ಯುವಪೀಳಿಗೆ ಮಾದಕ ವಸ್ತು ವ್ಯಸನದಿಂದ ಹೊರಬರಲಿ: ಡಾ. ದುರಗೇಶ್‌ ಕೆ.ಆರ್.

KannadaprabhaNewsNetwork |  
Published : Nov 21, 2025, 02:30 AM IST
ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಾಯಿತು.  | Kannada Prabha

ಸಾರಾಂಶ

ನಶೆ ಮನುಷ್ಯನ ಬದುಕನ್ನೇ ಬಲಿ ತೆಗೆದುಕೊಳ್ಳುವ ಮಹಾ ವ್ಯಸನ. ಯುವಪೀಳಿಗೆಯನ್ನು ರಕ್ಷಿಸಲು ನಶಾಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಸಮೂಹ ಹೊಣೆಗಾರಿಕೆ.

ಗದಗ: ನಶಾಮುಕ್ತ ಭಾರತ ಅಭಿಯಾನ ಯೋಜನೆಯ 5ನೇ ವಾರ್ಷಿಕೋತ್ಸವ ನಿಮಿತ್ತ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಜರುಗಿತು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್‌ ಕೆ.ಆರ್. ಅವರು, ಯುವಕರು ಪ್ರತಿ ರಾಷ್ಟ್ರದ ಶಕ್ತಿ ಮತ್ತು ಯುವಶಕ್ತಿಯು ಸಮಾಜ ಮತ್ತು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಕೊಡುಗೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ದೇಶವನ್ನು ಮಾದಕ ವಸ್ತು ವ್ಯಸನದಿಂದ ಮುಕ್ತಗೊಳಿಸಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುತ್ತೇವೆ ಎನ್ನುವ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ನಂತರ ಮಾತನಾಡಿ, ನಶೆ ಮನುಷ್ಯನ ಬದುಕನ್ನೇ ಬಲಿ ತೆಗೆದುಕೊಳ್ಳುವ ಮಹಾ ವ್ಯಸನ. ಯುವಪೀಳಿಗೆಯನ್ನು ರಕ್ಷಿಸಲು ನಶಾಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಸಮೂಹ ಹೊಣೆಗಾರಿಕೆ ಎಂದರು.

ಶಾಲಾ ಕಾಲೇಜುಗಳಲ್ಲಿ ನಶೆ ವಿರೋಧಿ ಶಪಥ ಕಾರ್ಯಕ್ರಮ, ಬೃಹತ್ ಜಾಗೃತಿ ಪೋಸ್ಟರ್ ಹಾಗೂ ರಂಗಭೂಮಿ ಪ್ರದರ್ಶನಗಳ ಮೂಲಕ ಯುವಕರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ಸಶಸ್ತ್ರ ಮೀಸಲು ಪಡೆ ಡಿವೈಎಸ್‌ಪಿ ವಿದ್ಯಾನಂದ ನಾಯಕ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅಮಿತ ಬಿದರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಮಹಾಂತೇಶ್ ಕೆ., ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಹಬೂಬ ತುಂಬರಮಟ್ಟಿ, ಆರೋಗ್ಯ ಇಲಾಖೆಯ ರೂಪಸೇನ ಚವ್ಹಾಣ, ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಪ್ರತಿನಿಧಿಗಳು ಇದ್ದರು.

PREV

Recommended Stories

8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ