ಕಾರವಾರ: ಪ್ರಕೃತಿಯು ಮನುಷ್ಯನಿಗೆ ಬದುಕಲು ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಿದ್ದು, ಪ್ರಕೃತಿಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರದ್ದೂ ಆಗಿದ್ದು, ಪರಿಸರ ಅಭಿವೃದ್ಧಿಯೊಂದಿಗೆ ಸುಸ್ಥಿರ ಅಭಿವೃದ್ಧಿಯಾಗಬೇಕು ಎಂದು ಜಿಲ್ಲಾ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್ ಹೇಳಿದರು.
ವಿಶೇಷ ಉಪನ್ಯಾಸ ನೀಡಿದ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಯೋಜನಾ ಸಹಾಯಕಿ ಡಾ. ಅಮೃತಾ ಶೇಟ್, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದರು.
ಹಿಂದೂ ಪ್ರೌಢಶಾಲೆಯ ಮುಖ್ಯಾಧ್ಯಾಪಕ ರೋಹಿದಾಸ ದೇಶಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಾರ್ತಾಧಿಕಾರಿ ಬಿ. ಶಿವಕುಮಾರ್, ಸುಮತಿ ದಾಮ್ಲೆ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಟಿ.ಎಂ. ಶಮೀಂದ್ರ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿ ರೋಹನ ಭುಜಲೆ ಇದ್ದರು.ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕವಿತಾ ಮೇಸ್ತ ಸ್ವಾಗತಿಸಿದರು. ಶಿಕ್ಷಕಿ ವನಿತಾ ಶೇಟ್ ಕಾರ್ಯಕ್ರಮ ನಿರೂಪಿಸಿದರು. ಪ್ರಿಯಾಂಕಾ ದೇಶಭಂಡಾರಿ ವಂದಿಸಿದರು.
ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಶ್ರಮಿಸುತ್ತಿರುವ ಕಾರವಾರ ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕಿ ದೀಪಾ ಎಂ. ಶೆಟ್ಟಿ ಮತ್ತು ಪೌರ ಕಾರ್ಮಿಕರಾದ ಪೆದ್ದಣ್ಣ ಪೆದ್ದ ಕೊಂಡಯ್ಯ, ನಿರ್ಮಲಾ ಮಹಾಬಳೇಶ್ವರ ಕುಮಟಾಕರ ಅವರನ್ನು ಅಭಿನಂದಿಸಲಾಯಿತು. ಆರಂಭದಲ್ಲಿ ಗಿಡಗಳನ್ನು ನೆಡಲಾಯಿತು.