- ವೀರಭದ್ರೇಶ್ವರ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ರಂಭಾಪುರಿ ಶ್ರೀ - - - ಕನ್ನಡಪ್ರಭ ವಾರ್ತೆ ಚನ್ನಗಿರಿ
ತಾಲೂಕಿನ ಚಿಕ್ಕೋಡ ಗ್ರಾಮದಲ್ಲಿ ಗುರುವಾರ ಶ್ರೀ ವೀರಭದ್ರೇಶ್ವರ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಶ್ರೀ ಈಶ್ವರ ದೇವಾಲಯ ಉದ್ಘಾಟನೆ, ಪ್ರಾಣ ಪ್ರತಿಷ್ಠಾಪನಾ ಧರ್ಮ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ತಾಳ್ಮೆ ಮತ್ತು ಸಹನೆ ಗುಣ ಮನುಷ್ಯನಲ್ಲಿ ಇಲ್ಲದಿರುವುದೇ ಇಂದಿನ ಅಶಾಂತಿ ಮತ್ತು ಆಕೃತ್ಯಗಳಿಗೆ ಕಾರಣವಾಗಿವೆ. ಜೀವನದಲ್ಲಿ ಧರ್ಮ, ಯಶಸ್ಸು, ನೀತಿ, ದಕ್ಷತೆ ಮತ್ತು ಒಳ್ಳೆಯ ಮಾತುಗಳನ್ನು ಅಳವಡಿಸಿಕೊಂಡು ಬಾಳಬೇಕು. ಆಗ ಶ್ರೇಯಸ್ಸು ಲಭಿಸುವುದು ಎಂದು ನುಡಿದರು.ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯರು ಸಮಾರಂಭದ ನೇತೃತ್ವ ವಹಿಸಿ, ಸಕಲ ಜೀವಾತ್ಮರಿಗೆ ಒಳಿತು ಬಯಸಿದ ವೀರಶೈವ ಧರ್ಮ ಇಂದು ಆಚರಣೆ ಕೊರತೆಯಿಂದಾಗಿ ಮನುಷ್ಯನ ಜೀವನ ಕಷ್ಟದಲ್ಲಿ ಸಿಲುಕುತ್ತಿದೆ ಎಂದರು.
ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಾಸಕನಾಗಿದ್ದಾಗ ಈಶ್ವರ ದೇವಾಲಯ ನಿರ್ಮಾಣಕ್ಕೆ ₹3 ಲಕ್ಷ ಅನುದಾನ ನೀಡಿದ್ದೆ. ಅದನ್ನು ಗ್ರಾಮಸ್ಥರು ಉತ್ತಮ ರೀತಿಯಲ್ಲಿ ಬಳಕೆ ಮಾಡಿರುವುದು ಸಂತಸ ತಂದಿದೆ ಎಂದರು.ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಮಾತನಾಡಿ, ಇಂದಿನ ದಿನಗಳಲ್ಲಿ ಸಾಮಾಜಿಕ ಮೌಲ್ಯಗಳನ್ನು ರಕ್ಷಿಸಿಕೊಂಡು ಬರುವಲ್ಲಿ ಮನುಷ್ಯರು ವಿಫಲರಾಗಿದ್ದಾರೆ. ಧಾರ್ಮಿಕ ಸಂಸ್ಕಾರದ ಸಹಯೋಗದಿಂದ ಆದರ್ಶ ಸಮಾಜ ಕಟ್ಟಲು ಸಾಧ್ಯ ಎಂದರು.
ಚನ್ನಗಿರಿ ಹಿರೇಮಠದ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯರು, ತಾವರೆಕೆರೆ ಶಿಲಾಮಠದ ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮೀಜಿ, ಬಿಳಕಿ ರಾಚೋಟ ಶಿವಾಚಾರ್ಯ ಸ್ವಾಮೀಜಿ, ಹಾಲಸ್ವಾಮಿ ವಿರಕ್ತ ಮಠದ ಶ್ರೀ ಬಸವ ಜಯಚಂದ್ರ ಮಹಾಸ್ವಾಮಿಗಳು ಉಪದೇಶಾಮೃತ ನೀಡಿದರು.ತುಮ್ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ್ ಅವರು ಸಿದ್ದಮಠದ ಯುಗಧರ್ಮ ರಾಮಣ್ಣ ಬರೆದ ಕವನ ಸಂಕಲನ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ವಡ್ನಾಳ್ ಜಗದೀಶ್, ಹೊದಿಗೆರೆ ರಮೇಶ್, ನಿಂಬಾಪುರ ಪರಮೇಶ್ವರಪ್ಪ, ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ, ಯುಗಧರ್ಮ ರಾಮಣ್ಣ ಉಪಸ್ಥಿತರಿದ್ದರು.
ಸಮಾರಂಭಕ್ಕೂಮುನ್ನ ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು.- - - -15ಕೆಸಿಎನ್ಜಿ1:
ಚನ್ನಗಿರಿ ತಾಲೂಕು ಚಿಕ್ಕೂಡ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ, ಧರ್ಮ ಸಮಾರಂಭವನ್ನು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಉದ್ಘಾಟಿಸಿದರು. ರಂಭಾಪುರಿ ಶ್ರೀ, ಸೇರಿದಂತೆ ವಿವಿಧ ಮಠಾಧೀಶರು ಇದ್ದರು.