ಹಿರಿಯ ನಾಗರಿಕರ, ಮಾನಸಿಕ ಆರೋಗ್ಯ, ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ
ಕನ್ನಡಪ್ರಭ ವಾರ್ತೆ ದಾಂಡೇಲಿಸಮಾಜದಲ್ಲಿ ನಿರ್ಲಕ್ಷ್ಯ ಹಾಗೂ ತುಳಿತಕ್ಕೆ ಒಳಗಾದ ಸಮುದಾಯಗಳಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಹಿರಿಯ ನಾಗರಿಕರು, ಹೆಣ್ಣು ಶಿಶುಗಳು ಮತ್ತು ಮಾನಸಿಕ ಅಸ್ವಸ್ಥರು ಸಮಾಜದ ಅವಗಣನೆಗೆ, ಶೋಷಣೆಗೆ ಒಳಗಾಗುತ್ತಿದ್ದಾರೆ. ಈ ಕುರಿತು ಯುವಜನಾಂಗ ಮಾನವೀಯ ಅಂತಃಕರಣ ಹೊಂದಬೇಕು. ಅವಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ದಾಂಡೇಲಿಯ ಸಿವಿಲ್ ನ್ಯಾಯಾಧೀಶೆ ತೇಜಸ್ವಿನಿ ಸೊಗಲದ ನುಡಿದರು.
ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ-ದಾಂಡೇಲಿ, ನ್ಯಾಯವಾದಿಗಳ ಸಂಘ, ಅಭಿಯೋಜನಾ ಇಲಾಖೆ. ಕಂದಾಯ ಇಲಾಖೆ, ತಾಪಂ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ನಗರಸಭೆ ಹಾಗೂ ಅರಣ್ಯ ಇಲಾಖೆಗಳ ಸಹಯೋಗದಲ್ಲಿ ಜರುಗಿದ ಹಿರಿಯ ನಾಗರಿಕರ ದಿನ, ಮಾನಸಿಕ ಆರೋಗ್ಯ ದಿನ ಹಾಗೂ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸಾಧನೆ ಮಾಡಿದ ವ್ಯಕ್ತಿತ್ವಗಳಿಂದ ಸ್ಪೂರ್ತಿ ಪಡೆದು ಸರ್ವತೋಮುಖ ವ್ಯಕ್ತಿತ್ವವ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
ನ್ಯಾಯವಾದಿ ರೂಪಾ ಕೇರವಾಡ್ಕರ ಮಾನಸಿಕ ಆರೋಗ್ಯ ಕುರಿತು ಉಪನ್ಯಾಸ ನೀಡಿದರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಂ. ದಬಗಾರ, ಉಪ ಪೊಲೀಸ್ ವರಿಷ್ಠಾಧಿಕಾರಿ ಶಿವಾನಂದ ಮದರಕಂಡಿ, ಪೌರಾಯುಕ್ತ ವಿವೇಕ ಬನ್ನೆ ಮೂರು ದಿನಾಚರಣೆಗಳ ಮಹತ್ವದ ಕುರಿತು ಮಾತನಾಡಿದರು.ವೇದಿಕೆಯಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕ ಸಮೆಶ ಬಂಕಾಪೂರ, ತಾಪಂ ಆಡಳಿತಾಧಿಕಾರಿ ಟಿ.ಸಿ. ಹಾದಿಮನಿ, ಪಿ.ಎಸ್.ಐ ಅಮಿತ ಅತ್ತಾರ, ಮಂಜುನಾಥ ಬಂಡಿವಡ್ಡರ, ರತ್ನದೀಪಾ, ಆರ್.ವಿ. ದೊಡ್ಡಪ್ಪನವರ, ಆಫ್ರೀನ್ ಕಿತ್ತೂರ ಮೊದಲಾದವರಿದ್ದರು.
ಪ್ರಾಂಶುಪಾಲ ಡಾ. ಎಂ.ಡಿ. ಒಕ್ಕುಂದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ವರ್ಷಾ ಕೊಲೆ ಪ್ರಾರ್ಥಿಸಿದರು, ಮನೋಹರ ಉಡಚಂಚಿ ಸ್ವಾಗತಿಸಿದರು, ಚಂದ್ರಶೇಖರ ಲಮಾಣಿ ವಂದಿಸಿದರು.