ಭಾರತ ಕಮ್ಯುನಿಸ್ಟ್ ಪಕ್ಷದ ಹೂವಿನಹಡಗಲಿ ತಾಲೂಕು ಸಮ್ಮೇಳನಕ್ಕೆ ಚಾಲನೆ
ಶ್ರಮಿಕ ವರ್ಗವು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಉಸ್ತುವಾರಿ ಎಚ್.ಎಂ. ಸಂತೋಷ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಭಾರತ ಕಮ್ಯುನಿಸ್ಟ್ ಪಕ್ಷದ 4ನೇ ತಾಲೂಕು ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿ, ಶ್ರಮಿಕ ವರ್ಗವು ಹಕ್ಕುಗಳಿಗಾಗಿ ಬೀದಿಗಳಿದು ಹೋರಾಟ ಮಾಡುತ್ತಾರೆ, ಆದರೆ ಬಂಡವಾಳಶಾಹಿ ಪರ ಸರ್ಕಾರ ನಮ್ಮ ಹಕ್ಕು ಕಸಿಯುವ ಪ್ರಯತ್ನ ಮಾಡುತ್ತಿದೆ. ಆದ್ದರಿಂದ ಶ್ರಮಿಕರ ಪರವಾಗಿ ಕೆಲಸ ಮಾಡುವಂತಹ ವ್ಯಕ್ತಿಗಳನ್ನು, ಗ್ರಾಮ ಮಟ್ಟದಿಂದ ಆಯ್ಕೆ ಮಾಡಲು ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳಬೇಕು, ಆ ಮೂಲಕ ಬಂಡವಾಳ ಶಾಹಿ ಪರ ಸರ್ಕಾರಗಳಿಗೆ ಎಚ್ಚರಿಕೆ ನೀಡುವಂತಾಗಬೇಕಿದೆ ಎಂದರು.ಪ್ರಧಾನಿ ನರೇಂದ್ರ ಮೋದಿಯವರು ಅಚ್ಛೇದಿನ್ ಭಾಷಣಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಹೊಸ ಉದ್ಯೋಗ ಸೃಷ್ಟಿಸದೇ, ಇವರು ಉದ್ಯೋಗ ಕಡಿತದಿಂದ ಯುವ ಜನರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ನಿತ್ಯ ಬೆಲೆ ಏರಿಕೆ, ಕೃಷಿ ವಿರೋಧಿ ನೀತಿಗಳಿಂದ ದೇಶದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಮಿಕರ ಹೋರಾಟ ಗಟ್ಟಿಗೊಳಿಸಬೇಕಿದೆ. ದುಡಿಯುವ ವರ್ಗದ ಧ್ವನಿಯಾಗುವ ಆಶಯದೊಂದಿಗೆ ಸಮ್ಮೇಳನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಸಿಪಿಐ ತಾಲೂಕು ಮಂಡಳಿ ಕಾರ್ಯದರ್ಶಿ ಸುರೇಶ ಹಲಗಿ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಫೆಡರೇಷನ್ ಅಧ್ಯಕ್ಷೆ ಬಿ.ಜಯಲಕ್ಷ್ಮಿ, ಬಿಸಿಯೂಟ ಫೆಡರೇಷನ್ ಅಧ್ಯಕ್ಷೆ ಎಚ್.ಅನಸೂಯಮ್ಮ ಮಾತನಾಡಿದರು. ವಿವಿಧ ಸಂಘಟನೆಗಳ ಮುಖಂಡರಾದ ಪಿ.ಚಮನ್ ಸಾಬ್, ಗಂಗಾಧರ, ಪಿ.ಕವಿತಾ, ಡಿ.ಮುಕುಂದಗೌಡ, ಬಸವರಾಜ ಸಂಶಿ, ಎಚ್.ದಂಡೆಮ್ಮ ಉಪಸ್ಥಿತರಿದ್ದರು. ಇಪ್ಟಾ ಕಲಾವಿದ ಎ.ಡಿ. ದ್ವಾರಕೀಶ ಸಂಗಡಿಗರು ಕ್ರಾಂತಿಗೀತೆ ಹಾಡಿದರು.ಸತ್ಯ ಹೊರ ಹೊರ ತರಲಿ