ಅರಸು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ

KannadaprabhaNewsNetwork |  
Published : Aug 22, 2025, 01:00 AM IST
ಮಾಗಡಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರವರ ಜಯಂತಿಯನ್ನು ಗಣ್ಯರ ಸಮ್ಮುಖದಲ್ಲಿ ಆಚರಿಸಲಾಯಿತು. | Kannada Prabha

ಸಾರಾಂಶ

ಮಾಗಡಿ: ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಮಾತ್ರ ಅವರಿಗೆ ಗೌರವ ಸಲ್ಲಿಸಿದಂತೆ ಎಂದು ತಾಪಂ ಇಒ ಜೈಪಾಲ್‌ ತಿಳಿಸಿದರು.

ಮಾಗಡಿ: ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಮಾತ್ರ ಅವರಿಗೆ ಗೌರವ ಸಲ್ಲಿಸಿದಂತೆ ಎಂದು ತಾಪಂ ಇಒ ಜೈಪಾಲ್‌ ತಿಳಿಸಿದರು.

ಪಟ್ಟಣದ ತಹಸೀಲ್ದಾ‌ರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ತಾಲೂಕು ಹಿಂದುಳಿದ ಜಾತಿಗಳ ಮಹಾಒಕ್ಕೂಟದ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ಎಂ.ಎನ್. ಮಂಜುನಾಥ್ ಮಾತನಾಡಿ, ದಿ.ದೇವರಾಜ ಅರಸು ಅವರು ತಮ್ಮ ಆಡಳಿತಾವಧಿಯಲ್ಲಿ ಹಿಂದುಳಿದ ವರ್ಗಗಳ ಆರ್ಥಿಕ ಅಭಿವೃದ್ಧಿಗೆ ಶ್ರಮಿಸಿದ ಧೀಮಂತ ಜನನಾಯಕ. ಇಂದಿರಾಗಾಂಧಿ ಅವರು ದೇಶದ ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಉಳುವವನೇ ಭೂ ಒಡೆಯ ಕಾನೂನನ್ನು ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದ ಅರಸು ಅವರು ಜಾರಿ ಮಾಡಿ ಬಡವರಿಗೆ ಭೂಮಿ ದೊರಕಲು ಅವಕಾಶ ಮಾಡಿಕೊಟ್ಟರು. ದೇಶಕ್ಕೆ ಸಂವಿಧಾನ ನೀಡಿ ಸರ್ವರಿಗೂ ಸಮಪಾಲು ನೀಡಿದ ಅಂಬೇಡ್ಕರ್ ಆಶಯದಂತೆ ಅವರ ಮಾರ್ಗದಲ್ಲಿ ಆಡಳಿತ ನಡೆಸಿದ ಅರಸು ಇಂದಿನ ರಾಜಕಾರಣಿಗಳಿಗೆ ಮಾದರಿ ಎಂದು ತಿಳಿಸಿದರು.

ಮಹಾ ಒಕ್ಕೂಟದ ಉಪಾಧ್ಯಕ್ಷ ತೇಜಸ್ ಕುಮಾರ್ ಮಾತನಾಡಿ, ಶಾಸಕ ಬಾಲಕೃಷ್ಣ ನೇತೃತ್ವದಲ್ಲಿ ತಾಲೂಕಿನಲ್ಲಿ ದೇವರಾಜು ಅರಸು ಜಯಂತಿ ದೊಡ್ಡಮಟ್ಟದಲ್ಲಿ ಆಚರಿಸುತ್ತೇವೆ. ಈಗ ವಿಧಾನಸಭೆ ಅಧಿವೇಶನ ನಡೆಯುತ್ತಿರುವುದರಿಂದ ತಾಲೂಕು ಆಡಳಿತದಿಂದ ಸರಳವಾಗಿ ಆಚರಿಸಿದ್ದೇವೆ. ಅದ್ಧೂರಿ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಹಿರಿಯರನ್ನು ಗೌರವಿಸುತ್ತೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ಪ್ರಭಾಕರ್, ಮಹಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಾರಣ್ಣ,

ಮುಖಂಡರಾದ ಪುರಸಭೆ ಮಾಜಿ ಅಧ್ಯಕ್ಷ ಪಿ.ವಿ.ಸೀತಾರಾಂ, ತಾಪಂ ಮಾಜಿ ಸದಸ್ಯ ಸಿ.ಜಯರಾಂ, ಹೊಸಪೇಟೆ ಅಶ್ವತ್ಥ್‌, ಕುದೂರು ಪುರುಷೋತ್ತಮ್, ಗೋಪಾಲ್, ಪುಟ್ಟರಾಜು ಯಾದವ್, ದೊಡ್ಡಿ ಲಕ್ಷ್ಮಣ್, ತಿಪ್ಪಸಂದ್ರ ರಘು, ಪ್ರಕಾಶ್, ಕಲ್ಯಾಗೇಟ್ ಶಿವಕುಮಾರ್, ಫೋಟೋ ಲಕ್ಷ್ಮಿಪತಿ, ಶಾಂತರಾಜು, ಮಹದೇವ್, ಪವನ್, ಬಸವರಾಜು, ಗೌತಮ್ ಇತರರು ಭಾಗವಹಿಸಿದ್ದರು.

(ಫೋಟೋ ಕ್ಯಾಫ್ಷನ್‌)

ಮಾಗಡಿಯ ತಾಲೂಕು ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಜಯಂತಿ ಆಚರಿಸಲಾಯಿತು. ತಾಪಂ ಇಒ ಜೈಪಾಲ್‌, ಉಪತಹಸೀಲ್ದಾರ್ ಪ್ರಭಾಕರ್, ತಾಲೂಕು ಹಿಂದುಳಿದ ಜಾತಿಗಳ ಮಹಾಒಕ್ಕೂಟದ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ಎಂ.ಎನ್. ಮಂಜುನಾಥ್‌, ಪ್ರಧಾನ ಕಾರ್ಯದರ್ಶಿ ಮಾರಣ್ಣ ಇತರರು ಪಾಲ್ಗೊಂಡಿದ್ದರು.

PREV

Recommended Stories

‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ