ಕಾಂಗ್ರೆಸ್ ಸರ್ಕಾರದ ವೈಫಲ್ಯ ಜನರ ಮುಂದಿಟ್ಟು ಚುನಾವಣೆ ಎದುರಿಸೋಣ; ಬಂಡಿ

KannadaprabhaNewsNetwork |  
Published : Sep 30, 2026, 02:15 AM IST
ಗಜೇಂದ್ರಗಡ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಳಕಪ್ಪ ಬಂಡಿ ಮಾತನಾಡಿದರು. | Kannada Prabha

ಸಾರಾಂಶ

ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು ಮುಂಬರುವ ಚುನಾವಣೆ ಎದುರಿಸೋಣ.

ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ

ಕನ್ನಡಪ್ರಭ ವಾರ್ತೆ ಗಜೇಂದ್ರಗಡ

ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು ಮುಂಬರುವ ಚುನಾವಣೆ ಎದುರಿಸೋಣ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸಮಾಜ ಸೇವೆ ೨೫ ವರ್ಷ ಪೂರೈಸಿದ ಹಿನ್ನೆಲೆ ಬಿಜೆಪಿಯಿಂದ ರಾಜ್ಯಾದ್ಯಂತ ಸೇವಾ ಸಂಕಲ್ಪ ಅಭಿಯಾನ ನಿಮಿತ್ತ ಅ.೭ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರೋಣ ಮತಕ್ಷೇತ್ರಕ್ಕೆ ಆಗಮಿಸುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದವರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ವಿರೋಧಿ ಆಡಳಿತವನ್ನು ನಡೆಸುತ್ತಿದೆ. ಪರಿಣಾಮ ಜನರ ಜತೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಸರ್ಕಾರದ ಆಡಳಿತದಿಂದ ರೋಸಿ ಹೋಗಿದ್ದಾರೆ. ಹೀಗಾಗಿ ಹಿಂದಿನ ಬಿಜೆಪಿ ರಾಜ್ಯ ಸರ್ಕಾರದ ಸಾಧನೆ ಹಾಗೂ ಮೋದಿ ಅವರ ಜನಪರ, ರೈತಪರ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎದುರಿಸೋಣ. ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದ್ದು, ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಕಾರ್ಯಕರ್ತರು ಅಣಿಯಾಗಬೇಕು ಎಂದರು.

ಬಿಜೆಪಿ ಧಾರವಾಡ ವಿಭಾಗದ ಸಹ ಪ್ರಭಾರಿ ಭೋಜರಾಜ ಕರೋಧಿ ಮಾತನಾಡಿ, ಮುಂದಿನ ದಿನಗಳಲ್ಲಿ ಎದುರಾಗುವ ಜಿಪಂ, ತಾಪಂ ಹಾಗೂ ಗ್ರಾಪಂ ಸೇರಿ ಸ್ಥಳೀಯ ಚುನಾವಣೆಗಳಿಗೆ ಬಿಜೆಪಿ ಸನ್ನದ್ಧವಾಗಿದೆ. ಅಲ್ಲದೆ ಕಾರ್ಯಕರ್ತರು ರೋಣ ಮತಕ್ಷೇತ್ರದಲ್ಲಿ ೨೦೨೮ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಕೆ. ಚೌವ್ಹಾಣ, ಉಮೇಶ ಮಲ್ಲಾಪುರ, ಲಿಂಗರಾಜ ಪಾಟೀಲ್, ಅಂದಪ್ಪ ಹಾರೂಗೇರಿ, ಬಿ.ಎಂ. ಸಜ್ಜನರ, ಮುದಿಯಪ್ಪ ಕರಡಿ, ಅಶೋಕ ವನ್ನಾಲ, ಬಾಲಾಜಿ ಬೋಸ್ಲೆ ಸೇರಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧಾರ್ಮಿಕತೆ ಜತೆಗೆ ಶಿಕ್ಷಣಕ್ಕೂ ಆದ್ಯತೆ ನೀಡಿ: ಸಚಿವ ಕೆ.ಎಸ್. ಬಸವಂತಪ್ಪ
ಮಾಜಿ ಸಂಸದ ಮಂಜುನಾಥ ಕುನ್ನೂರಗೆ ಕನ್ನಡದ ಕಟ್ಟಾಳು ಬಿರುದು ಪ್ರದಾನ