ಕನ್ನಡಪ್ರಭ ವಾರ್ತೆ ವಿಜಯಪುರ
ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ೫ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಕೆಟ್ಟ ಸರ್ಕಾರವಾಗಿದೆ. ಪರಿಶಿಷ್ಟರ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿದ್ದು, ಜನವಿರೋಧಿ, ಅಭಿವೃದ್ಧಿ ವಿರೋಧಿ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸರ್ಕಾರ ಎಚ್ಚೆತ್ತುಕೊಳ್ಳುತ್ತಿಲ್ಲ. ನಾವು ಎಚ್ಚೆತ್ತುಕೊಳ್ಳಬೇಕಾಗಿದೆ. ಮುಂದಿನ ಪಂಚಾಯಿತಿ ಚುನಾವಣೆಗಳಿಗೆ ನಾವು ಸಿದ್ಧರಾಗಬೇಕಾಗಿದೆ. ವಿರೋಧ ಪಕ್ಷದಲ್ಲಿದ್ದಾಗ ಸತ್ಯವನ್ನು ಗಟ್ಟಿಯಾಗಿ ಮಾತನಾಡಬೇಕಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಬಡವರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಬಿಜೆಪಿ ಮುಖಂಡರಾದ ಜಿ.ಚಂದ್ರಣ್ಣ, ಹನುಮಂತರಾಯಪ್ಪ, ಎಕೆಪಿ ನಾಗೇಶ್, ನೆಲಮಂಗಲ ನಾಗರಾಜ್ ಮಾತನಾಡಿದರು. ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿನಿಧನರಾಗಿದ್ದ ಪಕ್ಷದ ಮುಖಂಡರಿಗೆ ಶ್ರದ್ಧಾಂಜಲಿ ಸಲ್ಲಿಸವಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಚ್.ಎಂ.ರವಿಕುಮಾರ್ ಅನಿಲ್, ವೆಂಕಟೇಶ್, ಮುಖಂಡರಾದ ಓಬದೇನಹಳ್ಳಿ ಮುನಿಯಪ್ಪ, ದೇವನಹಳ್ಳಿ ತಾಲೂಕು ಅಧ್ಯಕ್ಷ ಸುನೀಲ್, ಜಿಲ್ಲಾ ಕಾರ್ಯದರ್ಶಿ ಸುನೀಲ್, ಗೊಡ್ಲುಮುದ್ದೇನಹಳ್ಳಿ ಗ್ರಾಪಂ ಅಧ್ಯಕ್ಷ ಎಂ.ಜಗದೀಶ್, ಅಸಂಘಟಿತ ಕಾರ್ಮಿಕರ ಪ್ರಕೋಷ್ಟ ಜಿಲ್ಲಾ ಸಂಚಾಲಕ ನೀಲೇರಿ ಅಂಬರೀಶ್, ಟೌನ್ ಅಧ್ಯಕ್ಷ ಆರ್.ಸಿ.ಮಂಜುನಾಥ್, ತಾಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಉಪಾಧ್ಯಕ್ಷ ರಾಮಕೃಷ್ಣ ಹೆಗಡೆ, ಓಬಿಸಿ ಜಿಲ್ಲಾ ಘಟಕದ ಅಧ್ಯಕ್ಷ ಕನಕರಾಜು, ಎಸ್ಸಿ ಮೋರ್ಚಾ ಬುಳ್ಳಹಳ್ಳಿ ರಾಜಪ್ಪ, ಪ್ರಧಾನ ಕಾರ್ಯದರ್ಶಿ ಡಿ.ಎಂ.ಮುನೀಂದ್ರ, ಜಿಲ್ಲಾ ಸೋಷಿಯಲ್ ಮೀಡಿಯಾ ಸಂಚಾಲಕ ಸಾಗರ್, ಸಿ.ನಾರಾಯಣಸ್ವಾಮಿ, ದೊಡ್ಡಬಳ್ಳಾಪುರ ನಗರಾಧ್ಯಕ್ಷ ಮುದ್ದಪ್ಪ, ತಾಲೂಕು ಅಧ್ಯಕ್ಷ ನಾಗೇಶ್, ರೈತ ಮೋರ್ಚಾ ಅಧ್ಯಕ್ಷ ವಿನಯ್ ಕುಮಾರ್, ವೈದ್ಯಕೀಯ ಪ್ರಕೋಷ್ಟ ಡಾ.ನಾರಾಯಣ, ಸುರೇಶ್, ಬೂದಿಗೆರೆ ನಾರಾಯಣಸ್ವಾಮಿ, ಗಿರೀಶ್, ಬೂದಿಗೆರೆ ನಾಗವೇಣಿ, ರಜನಿ, ವೀಣಾ, ಪ್ರೇಮಾ ಇತರರಿದ್ದರು.