ಯೋಜನೆಗಳ ಸೌಲಭ್ಯ ತಲುಪಿಸುವ ಕಾರ್ಯವಾಗಲಿ: ಜಿಲ್ಲಾಧಿಕಾರಿ ಸಂಗಪ್ಪ

KannadaprabhaNewsNetwork |  
Published : Sep 20, 2025, 01:02 AM IST
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯೋಜನೆಗಳ ಸೌಲಭ್ಯ ತಲುಪಿಸುವ ಕಾರ್ಯವಾಗಲಿ : ಡಿಸಿ | Kannada Prabha

ಸಾರಾಂಶ

ವಿವಿಧ ಇಲಾಖೆಯ ಸಹಭಾಗೀತ್ವದಲ್ಲಿ ಮಹಿಳೆ ಮತ್ತು ಮಕ್ಕಳಿಗಾಗಿರುವ ಸರ್ಕಾರದ ಯೋಜನೆಯಗಳನ್ನು ಅರ್ಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಲುಪಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ವಿವಿಧ ಇಲಾಖೆಯ ಸಹಭಾಗೀತ್ವದಲ್ಲಿ ಮಹಿಳೆ ಮತ್ತು ಮಕ್ಕಳಿಗಾಗಿರುವ ಸರ್ಕಾರದ ಯೋಜನೆಯಗಳನ್ನು ಅರ್ಹ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಲುಪಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಾಂತ್ವನ ಕೇಂದ್ರಗಳ ಬಗ್ಗೆ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ತಿಳಿವಳಿಕೆ ಮೂಡಿಸಲು ಕ್ರಮ ಕೈಗೊಳ್ಳುವ ಕೆಲಸ ಸಂಸ್ಥೆಗಳಾಗಿದೆ. ಪ್ರಧಾನ ಮಂತ್ರಿ ಮಾತೃ ವಂದನೆ ಯೋಜನೆಯಡಿ ಗರ್ಭಿಣಿ ಮಹಿಳೆಯರಿಗೆ ನೀಡಲಾಗುತ್ತಿರುವ ಸಹಾಯಧನ ಸಮರ್ಪಕವಾಗಿ ಬಳಕೆಯಾಗುತ್ತಿರುವ ಬಗ್ಗೆ ಪರಿಶೀಲಿಸಬೇಕು. ಗರ್ಭಿಣಿ ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಲು ಅಂಗನವಾಡಿ ಕಾರ್ಯಕರ್ತರು ಮನವರಿಕೆ ಮಾಡಬೇಕು. ಜೊತೆಗೆ ಪ್ರತಿಗರ್ಭಿಣಿಯರಿಗೂ ಪರೀಕ್ಷೆ ನಡೆಸಿ, ಹತ್ತಕ್ಕಿಂತ ಕಡಿಮೆ ಹಿಮೋಗ್ಲೋಬಿನ್ ಇರುವ ಮಹಿಳೆಯರಿಗೆ ಆರೋಗ್ಯದ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಇಲಾಖೆಯ ಕಟ್ಟಡ ನಿರ್ಮಾಣ ಮಾಡಲು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿವೇಶಗಳನ್ನು ಗುರುತಿಸಿ ಇಲಾಖೆಗೆ ಹಸ್ತಾಂತರ ಮಾಡಿಕೊಳ್ಳಲು ಅಗತ್ಯ ಕ್ರಮವಹಿಸಬೇಕು. ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ, ವಿದ್ಯುತ್‌, ಫ್ಯಾನ್, ನೀರು ಇತ್ಯಾದಿ ಮೂಲ ಸೌಕರ್ಯ ಕಲ್ಪಿಸಲು ಹಾಗೂ ಕಾಲಕಾಲಕ್ಕೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು. ಈ ಕುರಿತು ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲು ತಿಳಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ ಪರಸನ್ನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಸುಮಂಗಲಾ ಹಿರೇಮನಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ವೀಣಾ ಸೇರಿದಂತೆ ಆಯಾ ತಾಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.----ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಪ್ರತಿ ದಿನ ಮೊಟ್ಟೆಯನ್ನು ವಿತರಿಸುವ ಬಗ್ಗೆ ಅನುದಾನ ಹಾಗೂ ಅನುಮತಿಗಾಗಿ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದರು. ಅಪೌಷ್ಟಿಕತೆ ಜಿಲ್ಲೆಯಿಂದ ಹೋಗಲಾಡಿಸುವಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಖಿ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಿ ಅವನ್ನು ಪೊಲೀಸ್ ಠಾಣೆಗೆ ಲಿಂಕ್ ಮಾಡಬೇಕೆಂದು ಹಾಗೂ ಪ್ರತಿದಿನ ರಾತ್ರಿ ಪೊಲೀಸ್ ಬೀಟ್ ಹಾಕುವ ವ್ಯವಸ್ಥೆ ಮಾಡಬೇಕು.

- ಸಂಗಪ್ಪ ಜಿಲ್ಲಾಧಿಕಾರಿ ಬಾಗಲಕೋಟೆ

PREV

Recommended Stories

ಶಿವಯೋಗಿ ಸೊಸೈಟಿಗೆ 20.97 ಲಕ್ಷ ಲಾಭ
ಯುವಜನತೆಗೆ ರಕ್ತದಾನದ ಮಹತ್ವ ತಿಳಿಸಿಕೊಡಿ