ನಾಡು, ನುಡಿ, ಜಲದ ವಿಚಾರದಲ್ಲಿ ಒಗ್ಗಟ್ಟು ಇರಲಿ: ಮಂಜುನಾಥ ಗುಳೇದಗುಡ್ಡ

KannadaprabhaNewsNetwork |  
Published : Nov 02, 2026, 03:30 AM IST
ಹನುಮಸಾಗರದ ಕನ್ನಡ ಕಟ್ಟೆಯಲ್ಲಿ ಕಸಾಪ ಹೋಬಳಿ ಘಟಕದ ಅಧ್ಯಕ್ಷ ಮಂಜುನಾಥ ಗುಳೇದಗುಡ್ಡ ಧ್ವಜಾರೋಹಣ ನೆರವೇರಿಸಿದರು. | Kannada Prabha

ಸಾರಾಂಶ

71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಭಾನುವಾರ ಹನುಮಸಾಗರ ಪಟ್ಟಣದ ಕನ್ನಡ ಕಟ್ಟೆಯಲ್ಲಿ ಕಸಾಪ ಹೋಬಳಿ ಘಟಕದ ಅಧ್ಯಕ್ಷ ಮಂಜುನಾಥ ಗುಳೇದಗುಡ್ಡ ಧ್ವಜಾರೋಹಣ ನೆರವೇರಿಸಿದರು.

ಹನುಮಸಾಗರ: ಕನ್ನಡ ನಾಡು, ನುಡಿ, ಜಲದ ವಿಷಯ ಬಂದಾಗ ಪ್ರತಿಯೊಬ್ಬ ಕನ್ನಡಿಗರೂ ಜಾತಿ, ಮತ, ಪಕ್ಷಭೇದ ಮರೆತು ಒಗ್ಗಟ್ಟಿನಿಂದ ನಿಲ್ಲಬೇಕು. ಕನ್ನಡ ನಾಡಿನ ಸ್ವಾಭಿಮಾನಕ್ಕೆ ಧಕ್ಕೆ ಉಂಟಾದಾಗ ಕನ್ನಡಿಗರೆಲ್ಲರೂ ಒಂದಾಗಿ ಹೋರಾಟ ನಡೆಸಬೇಕು ಎಂದು ಕಸಾಪ ಹೋಬಳಿ ಘಟಕದ ಅಧ್ಯಕ್ಷ ಮಂಜುನಾಥ ಗುಳೇದಗುಡ್ಡ ಹೇಳಿದರು.

71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಭಾನುವಾರ ಪಟ್ಟಣದ ಕನ್ನಡ ಕಟ್ಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಕನ್ನಡ ಪರವಾದ ಕಾರ್ಯಚಟುವಟಿಕೆಗೆ ಎಲ್ಲರೂ ಕೈಜೋಡಿಸಬೇಕು. ಕನ್ನಡ ಭಾಷೆಯ ಬಳಕೆ ಕೇವಲ ಆಚರಣೆ, ಉತ್ಸವಗಳಿಗೆ ಸೀಮಿತವಾಗದೆ ದೈನಂದಿನ ಜೀವನದಲ್ಲಿಯೂ ಕನ್ನಡಕ್ಕೆ ಆದ್ಯತೆ ನೀಡಬೇಕು. ಕನ್ನಡಿಗರಲ್ಲಿ ಭಾಷಾಭಿಮಾನ ಹಾಗೂ ನಾಡಿನ ಬಗ್ಗೆ ಗೌರವದ ಭಾವನೆ ಹೆಚ್ಚಾಗಬೇಕು ಎಂದು ಹೇಳಿದರು.

ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಬಸವರಾಜ ಹಳ್ಳೂರ ಮಾತನಾಡಿ, ಮಕ್ಕಳಲ್ಲಿ ಬಾಲ್ಯದಿಂದಲೇ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸುವ ಕಾರ್ಯವಾಗಬೇಕು ಎಂದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಆಟೋ ಚಾಲಕರ ಸಂಘದ ವತಿಯಿಂದ ನಾಡದೇವಿ ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಆನಂತರ ಆಟೋ ಚಾಲಕರು ತಮ್ಮ ವಾಹನಗಳನ್ನು ಕನ್ನಡ ಧ್ವಜಗಳಿಂದ ಅಲಂಕರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಕನ್ನಡದ ಅಭಿಮಾನ ಮೆರೆದರು. ಪಟ್ಟಣದ ಕಸಾಪ ಭವನದಲ್ಲಿ ನಿಸರ್ಗ ಸಂಗೀತ ಶಾಲೆಯ ಅಧ್ಯಕ್ಷ ಮಲ್ಲಯ್ಯ ಕೋಮಾರಿ ಧ್ವಜಾರೋಹಣ ನೆರವೇರಿಸಿದರು. ಪಪಂ, ಕುರುಬಗೇರಾ ಶಾಲೆ, ಕೆಪಿಎಸ್ ಶಾಲೆ ಸೇರಿದಂತೆ ಪಟ್ಟಣದ ವಿವಿಧ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಗಳಲ್ಲಿ ಕನ್ನಡ ಧ್ವಜಾರೋಹಣ, ನಾಡಗೀತೆ ಹಾಗೂ ಕನ್ನಡ ನಾಡು-ನುಡಿಯ ಮಹತ್ವ ಸಾರುವ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಕನ್ನಡಾಭಿಮಾನ ಮೂಡಿಸಲಾಯಿತು.

ಪಪಂ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ, ಬಸವರಾಜ ಹಳ್ಳೂರ, ಗ್ರಾಪಂ ಮಾಜಿ ಅಧ್ಯಕ್ಷ ರುದ್ರಗೌಡ ಗಡಫ್ನವರ, ಸೂಚಪ್ಪ ದೇವರಮನಿ, ಮಲ್ಲಯ್ಯ ಕೋಮಾರಿ, ಸುನೀತಾ ಕೋಮಾರಿ, ಬಸಮ್ಮ ಹಿರೇಮಠ, ಶ್ರೀನಿವಾಸ ಜಹಗೀರದಾರ, ಮಹಾಂತಯ್ಯ ಕೋಮಾರಿ, ಈರಣ್ಣ ಬಾದಾಮಿ, ಬಸವರಾಜ ಕನ್ನೂರ, ಬಸವರಾಜ ದೇವಣ್ಣನವರ, ವಸಂತ ರಾಜೂರ, ಎಚ್.ಎಚ್. ಇಲಕಲ್ಲ, ಮಹಾಂತೇಶ ಚೌಡಾಪುರ, ಬಸವರಾಜ ದಟ್ಟಿ, ವೀರೇಶ ವಿಶ್ವಕರ್ಮ, ಮಂಗಳೇಶ, ಈರಣ್ಣ ಬಾದಾಮಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನ್ಯ ಭಾಷೆಯ ವ್ಯಾಮೋಹದಿಂದ ಕನ್ನಡ ಮಾಯ
ಕನ್ನಡ ಭಾಷೆಯ ಉಳಿವು, ಬೆಳವಣಿಗೆಗೆ ಆದ್ಯತೆ ಸಿಗಲಿ