ಸುಸ್ಥಿರ ಬದುಕಿಗಾಗಿ ಪರಿಸರ ಸಂರಕ್ಷಣೆ ನಮ್ಮದಾಗಲಿ

KannadaprabhaNewsNetwork |  
Published : Jun 06, 2026, 02:30 AM IST
ಪೋಟೋವಿಶ್ವ ಪರಿಸರ ದಿನದಂಗವಾಗಿ ಕನಕಗಿರಿ ಡಿಗ್ರಿ ಕಾಲೇಜಿನ ಪ್ರಾಂಶುಪಾಲ ಬಜರಂಗಬಲಿ ಸಸಿ ನೆಟ್ಟರು.   | Kannada Prabha

ಸಾರಾಂಶ

.ಪರಿಸರ ಸಕಲ ಜೀವ ಸಂಕುಲಗಳ ಬದುಕಿನ ಅಡಿಪಾಯವಾಗಿದ್ದು, ಪ್ರಸ್ತುತ ದಿನಗಳಲ್ಲಿ ಪರಿಸರವು ಗಂಭೀರ ಸಮಸ್ಯೆಗಳೊಂದಿಗೆ ಹೋರಾಡುತ್ತಿದೆ

ಕನಕಗಿರಿ: ಮನುಷ್ಯನ ಸುಸ್ಥಿರ ಭವಿಷ್ಯದ ಹಿತದೃಷ್ಟಿಯಿಂದ ಪರಿಸರವನ್ನು ಉಳಿಸಿ ಬೆಳೆಸುವ ಕೆಲಸ ನಮ್ಮದಾಗಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಬಜರಂಗಬಲಿ ಹೇಳಿದರು.

ಪಟ್ಟಣದ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಸಸಿ ನೆಟ್ಟು ಮಾತನಾಡಿದರು.ಪರಿಸರ ಸಕಲ ಜೀವ ಸಂಕುಲಗಳ ಬದುಕಿನ ಅಡಿಪಾಯವಾಗಿದ್ದು, ಪ್ರಸ್ತುತ ದಿನಗಳಲ್ಲಿ ಪರಿಸರವು ಗಂಭೀರ ಸಮಸ್ಯೆಗಳೊಂದಿಗೆ ಹೋರಾಡುತ್ತಿದೆ. ಹವಾಮಾನ ಬದಲಾವಣೆ, ಕೈಗಾರಿಕೀಕರಣ, ಇಂಧನಗಳ ಅತಿಯಾದ ಬಳಕೆ ಮತ್ತು ಅರಣ್ಯನಾಶವು ವಾತಾವರಣದಲ್ಲಿನ ಹಸಿರುಮನೆ ಅನಿಲಗಳ ಪ್ರಮಾಣವನ್ನು ಹೆಚ್ಚಿಸುತ್ತಿದೆ. ಈ ಪರಿಣಾಮವಾಗಿಯೇ ಜಾಗತಿಕ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಹವಾಮಾನ ಬದಲಾವಣೆಯು ಪ್ರಪಂಚದ ಅನೇಕ ಭಾಗಗಳಲ್ಲಿ ಪ್ರವಾಹ, ಬರ, ಚಂಡಮಾರುತ, ಕಾಡ್ಗಿಚ್ಚು ತೀವ್ರವಾದ ಉಷ್ಣ ಸೇರಿದಂತೆ ಪ್ರಕೃತಿ ವಿಕೋಪಗಳಿಗೆ ಕಾರಣವಾಗುತ್ತಿದೆ. ನಗರೀಕರಣ, ಅಭಿವೃದ್ಧಿ, ಅರಣ್ಯನಾಶ, ಪ್ಲಾಸ್ಟಿಕ್‌ನ ವಿಪರೀತ ಬಳಕೆಯಿಂದಾಗಿ ಮನುಷ್ಯನ ಸ್ವಾರ್ಥದಿಂದ ಪರಿಸರ ನಾಶವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ವೇಳೆ ಸಹಾಯಕ ಪ್ರಾಧ್ಯಾಪಕ ಸಂಗಮೇಶ, ದತ್ತಾಂಶ ನಮೂದು ಸಹಾಯಕಿ ಜ್ಯೋತಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉತ್ಪಾದನೆಯ ಶೇ.70ಕ್ಕೂ ಅಧಿಕ ಕಾಫಿ ರಫ್ತು: ಬಸವರಾಜ್‌
ಕಾಂಗ್ರೆಸ್ ನಾಯಕರ ಹೇಳಿಕೆಗಳು ಹಾಸ್ಯಾಸ್ಪದ: ನವೀನ್ ನಾಯಕ್