ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಕೆಲಸ ಯುವಕರಿಂದಾಗಲಿ: ನ್ಯಾ. ಮರಿಯಪ್ಪ

KannadaprabhaNewsNetwork |  
Published : Jun 02, 2025, 11:46 PM IST
ಯಾದಗಿರಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಜರುಗಿತು. | Kannada Prabha

ಸಾರಾಂಶ

ಯುವಕರು ಉತ್ತಮ ಆರೋಗ್ಯಕರ ಚಟುವಟಿಕೆಯಲ್ಲಿ ತೊಡಗಿ ಸಮಾಜಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಮರಿಯಪ್ಪ ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಾದಗಿರಿ: ಯುವಕರು ಉತ್ತಮ ಆರೋಗ್ಯಕರ ಚಟುವಟಿಕೆಯಲ್ಲಿ ತೊಡಗಿ ಸಮಾಜಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಮರಿಯಪ್ಪ ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ವಿಶೇಷವಾಗಿ ಯುವಜನರು ಹೆಚ್ಚಾಗಿ ತಂಬಾಕು ಚಟಕ್ಕೆ ತುತ್ತಾಗುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು ಹಾಗೂ ಯುವಕರು ಉತ್ತಮ ಆರೋಗ್ಯಕರ ಚಟುವಟಿಕೆಯಲ್ಲಿ ತೊಡಗಿ ಸಮಾಜಕ್ಕೆ ತಮ್ಮ ಕೊಡುಗೆ ನೀಡಬೇಕೆಂದು ಸಲಹೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳು ಹಾಗೂ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಮುಬಾಶೀರ್ ಅಹ್ಮದ್ ಸಾಜೀದ್ ಅವರು ಮಾತನಾಡಿ, ತಂಬಾಕು ಸೇವನೆಯಿಂದ ಕ್ಯಾನ್ಸರ್, ಗ್ಯಾಂಗ್ರೀನ್, ಬಿಪಿ, ಶುಗರ್, ಟಿ.ಬಿ., ತಲೆ ಕೂದಲು ಉದುರುವಿಕೆ, ಅವಧಿ ಪೂರ್ವ ಮಗುವಿನ ಜನನ ಮುಂತಾದ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಸಲಹೆಗಾರರಾದ ಮಹಾಲಕ್ಷ್ಮಿ ಸಜ್ಜನ್ ಮಾತನಾಡಿ, ಧ್ಯೇಯ ವಾಕ್ಯ ಆಕರ್ಷಕ ಉತ್ಪನ್ನಗಳು, ಕರಾಳ ಉದ್ದೇಶಗಳು, ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಆಕರ್ಷಣೆಯನ್ನು ಬಹಿರಂಗ ಪಡಿಸುವುದರ ಕುರಿತು ತಿಳಿಸಿದರು. ಯಾದಗಿರಿ ಜೆ.ಎಂ.ಎಫ್.ಸಿ. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ರಾಹುಲ್ ಚಂಬಾರ್, ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಸಿ.ಎಸ್. ಮಾಲಿಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಮಹೇಶ ಬಿರಾದಾರ್, ಸಮಾಜ ಕಾರ್ಯಕರ್ತ ವಿಜಯ ಕುಮಾರ ಸೇರಿದಂತೆ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ
ಬೆಳಗಾವಿ ಜಿಲ್ಲೆ ವಿಭಜನೆ ಇರಾದೆ ಸಿಎಂಗಿದೆ