ಒತ್ತಡದಲ್ಲಿರುವ ಆರಕ್ಷಕ ಪಡೆಯಲ್ಲಿ ಸಂತಸವೂ ಇರಲಿ: ಡಾ. ಸುಮನ್

KannadaprabhaNewsNetwork |  
Published : Nov 25, 2026, 02:15 AM IST
 | Kannada Prabha

ಸಾರಾಂಶ

ಸದಾ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ, ಕ್ರೀಡಾಕೂಟದಲ್ಲಿ ಅಧಿಕಾರಿಗಳೆಂಬ ಭೇದ ಮರೆತು ಉತ್ಸಾಹದಿಂದ ಪಾಲ್ಗೊಂಡಿರುವುದು ಸಂತಸದ ಸಂಗತಿ.

ಮೂರು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ತೆರೆಕನ್ನಡಪ್ರಭ ವಾರ್ತೆ ಕೊಪ್ಪಳ

ಸದಾ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ, ಕ್ರೀಡಾಕೂಟದಲ್ಲಿ ಅಧಿಕಾರಿಗಳೆಂಬ ಭೇದ ಮರೆತು ಉತ್ಸಾಹದಿಂದ ಪಾಲ್ಗೊಂಡಿರುವುದು ಸಂತಸದ ಸಂಗತಿ. ಕರ್ತವ್ಯದ ಒತ್ತಡದ ನಡುವೆಯೂ ಕ್ರೀಡೆಯಲ್ಲಿ ತೋರಿದ ಉತ್ಸಾಹ ಮತ್ತು ಸಂತಸ ಪೊಲೀಸ್ ಕುಟುಂಬದಲ್ಲೂ ಸದಾ ಇರಲಿ ಎಂದು ಬಳ್ಳಾರಿ ವಲಯದ ಪ್ರಭಾರಿ ಪೊಲೀಸ್ ಮಹಾನಿರೀಕ್ಷಕಿ ಡಾ. ಸುಮನ್ ಪೆನ್ನೇಕರ್ ಹೇಳಿದರು.

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ವಾರ್ಷಿಕ ಪೊಲೀಸ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕ್ರೀಡಾಕೂಟದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಎಂಬ ಭೇದವಿಲ್ಲದೆ ಎಲ್ಲರೂ ಸಮಾನ ಮನೋಭಾವದಿಂದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಬಹುಮಾನ ಪಡೆದಿರುವುದು ಅಭಿನಂದನೀಯ. ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ತೋರಿದ ಉತ್ಸಾಹವನ್ನು ಹತ್ತಿರದಿಂದ ಗಮನಿಸಿದ್ದೇನೆ. ವರ್ಷಕ್ಕೊಮ್ಮೆ ಕರ್ತವ್ಯದ ಒತ್ತಡವನ್ನು ಬದಿಗಿಟ್ಟು ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಉಲ್ಲಾಸ ದೊರೆಯುವುದಲ್ಲದೆ, ಸಿಬ್ಬಂದಿಯ ನಡುವೆ ಪರಸ್ಪರ ಬಾಂಧವ್ಯವೂ ವೃದ್ಧಿಯಾಗುತ್ತದೆ ಎಂದರು.

ಪೊಲೀಸ್ ಕುಟುಂಬ ಸದಾ ಸಂತೋಷದಿಂದ ಇರಬೇಕು. ಕ್ರೀಡೆಯಲ್ಲಿ ತೋರಿದ ಉತ್ಸಾಹ, ಕ್ರೀಡಾಸ್ಫೂರ್ತಿ ಮತ್ತು ಒಗ್ಗಟ್ಟು ಮುಂದೆಯೂ ಮುಂದುವರಿಯಲಿ. ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಮಾರೋಪದ ಭಾಗವಾಗಿರುವುದು ಸಂತಸ ತಂದಿದೆ ಎಂದು ಹೇಳಿದರು.

ಎಸ್ಪಿ ಸಾಹಿಲ್ ಬಾಗ್ಲಾ ಮಾತನಾಡಿ, ಮೂರು ದಿನಗಳ ಕ್ರೀಡಾಕೂಟದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಆಸಕ್ತಿಯಿಂದ ಪಾಲ್ಗೊಂಡಿದ್ದಾರೆ. ಎಲ್ಲರೂ ತೋರಿದ ಉತ್ಸಾಹ ಕ್ರೀಡಾಕೂಟಕ್ಕೆ ಮೆರುಗು ತಂದಿದೆ. ಕ್ರೀಡಾಕೂಟ ಪ್ರತಿಯೊಬ್ಬರಲ್ಲೂ ಹೊಸ ಹುಮ್ಮಸ್ಸು ಮೂಡಿಸಿದೆ. ಕ್ರೀಡೆಯಲ್ಲಿ ತೋರಿದ ಆಸಕ್ತಿ, ಸ್ಪರ್ಧಾ ಮನೋಭಾವವನ್ನು ಕರ್ತವ್ಯ ನಿರ್ವಹಣೆಯಲ್ಲಿಯೂ ಮುಂದುವರಿಸಬೇಕು. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಲು ಶ್ರಮಿಸಬೇಕು ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸ್ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಂಜ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ
ಅಂತೂ ಸುಂಕಸಾಳದ 34 ಮಕ್ಕಳಿಗೆ ಸಿಕ್ಕಿತು ಸುರಕ್ಷಿತ ನೆಲೆ!