ಕನ್ನಡ ಕಟ್ಟಾಳುಗಳ ನೆನೆಯುವ ಕಾರ್ಯವಾಗಲಿ: ನ್ಯಾಯಾಧೀಶೆ ರಾಜೇಶ್ವರಿ ಹೆಗಡೆ

KannadaprabhaNewsNetwork |  
Published : Nov 03, 2026, 02:45 AM IST
ಫೋಟೊಪೈಲ್- 2ಎಸ್ಡಿಪಿ4- ಸಿದ್ದಾಪುರ ತಾಲೂಕಿನ ಭುವನಗಿರಿಯಲ್ಲಿ ನಡೆದ ಮಾತೃವಂದನಾ ಕಾರ್ಯಕ್ರಮದಲ್ಲಿ ನ್ಯಾ| ರಾಜೇಶ್ವರಿ ಹೆಗಡೆ ದಂಪತಿಗಳನ್ನು ಗೌರವಿಸಲಾಯಿತು. | Kannada Prabha

ಸಾರಾಂಶ

ಹೆಚ್ಚು ಹೆಚ್ಚು ಕನ್ನಡ ಭಾಷೆಯನ್ನು ಬಳಸಿದರೆ ಮಾತ್ರ ಭಾಷೆಯನ್ನು ಉಳಿಸಿಕೊಳ್ಳಲು ಸಾಧ್ಯ.

ಸಿದ್ದಾಪುರ: ಕರ್ನಾಟಕ ಮತ್ತು ಕನ್ನಡ ಭಾಷೆ ಈ ಎತ್ತರಕ್ಕೆ ಬೆಳೆಯಲು ಕಾರಣಿಕರ್ತರಾದ ಎಲ್ಲರನ್ನೂ ಇಂತಹ ಕಾರ್ಯಕ್ರಮಗಳ ಮೂಲಕ ನೆನೆಯುವ ಕೆಲಸವಾಗಬೇಕು. ಮುಂದಿನ ಪೀಳಿಗೆಗೆ ನಮ್ಮ ಭಾಷೆ ಸಂಸ್ಕೃತಿಯನ್ನು ತಿಳಿಸುವ ಅನಿವಾರ್ಯತೆ ಇದೆ ಎಂದು ಧಾರವಾಡ ಉಚ್ಚ ನ್ಯಾಯಾಲಯದ ನ್ಯಾಯಾಧೀಶೆ ರಾಜೇಶ್ವರಿ ಹೆಗಡೆ ಹೇಳಿದರು.

ತಾಲೂಕಿನ ಭುವನಗಿರಿಯ ಭುವನಗಿರಿ ದೇವಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಮಾತೃವಂದನಾ ಕಾರ್ಯಕ್ರಮದಲ್ಲಿ ಮಾತಾ ಅನುಗ್ರಹ ಗೌರವ ಸಂಮಾನ ಸ್ವೀಕರಿಸಿ ಅವರು ಮಾತನಾಡಿ, ಹೆಚ್ಚು ಹೆಚ್ಚು ಕನ್ನಡ ಭಾಷೆಯನ್ನು ಬಳಸಿದರೆ ಮಾತ್ರ ಭಾಷೆಯನ್ನು ಉಳಿಸಿಕೊಳ್ಳಲು ಸಾಧ್ಯ ಎಂದರು. ತಹಸೀಲ್ದಾರ್ ಮಂಜುಳಾ ಕೆ. ನಾಯಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತಾಲೂಕಿನಲ್ಲಿ ಪಾರಂಪರಿಕ ಗಿಡಮೂಲಿಕೆಗಳನ್ನು ಬಳಸಿ ಔಷಧ ನೀಡುವ ಹಲವಾರು ನಾಟಿ ವೈದ್ಯರಿದ್ದಾರೆ. ಅಂಥವರನ್ನು ಗುರುತಿಸುವ ಕೆಲಸವಾಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಸಿದ್ದಾಪುರದ ಹಲಗೇರಿ ಮೂಲದ ಪ್ರಸ್ತುತ ಧಾರವಾಡ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರಿ ಹೆಗಡೆ, ಮೈಸೂರು ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಡಾ. ಎಸ್. ಎನ್. ಹೆಗಡೆ ಗುಡ್ಡೇಕಣ ಮತ್ತು ತಾಲೂಕಿನ ಹೆಗ್ಗರಣಿಯ ಯಕ್ಷಗಾನ ಕಲಾವಿದ ರಘುಪತಿ ನಾಯ್ಕ ಅವರಿಗೆ ಶ್ರೀ ಮಾತಾ ಅನುಗ್ರಹ ಗೌರವ ಸಂಮಾನ ನೀಡಿ ಗೌರವಿಸಲಾಯಿತು.

ರಾಜೇಶ್ವರಿ ಹೆಗಡೆ ಡೊಂಬೆಕೈ, ಸುಜಯ್ ಭಟ್ಟ ಮುತ್ತಿಗೆ, ಮಂಜುನಾಥ ಹೆಗಡೆ ಮರಲಿಗೆ ಸಂಮಾನ ಪತ್ರ ವಾಚಿಸಿದರು. ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ರಜತ ವಿನಾಯಕ ಶೇಟ್, ದಿಶಾ ನಾಯ್ಕ, ಹಂಸನಿ ಹೆಗಡೆ ಮತ್ತು ಮಾನ್ಯಾ ಭಟ್ಟ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ದೇವಾಲಯದ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜಗೋಡು ಕಾರ್ಯಕ್ರಮದ ಅಧ್ಯಕತೆ ವಹಿಸಿ ಮಾತನಾಡಿದರು. ಮಾತೃವಂದನಾ ಸಮಿತಿಯ ಕಾರ್ಯಾಧ್ಯಕ್ಷ ನಾಗರಾಜ ಭಟ್ಟ ಕೆಕ್ಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಾತೃವಂದನಾ ಸಮಿತಿ ಗೌರವಾಧ್ಯಕ್ಷ ಎ.ಪಿ. ಭಟ್ಟ ಮುತ್ತಿಗೆ, ತಾಲೂಕು ಪಂಚಾಯಿತಿ ಇಒ ದೇವರಾಜ ಹಿತ್ತಲಕೊಪ್ಪ, ವಿಶ್ರಾಂತ ಮುಖ್ಯೋಪಾಧ್ಯಾಯ ಆರ್.ಎಸ್. ಹೆಗಡೆ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ