ಧಾರವಾಡ:
ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಜಿಮ್‌ಖಾನ ಸಹಯೋಗದಲ್ಲಿ ಆಯೋಜಿಸಿದ ಕವಿವಿ ವ್ಯಾಪ್ತಿಯ ಅಂತರ ವಲಯ ಯುವಜನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳುವ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಜತೆಗೆ ಸ್ವತಂತ್ರ ಚಿಂತನೆ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳುವ ಮೂಲಕ ಜೀವನದ ಸರಿ-ತಪ್ಪುಗಳನ್ನು ಅರ್ಥಮಾಡಿಕೊಂಡು ಮುನ್ನಡೆಯಬೇಕು. ಉತ್ತಮ ನಡತೆ ಮತ್ತು ಸಂಸ್ಕಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಕೊಂಡು ಒಳ್ಳೆಯ ಪ್ರಜೆಗಳಾಗಿ ಬದುಕಬೇಕು. ವಿದ್ಯಾರ್ಥಿಗಳು ಆತ್ಮವಿಶ್ವಾಸದ ಮೂಲಕ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಕವಿವಿ ಕುಲಪತಿ ಪ್ರೊ. ಎ.ಎಂ. ಖಾನ್ ಮಾತನಾಡಿ, ಯುವಕರು ಭಾರತದ ಶಕ್ತಿ. ಯುವಜನೋತ್ಸವಗಳು ವಿದ್ಯಾರ್ಥಿಗಳಲ್ಲಿನ ಸೂಕ್ತ ಪ್ರತಿಭೆ ಹೊರಹಾಕುವಲ್ಲಿ ತಮ್ಮದೇ ಪಾತ್ರ ವಹಿಸಿವೆ. ದೇಶದ ಸಂಸ್ಕೃತಿ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಹೇಳಿದರು.ಎರಡು ದಿನಗಳ ಯುವಜನೋತ್ಸವದಲ್ಲಿ ಕವಿವಿ ವ್ಯಾಪ್ತಿಯ ೨೩೦ ಕಾಲೇಜಿನ ೩೫೦ ವಿದ್ಯಾರ್ಥಿಗಳು ೨೯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಡಾ. ನಿಜಲಿಂಗಪ್ಪ ಮಟ್ಟಿಹಾಳ, ಜಿಮ್‌ಖಾನ ಅಧ್ಯಕ್ಷ ಡಾ. ಮನೋಜ ಡೊಳ್ಳಿ, ಕವಿವಿ ಹಣಕಾಸು ಅಧಿಕಾರಿ ಪ್ರದೀಪಕುಮಾರ, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಪ್ರೊ. ಎಸ್.ಕೆ. ಪವಾರ, ಜಿಮ್‌ಖಾನ ಉಪಾಧ್ಯಕ್ಷ ಡಾ. ಪ್ರಶಾಂತ ಎಚ್.ವೈ. ಕಿರಣಕುಮಾರ ಬನ್ನಿಗೋಳ, ವಿದ್ಯಾರ್ಥಿ ಕಾರ್ಯದರ್ಶಿಗಳಾದ ಮಹ್ಮದ್ ವಾಲಿಕಾರ, ಆನರೌತ್ ಅರೋಘ್ಯಮ್ ಮತ್ತಿತರರು ಇದ್ದರು.