ಕಸ್ತೂರಿರಂಗನ್ ವರದಿಯ ಸಮಗ್ರ ಚರ್ಚೆಯಾಗಲಿ: ಮಾರುತಿ ಗುರೂಜಿ

KannadaprabhaNewsNetwork |  
Published : Sep 28, 2026, 01:45 AM IST
ಸಮಾರಂಭದಲ್ಲಿ ಮಾರುತಿ ಗುರೂಜಿ ಮಾತನಾಡಿದರು. | Kannada Prabha

ಸಾರಾಂಶ

ಕಪ್ಪತ್ತಗುಡ್ಡ ನಂದಿವೇರಿಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಪ್ರಕೃತಿ ಸಂರಕ್ಷಣೆ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು, ಮುಂದಿನ ಪೀಳಿಗೆಗೆ ಪ್ರಕೃತಿಯನ್ನು ಉಳಿಸುವುದು ನಮ್ಮ ಕರ್ತವ್ಯ ಎಂದರು.

ಹೊನ್ನಾವರ: ಕಸ್ತೂರಿ ರಂಗನ್ ವರದಿ ಹಾಗೂ ಅದರ ಅನುಷ್ಠಾನ, ಜಿಲ್ಲೆಯ ಮೇಲೆ ಬೀರುವ ಪರಿಣಾಮಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಯಬೇಕು. ಜಿಲ್ಲೆಯ ಭೌಗೋಳಿಕ ಹಾಗೂ ಪರಿಸರ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು ಎಂದು ಮಾರುತಿ ಗುರೂಜಿ ತಿಳಿಸಿದರು.

ಭಾನುವಾರ ತಾಲೂಕಿನ ಗೇರಸೊಪ್ಪದ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಪಶ್ಚಿಮಘಟ್ಟ ಸಂರಕ್ಷಣಾ ಚಾತುರ್ಮಾಸ್ಯದ ಸರಣಿ ಚಿಂತನ- ಮಂಥನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪಶ್ಚಿಮ ಘಟ್ಟಗಳ ನೈಸರ್ಗಿಕ ಸಮತೋಲನಕ್ಕೆ ಧಕ್ಕೆ ತರುವಂತಹ ಯೋಜನೆಗಳ ಬಗ್ಗೆ ಜನಪ್ರತಿನಿಧಿಗಳು, ತಜ್ಞರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಪರಿಶೀಲಿಸಬೇಕಾಗಿದೆ ಎಂದರು. ಪಶ್ಚಿಮ ಘಟ್ಟ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಯೋಜನೆಗಳನ್ನು ಕೈಗೊಳ್ಳುವ ಮೊದಲು ಅವುಗಳ ಪರಿಸರ ಪರಿಣಾಮ, ಸ್ಥಳೀಯ ಜನಜೀವನದ ಮೇಲೆ ಬೀರುವ ಪರಿಣಾಮ ಹಾಗೂ ಮುಂದಿನ ಪೀಳಿಗೆಯ ಹಿತಾಸಕ್ತಿಯನ್ನು ಪರಿಗಣಿಸಬೇಕು ಎಂದರು.

ಕಪ್ಪತ್ತಗುಡ್ಡ ನಂದಿವೇರಿಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿ, ಪ್ರಕೃತಿ ಸಂರಕ್ಷಣೆ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು, ಮುಂದಿನ ಪೀಳಿಗೆಗೆ ಪ್ರಕೃತಿಯನ್ನು ಉಳಿಸುವುದು ನಮ್ಮ ಕರ್ತವ್ಯ ಎಂದರು.

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ಸ್ಥಳೀಯ ಜನರ ಹಿತಾಸಕ್ತಿಯನ್ನು ಪರಿಗಣಿಸಿಕೊಂಡು ಯೋಜನೆಗಳನ್ನು ರೂಪಿಸುವ ಅಗತ್ಯವನ್ನು ತಿಳಿಸಿದರು.

ಅಖಿಲೇಶ್ ಚಿಪ್ಪಳಿ, ಗಿರೀಶ್ ಜನ್ನೆ, ರವೀಂದ್ರ ನಾಯ್ಕ, ಮಹಿಮಾ ಪಟೇಲ್, ಎ.ಟಿ. ರಾಮಸ್ವಾಮಿ, ರವಿಕೃಷ್ಣಾರೆಡ್ಡಿ ಅವರು ಮಾತನಾಡಿ, ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ನಾಶ, ನದಿಗಳ ಮೇಲಿನ ಒತ್ತಡ, ಗಣಿಗಾರಿಕೆ, ಅತಿಯಾದ ನಿರ್ಮಾಣ ಚಟುವಟಿಕೆ ಹಾಗೂ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ಯೋಜನೆಗಳ ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಬಿಜೆಪಿ ರಾಜ್ಯ ಶಿಕ್ಷಣ ಪ್ರಕೋಷ್ಟದ ಸಹ ಸಂಚಾಲಕ ಎಂ.ಜಿ. ಭಟ್ಟ ಕೂಜಳ್ಳಿ ಹಾಗೂ ಜಿ.ಜಿ. ಶಂಕರ, ನ್ಯಾಯವಾದಿ ವಿಕ್ರಂ ನಾಯ್ಕ, ಅರ್ಚನಾ ಕಾಮತ್, ಅಮಿತಾ ಎನ್., ಶಾರದಾ ಗೋಪಾಲ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಚಿಂತಕರಿಂದ ಸರಣಿ ‘ಚಿಂತನ- ಮಂಥನ’

ಚಾತುರ್ಮಾಸ್ಯದ ಅವಧಿಯಲ್ಲಿ ಪಶ್ಚಿಮ ಘಟ್ಟ, ನದಿ- ನೀರು, ಜೀವವೈವಿಧ್ಯ, ಅರಣ್ಯ ಹಾಗೂ ಪರಿಸರ ಸಂರಕ್ಷಣೆಯ ಕುರಿತು ವಿವಿಧ ಕ್ಷೇತ್ರಗಳ ತಜ್ಞರು ಮತ್ತು ಪರಿಸರ ಚಿಂತಕರಿಂದ ಸರಣಿ ‘ಚಿಂತನ- ಮಂಥನ’ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಮಾರೋಪದೊಂದಿಗೆ ಈ ಸರಣಿಗೆ ತೆರೆ ಬಿದ್ದಿದ್ದು, ಪಶ್ಚಿಮ ಘಟ್ಟ ಸಂರಕ್ಷಣೆಯ ಕುರಿತ ಜನಜಾಗೃತಿ ಕಾರ್ಯ ಮುಂದುವರಿಯಬೇಕೆಂಬ ಸಂದೇಶವನ್ನು ಕಾರ್ಯಕ್ರಮ ನೀಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ನಿಂದ ಗೊಂದಲ ಸೃಷ್ಟಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ
ಕಾವ್ಯದ ಪರಂಪರೆಯ ಪ್ರಜ್ಞೆ, ವರ್ತಮಾನದ ಅರಿವು ಇರಲಿ: ಡಾ. ಕುಮಾರಚಲ್ಯ