ಕನ್ನಡಪ್ರಭ ವಾರ್ತೆ ಹನೂರು
ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಭೆಯಲ್ಲಿ ಮಾತನಾಡಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬರುವಂತಹ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸಲು ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಆದರೆ ಕೆಲವೊಂದು ಕಾಮಗಾರಿಗಳ ನಿರ್ಮಾಣದ ಸಮಯ ಮುಗಿದಿದ್ದರೂ ಪೂರ್ಣಗೊಂಡಿಲ್ಲ. ಮುಖ್ಯಮಂತ್ರಿಗಳು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಬಂದಿದ್ದರೆ ಅವರಿಗೆ ಏನು ಉತ್ತರ ಹೇಳಬೇಕಿತ್ತು.? ಆದಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.ಭಕ್ತರ ವಾಸ್ತವಕ್ಕಾಗಿ ನಿರ್ಮಾಣ ಮಾಡುತ್ತಿರುವ 386 ವಸತಿಗೃಹ ಕಾಮಗಾರಿಯನ್ನು ಇನ್ನು ಮೂರು ತಿಂಗಳ ಒಳಗೆ ಪೂರ್ಣಗೊಳಿಸಬೇಕು. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಇಲ್ಲದಿದ್ದರೆ ಅನುದಾನ ಬಿಡುಗಡೆ ಮಾಡುವುದಿಲ್ಲ ಎಂದರು. ಕ್ಷೇತ್ರದಲ್ಲಿ ಖಾಲಿ ನಿವೇಶನಗಳಲ್ಲಿ ತೋಟಗಾರಿಕೆ ಇಲಾಖೆ ಪಾರ್ಕ್ ಅಥವಾ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಮಾತನಾಡಿ, ಮಹದೇಶ್ವರ ಬೆಟ್ಟದಲ್ಲಿನ ವಸತಿ ಗೃಹಗಳು ನಿರ್ಮಾಣ ಮಾಡಿ ಹಲವಾರು ವರ್ಷಗಳು ಕಳೆದಿರುವುದರಿಂದ ದುರಸ್ತಿ ಕಾರ್ಯವಾಗಬೇಕಿದೆ. ಗಿರಿ ದರ್ಶಿನಿ, ನಾಗಮಲೆ ಭವನ, ಜೇನುಮಲೆ ಭವನ ಮಹದೇಶ್ವರ ಭವನ ಸೇರಿದಂತೆ ಇನ್ನಿತರ ವಸತಿ ಗೃಹಗಳು ದುರಸ್ತಿಗೊಂಡಿರುವುದರಿಂದ ಬರುವಂತಹ ಭಕ್ತಾದಿಗಳಿಗೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ನಂತರ ಶಾಸಕರು ಮಾತನಾಡಿ, ಭಕ್ತರ ಅಗತ್ಯ ಸೌಲಭ್ಯಕ್ಕಾಗಿ ದುರಸ್ತಿ ಕಾರ್ಯ ಪ್ರಾರಂಭಿಸಿ ಭಕ್ತರಿಗೆ ಇನ್ನಷ್ಟು ಮೂಲಭೂತ ಸೌಲಭ್ಯ ಕಲ್ಪಿಸಿಕೊಡಿ ಎಂದು ಒಪ್ಪಿಗೆ ಸೂಚಿಸಿದರು.