ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಏಪ್ರಿಲ್ 14ರಂದು ತಾಲೂಕು ಆಡಳಿತದಿಂದ ಸರಳವಾಗಿ ಆಚರಿಸಿ ಮುಂದಿನ ದಿನಗಳಲ್ಲಿ ಸರ್ಕಾರದ ಅನುದಾನ ಬಂದಮೇಲೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಕರೆಸಿ ಅದ್ಧೂರಿಯಾಗಿ ಆಚರಣೆ ಮಾಡಲು ಶಾಸಕರು ಹಾಗೂ ಮುಖಂಡರ ಸಮ್ಮುಖದಲ್ಲಿ ತೀರ್ಮಾನಿಸಲಾಗಿತ್ತು. ಹಾಗಾಗಿ ಇಂದು ಸರಳವಾಗಿ ಆಚರಣೆಗೆ ಸಿದ್ಧ ಮಾಡಲಾಗಿತ್ತು. ಕಳೆದ ವರ್ಷ ಅದ್ದೂರಿಯಾಗಿ ಆಚರಣೆ ಮಾಡಿರುವ ಬಗ್ಗೆ ಸಂಘಟನೆಯ ಮುಖಂಡರು ಗಮನಕ್ಕೆ ತಂದಿದ್ದು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆದರೂ ಇಂದಿನ ಕಾರ್ಯಕ್ರಮದಲ್ಲಾಗಿರುವ ಲೋಪಕ್ಕೆ ಕ್ಷಮೆಯಾಚಿಸುವುದಾಗಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೇಲೂರುಶ್ರೇಷ್ಠ ವ್ಯಕ್ತಿಗಳ ಆದರ್ಶ ಕೇಳಿಸಿಕೊಂಡರೆ ಸಾಲದು, ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ತಹಸೀಲ್ದಾರ್ ಶ್ರೀಧರ್ ಕಂಕಣವಾಡಿ ಹೇಳಿದರು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಡಾ. ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಜಯಂತಿ ದಿನದಂದು ಅಂಬೇಡ್ಕರ್ ಅವರನ್ನು ನೆನೆದು ನಂತರ ಮರೆಯುವ ಬದಲು ಸಂವಿಧಾನದ ತತ್ವಗಳನ್ನು ಪಾಲಿಸಲು ಎಲ್ಲರೂ ಮುಂದಾಗಬೇಕು ಎಂದರು.
ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಏಪ್ರಿಲ್ 14ರಂದು ತಾಲೂಕು ಆಡಳಿತದಿಂದ ಸರಳವಾಗಿ ಆಚರಿಸಿ ಮುಂದಿನ ದಿನಗಳಲ್ಲಿ ಸರ್ಕಾರದ ಅನುದಾನ ಬಂದಮೇಲೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಕರೆಸಿ ಅದ್ಧೂರಿಯಾಗಿ ಆಚರಣೆ ಮಾಡಲು ಶಾಸಕರು ಹಾಗೂ ಮುಖಂಡರ ಸಮ್ಮುಖದಲ್ಲಿ ತೀರ್ಮಾನಿಸಲಾಗಿತ್ತು. ಹಾಗಾಗಿ ಇಂದು ಸರಳವಾಗಿ ಆಚರಣೆಗೆ ಸಿದ್ಧ ಮಾಡಲಾಗಿತ್ತು. ಕಳೆದ ವರ್ಷ ಅದ್ದೂರಿಯಾಗಿ ಆಚರಣೆ ಮಾಡಿರುವ ಬಗ್ಗೆ ಸಂಘಟನೆಯ ಮುಖಂಡರು ಗಮನಕ್ಕೆ ತಂದಿದ್ದು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆದರೂ ಇಂದಿನ ಕಾರ್ಯಕ್ರಮದಲ್ಲಾಗಿರುವ ಲೋಪಕ್ಕೆ ಕ್ಷಮೆಯಾಚಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಕಾಸಪ್ಪ ಅಧ್ಯಕ್ಷ ಮಾನ ಮಂಜೇಗೌಡ, ತಾಪಂ ಸತೀಶ್, ಬಿಇಒ ಭಾಗ್ಯಮ್ಮ, ಸಿಪಿಐ ರೇವಣ್ಣ, ಪಿಡಬ್ಲ್ಯೂಡಿ ಕೃಷ್ಣೇಗೌಡ, ಸಮಾಜ ಕಲ್ಯಾಣ ಇಲಾಖೆ ನಿಂಗರಾಜ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಿ ಬಿ ಶಿವರಾಜ್ ಇತರರು ಇದ್ದರು
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.