ರಾಮನಗರ: ಸ್ವತಂತ್ರ ಭಾರತದ ಪ್ರಜೆಗಳಾದ ನಾವೆಲ್ಲರೂ ಒಗ್ಗಟ್ಟಾಗಿ ಭಾರತೀಯರಾಗಿ ಬದುಕು ನಡೆಸೋಣ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು ಹೇಳಿದರು.
ಜಾತಿ, ಧರ್ಮ ಆಂತರೀಕ ಕಲಹಗಳನ್ನು ಬದಿಗೊತ್ತಿ ಎಲ್ಲ ವರ್ಗದ ಜನರು ಸಾಮರಸ್ಯದಿಂದ ಭಾರತೀಯರಾಗಿ ಬದುಕುವ ಮೂಲಕ ರಾಷ್ಟ್ರ ಪ್ರೇಮವನ್ನು ಎತ್ತಿಹಿಡಿಯೋಣ. ಕಂದಾಯ ಭವನದ ಎಲ್ಲ ಇಲಾಖಾ ಅಧಿಕಾರಿಗಳು ಸೇರಿ ರಾಷ್ಟ್ರೀಯ ಹಬ್ಬವನ್ನು ಆಚರಿಸಿ, ಹರ್‌ಘರ್ ತ್ರಿರಂಗಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿ ಮೆರಗು ತಂದು ಕೊಟ್ಟಿದ್ದೀರಿ ಎಂದು ತಿಳಿಸಿದರು.
ಇದೇ ವೇಳೆ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ಗಾಣಕಲ್ ನಟರಾಜು ಅವರು ಎಸ್‌ಎಸ್‌ಎಲ್‌ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರು., ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಲಾ 15 ಸಾವಿರ ರು.ಗಳ ನಗದು ಪುರಸ್ಕಾರ ನೀಡಿ ಗೌರವಿಸಿದರು.ಧ್ವಜಾರೋಹಣ ಸಮಾರಂಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್. ಅಲ್ಪಸಂಖ್ಯಾತರ ಇಲಾಖೆ ಉಪನಿರ್ದೇಶಕ ಜಯಣ್ಣ, ಸಿಡಿಪಿಓ ಕಾಂತರಾಜು, ಮುಖ್ಯ ಗ್ರಂಥಾಲಯ ಅಧಿಕಾರಿ ಚನ್ನಕೇಶವ, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ, ಉಪ ನೊಂದಾಣಾಧಿಕಾರಿ, ಡಿಆರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.15ಕೆಆರ್ ಎಂಎನ್ 3.ಜೆಪಿಜಿ