ಸಾಹಿತ್ಯ, ಸಂಸ್ಕೃತಿ ತಿಳಿಸುವ ಸಮ್ಮೇಳನವಾಗಲಿ

KannadaprabhaNewsNetwork | Published : Jan 13, 2025 12:45 AM

ಸಾರಾಂಶ

ಸಾಹಿತ್ಯ ಸಮ್ಮೇಳನದ ಮೂಲಕ ಜನಸಾಮಾನ್ಯರಿಗೂ ಸಹ ಜಿಲ್ಲೆಯ ಸಾಹಿತ್ಯ ಸಂಸ್ಕೃತಿಯ ಪರಿಚಯ ಅರಿವು ಆಗಬೇಕು

ಗದಗ: ಸಾಹಿತ್ಯ, ಸಂಗೀತ, ಸಂಸ್ಕೃತಿಯಲ್ಲಿ ತನ್ನದೇ ಆದ ಐತಿಹಾಸಿಕ ಪರಂಪರೆ ಹೊಂದಿದೆ. ಈ ಐತಿಹಾಸಿಕ ಇತಿಹಾಸ ಪರಂಪರೆ ಜಿಲ್ಲೆಯ ಅಧಿಕ ಸಾರ್ವಜನಿಕರಿಗೆ ತಲುಪಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜ.20, 21ರಂದು ಜಿಲ್ಲೆಯ ಗಜೇಂದ್ರಗಡದಲ್ಲಿ ಜರುಗುವ ಸಮ್ಮೇಳನ ಅತ್ಯಂತ ವ್ಯವಸ್ಥಿತವಾಗಿ ಜರುಗಲಿ. ಕನ್ನಡದ ಕಂಪು ಜಿಲ್ಲೆಯಲ್ಲೇಡೆ ಪಸರಿಸಲಿ ಎಂದರು.

ಸಾಹಿತ್ಯ ಸಮ್ಮೇಳನದ ಮೂಲಕ ಜನಸಾಮಾನ್ಯರಿಗೂ ಸಹ ಜಿಲ್ಲೆಯ ಸಾಹಿತ್ಯ ಸಂಸ್ಕೃತಿಯ ಪರಿಚಯ ಅರಿವು ಆಗಬೇಕು. ಈ ಮೂಲಕ ನಮ್ಮ ಗದಗ ಜಿಲ್ಲೆಯ ಐತಿಹಾಸಿಕ ಪರಂಪರೆಯ ಅರಿವು ಮೂಡಬೇಕು. ಒಟ್ಟಾರೆ ಸಾಹಿತ್ಯ ಸಮ್ಮೇಳನದ ಮೂಲ ಆಶಯ ಇಡೇರಬೇಕು ಎಂದರು.

ಈ ವೇಳೆ ರಾಮಕೃಷ್ಣ ಆಶ್ರಮದ ಜಗನ್ನಾತಾನಂದ ಶ್ರೀಗಳು, ರೋಣ ಶಾಸಕ ಜಿ.ಎಸ್.ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಎಸ್.ಎನ್.ಬಳ್ಳಾರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದ ಗೌಡ ಪಾಟೀಲ, ಶಿವಾನಂದ ಗಿಡ್ನಂದಿ, ಕಿಶೋರ್ ಬಾಬು ನಾಗರಕಟ್ಟಿ, ಡಿ.ಎಸ್.ಬಾಪುರಿ, ದತ್ತಪ್ರಸನ್ನ ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಜಿಪಂ ಸಿಇಒ ಭರತ್.ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ಸಂಕದ, ಡಿ.ವೈ.ಎಸ್.ಪಿ ವಿದ್ಯಾನಂದ ನಾಯ್ಕ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರಡಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ,ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಇದ್ದರು.

Share this article