ಪಕ್ಷ ಸಂಘಟಿಸಲು ಯುವ ಕಾಂಗ್ರೆಸ್‌ ಶ್ರಮಿಸಲಿ

KannadaprabhaNewsNetwork | Published : Feb 13, 2025 12:45 AM

ಸಾರಾಂಶ

ಯುವಕರನ್ನು ಪಕ್ಷಕ್ಕೆ ಸೆಳೆಯಲಾಗುವುದು. ಹೆಚ್ಚು ಸದಸ್ಯರನ್ನು ಮಾಡಲು ಶ್ರಮಿಸಲಾಗುವುದು. ಅಲ್ಲದೆ ಮುಂಬರುವ ದಿನಗಳಲ್ಲಿ ರಾಜ್ಯ ಯುವ ಕಾಂಗ್ರೆಸ್ ತಾಲೂಕಿನಲ್ಲಿ ಸಮಾವೇಶ ನಡೆಸಲು ಯುವ ಕಾಂಗ್ರೆಸ್ ಅಧ್ಯಕ್ಷರ ಬಳಿ ಚರ್ಚಿಸಲಾಗುವುದು ಎಂದು ಯೂತ್‌ ಕಾಂಗ್ರೆಸ್‌ನ ಪ್ರಧಾನಕಾರ್ಯದರ್ಶಿ ಸುನೀಲ್‌ ನಂಜೇಗೌಡ ಹೋಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಾಲೂರು

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ಗೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿಗಳಿದ್ದು, ಅವರು ಅಧಿಕಾರ ಎಂದು ಭಾವಿಸದೆ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸೆಳೆಯುವ ಮೂಲಕ ಪಕ್ಷದ ಸದಸ್ಯತ್ವ ಮಾಡಿಸಿ ಪಕ್ಷ ಸಂಘಟಿಸುವ ಕೆಲಸ ಮಾಡುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ ಲಕ್ಷ್ಮೀನಾರಾಯಣ್ ಹೇಳಿದರು.ಪಟ್ಟಣದ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ಯುವ ಕಾಂಗ್ರೆಸ್‌ನ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ನಂಜೇಗೌಡ ಜಿಲ್ಲಾ ಹಾಗೂ ತಾಲೂಕು ಯುವ ಕಾಂಗ್ರೆಸ್ ಸಮಿತಿಗೆ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಯುವ ಕಾಂಗ್ರೆಸ್‌ ಸಮಾವೇಶಅಭಿನಂದನೆ ಸ್ವೀಕರಿಸಿ ಮಾತನಾಡಿದ ಸುನಿಲ್ ನಂಜೆಗೌಡ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಯುವಕರ ಸಹಕಾರದಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ಯುವಕರನ್ನು ಪಕ್ಷಕ್ಕೆ ಸೆಳೆಯುವುದೇ ನನ್ನ ಮುಖ್ಯ ಗುರಿಯಾಗಿದೆ. ಅಲ್ಲದೆ ಮುಂಬರುವ ದಿನಗಳಲ್ಲಿ ರಾಜ್ಯ ಯುವ ಕಾಂಗ್ರೆಸ್ ತಾಲೂಕಿನಲ್ಲಿ ಸಮಾವೇಶ ನಡೆಸಲು ಯುವ ಕಾಂಗ್ರೆಸ್ ಅಧ್ಯಕ್ಷರ ಬಳಿ ಚರ್ಚಿಸಲಾಗುವುದು ಎಂದರು. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನೀಲ್ ನಂಜೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್.ಎಲ್.ವಿ., ಹರೀಶ್, ತಾ.ಅಧ್ಯಕ್ಷ ತನ್ವಿರ್ ಅಹಮದ್, ಮಾಲೂರು ಬ್ಲಾಕ್ ಅಧ್ಯಕ್ಷ ಅಕ್ಷಯ್, ಮಾಸ್ತಿ ಬ್ಲಾಕ್ ಅಧ್ಯಕ್ಷ ವಸಂತ್ ಕುಮಾರ್, ಅವರನ್ನು ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಜಯನರಸಿಂಹ, ಕೆಪಿಸಿಸಿ ಸದಸ್ಯ ಪ್ರದೀಪ್ ರೆಡ್ಡಿ, ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಎಸ್ ಸಿ ನಾರಾಯಣಸ್ವಾಮಿ, ಯೋಜನಾ ಪ್ರಾಧಿಕಾರ ಅಧ್ಯಕ್ಷ ಮಹಮದ್ ನಯಿಂ ಉಲ್ಲಾ, ಪುರಸಭಾ ಸದಸ್ಯರಾದ ಆರ್ ವೆಂಕಟೇಶ್, ಮುರುಳಿಧರ್, ಮಾಜಿ ಸದಸ್ಯ ಹನುಮಂತರೆಡ್ಡಿ ಮತ್ತಿತರರು ಇದ್ದರು.

Share this article