಧಾನಿಯಾದರೇ ದೇಶ ಬಿಡುತ್ತೇನೆ ಎಂದಿದ್ದರು. ಈಗ ಅವರ ಪಕ್ಕ ಕುಳಿತುಕೊಂಡು ಚುನಾವಣೆಯ ಪ್ರಚಾರ ನಡೆಸಿದ್ದಾರೆ ಎಂದು ಲೇವಡಿ ಮಾಡಿದರು.

ಲೋಕಸಭಾ ‌ಚುನಾವಣೆ ರಾಷ್ಟ್ರದ ಮಹತ್ವದ ಚುನಾವಣೆಯಾಗಿದೆ. ಪ್ರಧಾನಿ ನರೇಂದ್ರ ‌ಮೋದಿ ಅವರೇ ಮುಂದುವರೆಸಿಕೊಂಡು ಹೋದರೇ ಲೋಕಸಭಾ, ವಿಧಾನಸಭಾ, ಸ್ಥಳೀಯ ಚುನಾವಣೆ ಒಂದೇ ಸಲ‌ ನಡೆಯುವ ಹಾಗೆ ಮಾಡುತ್ತಾರೆ. ಇದು ವಿಪರ್ಯಾಸ ಎಂದರು.

ತಂತ್ರಜ್ಞಾನ ಮುಂದುವರೆದ ಕಾಲದಲ್ಲಿ 3 ತಿಂಗಳುಗಳ ಕಾಲ ಚುನಾವಣೆ ನಡೆಸಿದ್ದು ಏಕೆ? ಉತ್ತರದಿಂದ ಕನ್ಯಾಕುಮಾರಿವರೆಗೂ ಚುನಾವಣೆಯ ಪ್ರಚಾರ ನಡೆಸಲು ಅನುಕೂಲ ಮಾಡಿಕೊಳ್ಳಲು ಎಂದು ಆರೋಪಿಸಿದರು.

ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ ಮಿಲಿಟರಿ ಆಡಳಿತ ತರಲು‌ ಹೊರಟಿದ್ದಾರೆ. ಬಿಜೆಪಿ ಪ್ರಣಾಳಿಕೆಯಲ್ಲಿ ಮೋದಿ ಗ್ಯಾರಂಟಿ ಎಂದು ನಮೂದಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಬದಲಾವಣೆ ಮಾಡುತ್ತಿದ್ದಾರೆ. ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿರುವುದನ್ನು ಮರೆತ್ತಿದ್ದಾರೆ ಎಂದರು.

ಬಿಜೆಪಿ ಪ್ರಣಾಳಿಕೆ ಪಕ್ಷದಲ್ಲ. ಇದು ಮೋದಿ ಗ್ಯಾರಂಟಿ. ಇದನ್ನು ಜನ ನಂಬುವರೇ?. ಚುನಾವಣಾ ಬಾಂಡ್ ಮೇಲೆ ಕೋಟ್ಯಂತರ ರುಪಾಯಿ. ಭ್ರಷ್ಟಾಚಾರ ಮಾಡಿದ್ದಾರೆ. ಇದರ ಬಗ್ಗೆ ಕೇಂದ್ರ ಸರ್ಕಾರ ಯಾವ ಕ್ರಮಕೈಗೊಂಡಿದೆ ಎಂದು ಪ್ರಶ್ನಿಸಿದರು.

ಕೇಂದ್ರದಲ್ಲಿ ಯುಪಿಎ ಸರ್ಕಾರದ ಸಂದರ್ಭದಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ರೈತರ ಮೇಲಿನ ಸಂಪೂರ್ಣ ಸಾಲಮನ್ನಾ ಮಾಡಲಾಗಿತ್ತು. ಆದರೆ, ನರೇಂದ್ರ ಮೋದಿ ಒಬ್ಬ ರೈತನ ಸಾಲ ಮಾಡಿಲ್ಲ. ಇದು ಜನರಿಗೆ ಕೆಟ್ಟ ದಿನ, ಮೋದಿಗೆ ಒಳ್ಳೆಯ ದಿನವಾಗಿದೆ ಎಂದು ವ್ಯಂಗ್ಯವಾಡಿದರು.

ಶಾಸಕರಾದ ಆಸೀಫ್ ಸೇಠ್, ನಾಗರಾಜ ಯಾದವ, ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್‌ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಇನ್ನಿತರರು ಉಪಸ್ಥಿತರಿದ್ದರು.ಬೆಳಗಾವಿ ಲೋಕಸಭಾ ಮತಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ‌ಜಗದೀಶ್ ಶೆಟ್ಟರ್ ವಿಶ್ವಾಸ ದ್ರೋಹಿ. ಅವರು ಮುಖ್ಯಮಂತ್ರಿಯಾಗಿದ್ದರು ಎನ್ನುವುದು ಜನರು ಮರೆತ್ತಿದ್ದಾರೆ. ಗಂಡನನ್ನು ಕಳೆದಕೊಂಡ ವಿಧವೆಗೆ ಟಿಕೆಟ್ ತಪ್ಪಿಸಿ ಶೆಟ್ಟರ್ ಪಡೆದುಕೊಂಡಿದ್ದಾರೆ.

-ವೀರಪ್ಪ ಮೊಯ್ಲಿ, ಮಾಜಿ ಸಿಎಂ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಸ್ಯೆ ಬಗೆಹರಿದ್ರೆ 6 ತಿಂಗಳಲ್ಲಿ 1 ಲಕ್ಷ ನೇಮಕಾತಿ : ಸಾರಿಗೆ ಸಚಿವ
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಇಡೀ ಊರಿನ ರೈತರಿಗೆ ಪರಿಹಾರ