ಧಾರವಾಡ:
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಪರಿಚಯಾತ್ಮಕ ಸಭೆ ಜರುಗಿಸಿದ ಅವರು, ಸರ್ಕಾರಿ ಕರ್ತವ್ಯ ನಿರ್ವಹಿಸುವಲ್ಲಿ ವೈಯಕ್ತಿಕ ಕಾರಣಗಳಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು. ನಾಗರಿಕರ ಬೇಡಿಕೆ, ಸಮಸ್ಯೆಗಳ ಕುರಿತು ಕ್ಷೇತ್ರ, ತಾಲೂಕು ಮಟ್ಟದಲ್ಲಿ ಆಲಿಸಿ ತಮ್ಮ ಹಂತದಲ್ಲಿ ಪರಿಹಾರ ಸೂಚಿಸಬೇಕು. ಜನಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿ ಮತ್ತು ಸಮಯೋಚಿತವಾಗಿ ಸಾರ್ವಜನಿಕರಿಗೆ ತಲುಪಿಸಲು ತಾಂತ್ರಿಕವಾಗಿ ಸಾಕಷ್ಟು ಅವಕಾಶಗಳಿವೆ. ಅದಾಗ್ಯೂ ಸರ್ಕಾರಿ ಸೇವೆ ನೀಡುವಲ್ಲಿ ಅನಗತ್ಯ ವಿಳಂಬ, ಉದಾಸೀನತೆ ಮತ್ತು ಕರ್ತವ್ಯ ಲೋಪವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂಬ ಸಲಹೆ ನೀಡಿದರು.
ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಲಹೆ-ಸೂಚನೆಗಳಿದ್ದಲ್ಲಿ ಹಂಚಿಕೊಳ್ಳಲು ಜಿಲ್ಲಾಧಿಕಾರಿ ಕಚೇರಿ ಮುಕ್ತವಾಗಿದೆ. ತಮ್ಮ ಜವಾಬ್ದಾರಿ, ಹೊಣೆಗಾರಿಕೆ ಅರಿತು ನಿಯಮಾನುಸಾರ ಕರ್ತವ್ಯ ನಿರ್ವಹಿಸಲು ಅವರು ಸೂಚಿಸಿದರು.ಉಪ ಅರಣ್ಯ ಸಂರಕ್ಷಣಾಧಿಕಾರಿ ಶೇಖ ಅಬ್ದುಲ್ ಅಲಿಂ ಸಿದ್ದಕಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಇದ್ದರು. ವಿವಿಧ ಇಲಾಖೆ ಅಧಿಕಾರಿಗಳಾದ ಮಂಜುನಾಥ ಅಂತರವಳ್ಳಿ, ಕೆ.ಸಿ. ಭದ್ರಣ್ಣವರ, ಶ್ರೀಪಾದ ಕುಲಕರ್ಣಿ, ಬಾನುಮತಿ ಎಚ್., ಆರ್.ಎಂ. ಸೊಪ್ಪಿಮಠ, ಡಾ. ಎಸ್.ವಿ. ಸಂತಿ, ಡಾ. ಎಸ್.ಎಂ. ಹೊನಕೇರಿ, ವಿಜಯಲಕ್ಷ್ಮಿ ಪಾಟೀಲ, ಪೂರ್ಣಿಮಾ ಚೂರಿ ಇದ್ದರು.
ಸ್ನೇಹಲ್ ಆರ್., ಜಿಲ್ಲಾಧಿಕಾರಿ