ಕರ್ನಾಟಕ ಕಾಂಗ್ರೆಸ್ ಸರ್ಕಾರ 10 ತಿಂಗಳು ಇರಲಿ ನೋಡೋಣ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

KannadaprabhaNewsNetwork |  
Published : Aug 04, 2024, 01:22 AM ISTUpdated : Aug 04, 2024, 11:46 AM IST
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ  | Kannada Prabha

ಸಾರಾಂಶ

ಬಿಜೆಪಿ ಮತ್ತು ಜೆಡಿಎಸ್‌ನಿಂದ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನೆಯ ಸಮಾವೇಶ ನಡೆಯಿತು.

 ಬೆಂಗಳೂರು : ಇನ್ನೂ ಹತ್ತು ವರ್ಷ ತಮ್ಮದೇ ಸರ್ಕಾರ ಎಂದು ಕಾಂಗ್ರೆಸ್ ನಾಯಕರು ಬೀಗುತ್ತಿದ್ದಾರೆ. ಹತ್ತು ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಭಾರಿ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲಿನ ಧಾಟಿಯಲ್ಲಿ ಹೇಳಿದ್ದಾರೆ.

ಶನಿವಾರ ಆರಂಭಗೊಂಡ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರವನ್ನು ಯಾರೂ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿಲ್ಲ. ಬದಲಿಗೆ ಜನತೆ ಕೊಟ್ಟ ಅವಕಾಶವನ್ನು ಹಾಳು ಮಾಡಕೊಳ್ಳಲಾಗುತ್ತಿದೆ. ಹಗರಣಗಳ ಮೇಲೆ ಹಗರಣಗಳನ್ನು ನಡೆಸಿ ಅಕ್ರಮ ಎಸಗಲಾಗಿದೆ ಎಂದು ವಾಗ್ದಾಳಿ ನಡೆಸಿದರು.

 ಜನ ವಿರೋಧಿ ಕಾಂಗ್ರೆಸ್‌ ಸರ್ಕಾರ ವಿರುದ್ಧ ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ ಹಮ್ಮಿಕೊಂಡಿದೆ. ಪಾದಯಾತ್ರೆ ವೇಳೆ ಜನರಿಗೆ ಕಾಂಗ್ರೆಸ್‌ನ ಆಕ್ರಮಗಳನ್ನು ಮನವರಿಕೆ ಮಾಡಿಕೊಡುತ್ತೇವೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ಆಸ್ತಿ, ಅಕ್ರಮಗಳ ದಾಖಲೆ ಪತ್ರಗಳನ್ನು ನಾನೇ ಕೇಂದ್ರ ಸರ್ಕಾರಕ್ಕೆ ಕೊಟ್ಟಿದೇನೆ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಅವರಿಬ್ಬರನ್ನು ಬಂಧಿಸಲು ದೆಹಲಿಯಿಂದ ಬರುತ್ತಾರೆ. ಬಂಧನಕ್ಕೂ ನಾವು ಸಿದ್ದವಿದ್ದೇವೆ ಎಂಬುದಾಗಿ ಅವರೇ ಹೇಳಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಹಕ್ಕಿದೆ. ಅದನ್ನು ಎತ್ತಿ ಹಿಡಿಯುವ ಕೆಲಸವನ್ನು ನಾವು ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಿದ್ದೇವೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಬಂದಿದೆ. ಅವರು ನಿವೇಶನ ಪಡೆದಿರುವುದಕ್ಕೆ ಯಾವುದೇ ಅಭ್ಯಂತರ ಇಲ್ಲ. ಆದರೆ,ಸರ್ಕಾರದ ಜಮೀನು ಅವರ ಬಾಮೈದನ ಹೆಸರಿಗೆ ಖರೀದಿಸಿ, ನಂತರ ಅವರ ಪತ್ನಿಗೆ ಮಾರಾಟ ಮಾಡಲಾಗುತ್ತದೆ. ಇದು ಹೇಗೆ ರವಾನೆಯಾಗಿದೆ ಎನ್ನುವುದು ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಸಿ ಡಿ ಶಿವು ಅವರು ಕಾಂಗ್ರೆಸ್ ಎದುರಿಸಲು ಬಿಜೆಪಿ ಜತೆಗೆ ಜೆಡಿಎಸ್ ಸೇರಿಕೊಂಡಿದೆ ಎಂದಿದ್ದಾರೆ. ಅವರನ್ನು ಬುಡ ಸಮೇತ ಕಿತ್ತೊಗೆಯಲು ನಾವು ಜೊತೆಯಾಗಿಯೇ ಇರುತ್ತೇವೆ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ