ಕನ್ನಡಪ್ರಭ ವಾರ್ತೆ ಚಾಮರಾಜನಗರ
ಪಟ್ಟಣದ ಹೊರವಲಯದಲ್ಲಿರುವ ಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಗಂಗೋತ್ರಿ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದಿನಾಚರಣೆಯು ದೇಶಾದ್ಯಂತ ಇಂದು ನಡೆಯುವ ಬಹುದೊಡ್ಡ ರಾಷ್ಟ್ರೀಯ ಹಬ್ಬವಾಗಿದೆ. ನೂರಾರು ವರ್ಷಗಳ ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಳಿಸಲು ಹಲವರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ. ಅಂಥ ರಾಷ್ಟ್ರ ನಾಯಕರ ಸ್ಮರಣೆ ಮಾಡುವುದು ನಮ್ಮೆಲ್ಲರ ಉಸಿರಾಗಿರಬೇಕು ಎಂದರು.ಹಿರಿಯರ ಮಾರ್ಗದರ್ಶನದಲ್ಲಿ ಯುವ ಪೀಳಿಗೆ ಮುನ್ನಡೆಯಬೇಕು. ವಿಕಸಿತ ಭಾರತ ಯುವಜನತೆಗೆ ಹೆಚ್ಚು ಅನುಕೂಲಕರವಾಗಿದ್ದು, 2047ಕ್ಕೆ ಸಶಕ್ತ ಭಾರತವಾಗಿ ಬೆಳೆಯಲು ಎಲ್ಲರೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಈ ದೂರದೃಷ್ಟಿ ಯೋಜನೆಯು ವಿದ್ಯಾರ್ಥಿಗಳಿಗೆ ಕೌಶಲ್ಯ ಆಧಾರಿತ ಶಿಕ್ಷಣವನ್ನು ದೊರಕಿಸಿ ಕೊಡುವುದರ ಮೂಲಕ ಭವಿಷ್ಯದಲ್ಲಿ ಉತ್ತಮ ಉದ್ಯೋಗಗಳನ್ನು ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ಪ್ರೊ.ಜಿ.ವಿ. ವೆಂಕಟರಮಣ, ಯೋಜನೆ ಮೇಲುಸ್ತುವಾರಿ ಮತ್ತು ಮೌಲ್ಯಮಾಪನ ಮಂಡಳಿಯ ನಿರ್ದೇಶಕ ಡಾ.ವಿ.ಜಿ. ಸಿದ್ದರಾಜು, ಎನ್‌ಎಸ್ಎಸ್ ಅಧಿಕಾರಿ ಡಾ.ಮಹೇಶ್ ಕೊಡಿ ಉಗನೆ ಉಪಸ್ಥಿತರಿದ್ದರು.