ಮಾತೃ ಭಾಷೆ ಉಳಿಸಿ ಬೆಳೆಸಲು ದುಡಿಯೋಣ: ಎಸ್.ಆರ್.ಶ್ರೀನಿವಾಸ್

KannadaprabhaNewsNetwork |  
Published : Nov 03, 2026, 02:00 AM IST
ಗುಬ್ಬಿಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ 71 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. | Kannada Prabha

ಸಾರಾಂಶ

ವಿಶೇಷ ಉಪನ್ಯಾಸ ನೀಡಿದ ಪ್ರಾಂಶುಪಾಲ ಪ್ರೊ.ಓ.ನಾಗರಾಜಯ್ಯ, ಕನ್ನಡನಾಡು ರಕ್ಷಣೆ ನಮ್ಮೆಲ್ಲರ ಕರ್ತವ್ಯ. 1956 ನವಂಬರ್ 1 ಮರೆಯಲಾಗದ ದಿನ. ಭಾಷಾವಾರು ಪ್ರಾಂತ್ಯವನ್ನು ಒಗ್ಗೂಡಿಸಿದ ದಿನ. ಏಕೀಕರಣ ಕರ್ನಾಟಕ ಹೊಸ ರಾಜ್ಯ ಉದಯ, ಆಲೂರು ವೆಂಕಟರಾಯರು ಸ್ಮರಿಸಬೇಕು. ಏಕೀಕೃತ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ್ದು ನಾವು ಮರೆಯಬಾರದು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ನಮ್ಮ ಮಾತೃ ಭಾಷೆ ಉಳಿಸಿ ಬೆಳೆಸಲು ಕನ್ನಡ ಪರ ದನಿಯಾಗಿ ದುಡಿಯೋಣ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಕರೆ ನೀಡಿದರು.ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ 71 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ ಅನ್ಯ ಭಾಷೆಗಳ ಮಧ್ಯೆ ಉಳಿಸಬೇಕು. ಅತಂತ್ರ ಸ್ಥಿತಿಯಲ್ಲಿ ನಾವು ಇದ್ದೇವೆ. ಬೆಂಗಳೂರು ನಗರದಲ್ಲಿ ಎಲ್ಲಾ ಭಾಷೆಗಳು ಇದ್ದು ನಮ್ಮ ಕನ್ನಡ ಹುಡುಕುವ ಸ್ಥಿತಿ ಉಂಟಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ಶಾಸ್ತ್ರೀಯ ಸ್ಥಾನಮಾನ ಪಡೆದಿದೆ. ಮೈಸೂರು ರಾಜ್ಯ ಕರ್ನಾಟಕವಾಗಿ ನಾಮಕರಣ ಮಾಡಲಾಯಿತು. ಸಾವಿರಾರು ವರ್ಷಗಳ ಇತಿಹಾಸದ ಕನ್ನಡ ಅಸ್ಮಿತೆ ಉಳಿಸಿಕೊಳ್ಳುವುದೇ ನಮ್ಮ ಜವಾಬ್ದಾರಿಯಾಗಿದೆ. ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ನಮ್ಮ ಭಾಷೆ ಸಾಹಿತ್ಯ ಸಂಸ್ಕೃತಿ ಪರಂಪರೆ ಉಳಿಸಲು ಇಂದಿನ ಪೀಳಿಗೆಗೆ ಸವಾಲಾಗಿದೆ. ಈ ನಿಟ್ಟಿನಲ್ಲಿ ಕನ್ನಡಿಗರು ಭಾಷೆ ನಾಡು, ಜಲ, ಗಡಿಗಾಗಿ ಹೋರಾಟ ನಿರಂತರ ಮಾಡಬೇಕಿದೆ ಎಂದು ತಿಳಿಸಿದರು.

ತಹಸೀಲ್ದಾರ್ ಆರತಿ.ಬಿ ಧ್ವಜಾರೋಹಣ ನೆರವೇರಿಸಿ, ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಿ ನಮ್ಮ ಮೈಮನಸ್ಸು ತುಂಬಬೇಕು. ಪ್ರಾಂತೀಯ ಭಾಷೆಗಳನ್ನು ಒಗ್ಗೂಡಿಸಿ ಕರ್ನಾಟಕ ಏಕೀಕರಣ, ಕರ್ನಾಟಕ ನಾಮಕರಣ ಮಾಡಿ ರಾಜ್ಯ ಸ್ಥಾಪನೆ ಮಾಡಲಾಯಿತು. ಈ 71ನೇ ರಾಜ್ಯೋತ್ಸವ ಯುವ ಪೀಳಿಗೆಗೆ ತಿಳಿಯಬೇಕಿದೆ. ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ಗಣ್ಯರ ಸ್ಮರಣೆ ಅಗತ್ಯವಿದೆ. ನಮ್ಮ ಸಾಹಿತ್ಯ ಸಂಸ್ಕೃತಿ ಬೆಳೆಸಿದ ಕವಿಗಳು, ಸಾಹಿತಿಗಳ ಸ್ಮರಣೆ ಕೂಡಾ ನಮ್ಮೆಲ್ಲರ ಕರ್ತವ್ಯ. ಕರ್ನಾಟಕ ರಾಜ್ಯ ದೇಶದ ದೊಡ್ಡ ರಾಜ್ಯದಲ್ಲಿ ಒಂದಾಗಿ ಬೆಳೆದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ತನ್ನದೇ ವಿಶಿಷ್ಟ ಕೊಡುಗೆ ನೀಡಿದೆ ಎಂದು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಪ್ರಾಂಶುಪಾಲ ಪ್ರೊ.ಓ.ನಾಗರಾಜಯ್ಯ, ಕನ್ನಡನಾಡು ರಕ್ಷಣೆ ನಮ್ಮೆಲ್ಲರ ಕರ್ತವ್ಯ. 1956 ನವಂಬರ್ 1 ಮರೆಯಲಾಗದ ದಿನ. ಭಾಷಾವಾರು ಪ್ರಾಂತ್ಯವನ್ನು ಒಗ್ಗೂಡಿಸಿದ ದಿನ. ಏಕೀಕರಣ ಕರ್ನಾಟಕ ಹೊಸ ರಾಜ್ಯ ಉದಯ, ಆಲೂರು ವೆಂಕಟರಾಯರು ಸ್ಮರಿಸಬೇಕು. ಏಕೀಕೃತ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ್ದು ನಾವು ಮರೆಯಬಾರದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದ ಎಲ್ಲಾ ಯುವಕವಿಗಳಿಗೆ ಸಂಘದ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.

ವೇದಿಕೆಯಲ್ಲಿ ತಾಪಂ ಇಓ ರಂಗನಾಥ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ್, ತಾಲೂಕು ವೈದ್ಯಾಧಿಕಾರಿ ಡಾ.ಸವಿತಾ, ಪಪಂ ಮಾಜಿ ಸದಸ್ಯರಾದ ಮಹಮದ್ ಸಾದಿಕ್, ಮಂಗಳಮ್ಮ, ಮುಖ್ಯಾಧಿಕಾರಿ ಮಂಜುಳಾದೇವಿ, ಪಂಚಾಯತ್ ರಾಜ್ ಇಲಾಖೆ ಎಇಇ ನಾಗೇಂದ್ರಪ್ಪ, ಸಿಪಿಐ ರಾಘವೇಂದ್ರ, ಪ್ರಭಾರ ಬಿಇಓ ಮಧುಸೂದನ್, ಕಸಾಪ ತಾಲೂಕು ಅಧ್ಯಕ್ಷ ಯತೀಶ್, ಗುಬ್ಬಿ ಹಿತ ರಕ್ಷಣಾ ಸಮಿತಿಯ ಯಲ್ಲಪ್ಪ, ಸಲೀಂಪಾಷ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ