ಪ್ರಕೃತಿ ಸಹಜ ಜೀವನಶೈಲಿ ಇರಲಿ: ಆತ್ಮ ದೀಪಾನಂದ ಶ್ರೀ

KannadaprabhaNewsNetwork |  
Published : Jan 05, 2026, 02:00 AM IST
04 HRR. 02 &02 Aಹರಿಹರದ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್, ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಶ್ರೀ ರಾಘವೇಂದ್ರ ಬೃಂದಾವನ ಟ್ರಸ್ಟ್, ಧನ್ವಂತರಿ ಪತಂಜಲಿ ಯೋಗ ಆರೋಗ್ಯ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಗರದ ರಾಘವೇಂದ್ರ ಮಠದ ಆವರಣದಲ್ಲಿ ಆಯೋಜಿಸಿದ್ದ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರ ನಡೆಯಿತು. | Kannada Prabha

ಸಾರಾಂಶ

ಮನುಷ್ಯ ಪ್ರಕೃತಿಯ ಭಾಗ. ಪ್ರಕೃತಿ ಸಹಜ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯವಂತ ಜೀವನ ಸಾಗಿಸಬಹುದು ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಆತ್ಮದೀಪಾನಂದ ಶ್ರೀ ಹರಹರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

- ಹರಿಹರ ನಗರದ ರಾಘವೇಂದ್ರ ಮಠ ಆವರಣದಲ್ಲಿ ಉಚಿತ ಯೋಗ-ಪ್ರಕೃತಿ ಚಿಕಿತ್ಸಾ ಶಿಬಿರ

- - -

ಕನ್ನಡಪ್ರಭ ವಾರ್ತೆ ಹರಿಹರ

ಮನುಷ್ಯ ಪ್ರಕೃತಿಯ ಭಾಗ. ಪ್ರಕೃತಿ ಸಹಜ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯವಂತ ಜೀವನ ಸಾಗಿಸಬಹುದು ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಆತ್ಮದೀಪಾನಂದ ಶ್ರೀ ಅಭಿಪ್ರಾಯಪಟ್ಟರು.

ನಗರದ ರಾಘವೇಂದ್ರ ಮಠದ ಆವರಣದಲ್ಲಿ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ವತಿಯಿಂದ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್, ಶ್ರೀ ರಾಘವೇಂದ್ರ ಬೃಂದಾವನ ಟ್ರಸ್ಟ್, ಧನ್ವಂತರಿ ಪತಂಜಲಿ ಯೋಗ ಆರೋಗ್ಯ ಕೇಂದ್ರಗಳ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಭಾರತದ ಸನಾತನ ಋಷಿ ಪರಂಪರೆ ನಮಗೆ ಯೋಗ, ಪ್ರಾಣಾಯಾಮದಂಥ ಅಪೂರ್ವ ವಿದ್ಯೆಯನ್ನು ಬಳುವಳಿಯಾಗಿ ನೀಡಿದೆ. ಔಷಧರಹಿತವಾಗಿ, ಸನಾತನ ಜೀವನಶೈಲಿ ಅಳವಡಿಸಿಕೊಳ್ಳುವ ಮೂಲಕ ರೋಗಗಳು ಬಾರದಂತೆ ಹಾಗೂ ಬಂದ ರೋಗಗಳನ್ನು ಗುಣಪಡಿಸಲು ಕೂಡ ಪ್ರಕೃತಿ ಚಿಕಿತ್ಸೆಯಲ್ಲಿ ಅವಕಾಶವಿದೆ. ಪಾಶ್ಚಾತ್ಯ ಶೈಲಿಯ ಅಂಧಾನುಕರಣೆ ತೊರೆದು ನಮ್ಮ ಸಹಜ, ಸುಂದರ ಜೀವನಶೈಲಿ ಅಳವಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಶಿಬಿರ ಉದ್ಘಾಟಿಸಿದ ಶಾಸಕ ಬಿ.ಪಿ. ಹರೀಶ್ ಮಾತನಾಡಿ, ನಮ್ಮ ಪಾರಂಪರಿಕ ಯೋಗ ಮತ್ತು ಜೀವನ ಪದ್ಧತಿ ಇಂದು ವಿಶ್ವಾದ್ಯಂತ ಜನಪ್ರಿಯವಾಗುತ್ತಿದೆ. ಔಷಧರಹಿತ ಚಿಕಿತ್ಸಾ ಪದ್ಧತಿ ಬಗ್ಗೆ ಜನರಲ್ಲಿ ಹೆಚ್ಚು ಹೆಚ್ಚು ಜಾಗೃತಿ ಮೂಡಿದಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ರಾಜೇಶ್ ಪಾದೇಕಲ್ ಅವರು, ಔಷಧ ರಹಿತವಾಗಿ ನಮ್ಮ ಜೀವನಶೈಲಿ ಮಾರ್ಪಡಿಸಿಕೊಳ್ಳುವ ಮೂಲಕ ಮರೆತ ಅಂಶಗಳನ್ನು ನಮಗೆ ಪ್ರಕೃತಿ ಚಿಕಿತ್ಸಾ ಪದ್ಧತಿ ನೆನಪಿಸುತ್ತಿದೆ. ಈ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಹರಿಹರ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಶಂಕರ ಖಟಾವ್‍ಕರ್ ಮಾತನಾಡಿ, ಮಧ್ಯ ಕರ್ನಾಟಕದಲ್ಲೇ ಅತ್ಯುತ್ತಮ ಪ್ರಕೃತಿ ಸೌಲಭವನ್ನು ಇದೀಗ ಜನನಿ ಆಸ್ಪತ್ರೆ ಕಲ್ಪಿಸಿಕೊಟ್ಟಿದೆ. ಈ ಭಾಗದ ಜನತೆ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.

ಜನನಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಮತ್ತು ಮಾಧ್ಯಮ ಮುಖ್ಯಸ್ಥ ಉದಯಶಂಕರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ವೀರೇಶ ಹನಗವಾಡಿ, ಛೇಂಬರ್ ಆಫ್ ಕಾಮರ್ಸ್ ಕಾರ್ಯದರ್ಶಿ ಹನಗವಾಡಿ ಬಸವರಾಜಪ್ಪ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ನಂದಿನಿ ಶೇಟ್, ರಾಘವೇಂದ್ರ ಬೃಂದಾವನ ಟ್ರಸ್ಟ್ ಕಾರ್ಯದರ್ಶಿ ಎಚ್.ಎಸ್. ಶ್ರೀಧರಮೂರ್ತಿ, ಧನ್ವಂತರಿ ಪತಂಜಲಿ ಯೋಗ ಆರೋಗ್ಯ ಕೇಂದ್ರದ ಮುಖ್ಯಸ್ಥ ನಿರಂಜನ್, ಯೋಗ ಪ್ರಾಧ್ಯಾಪಕ ಜಯರಾಂ ಮತ್ತಿತರರು ಉಪಸ್ಥಿತರಿದ್ದರು. ಯೋಗಸಾಧಕ ಪುಟಾಣಿಗಳಿಂದ ಆಕರ್ಷಕ ಯೋಗ ನೃತ್ಯ ನೆರವೇರಿತು.

- - -

-04HRR. 02 &02A:

ಹರಿಹರದ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್, ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ವತಿಯಿಂದ ಶ್ರೀ ರಾಘವೇಂದ್ರ ಬೃಂದಾವನ ಟ್ರಸ್ಟ್, ಧನ್ವಂತರಿ ಪತಂಜಲಿ ಯೋಗ ಆರೋಗ್ಯ ಕೇಂದ್ರಗಳ ಆಶ್ರಯದಲ್ಲಿ ಭಾನುವಾರ ನಗರದ ರಾಘವೇಂದ್ರ ಮಠದ ಆವರಣದಲ್ಲಿ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ