ವಿಶ್ವಕರ್ಮರು ಕಸುಬುಗಳಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಲಿ: ಸುಜ್ಞಾನಮೂರ್ತಿ

KannadaprabhaNewsNetwork |  
Published : Dec 23, 2025, 02:15 AM IST
ಕಾರ್ಯಕ್ರಮದಲ್ಲಿ 2026ರ ದಿನದರ್ಶಿಕೆ ಬಿಡುಗಡೆಗೊಳಿಸಲಾಯಿತು. | Kannada Prabha

ಸಾರಾಂಶ

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಿಂದುಳಿದವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ವಿಶ್ವಕರ್ಮ ಅಭಿವೃದ್ಧಿ ನಿಗಮ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಮಾಹಿತಿ ಪಡೆದು ಸಮಾಜದವರು ಸದುಪಯೋಗ ಪಡಿಸಿಕೊಳ್ಳಬೇಕು.

ಗದಗ: ಸಾಮಾಜಿಕ ಜೀವನಕ್ಕೆ ಅತ್ಯಂತ ಪೂರಕವಾದ ವಿಶ್ವಕರ್ಮ ಸಮಾಜದ ಪಂಚ ಕಸುಬುಗಳು ಪಾರಂಪರಿಕತೆಯಿಂದ ಕೂಡಿದ್ದು, ಆಧುನಿಕ ತಕ್ಕಂತೆ ತಂತ್ರಜ್ಞಾನ, ಕಂಪ್ಯೂಟರ್ ಡಿಸೈನ್‌ಗಳನ್ನು ಅಳವಡಿಸಿಕೊಳ್ಳುವ ಮೂಲಕ ಕಸುಬುಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು ಸಮಾಜದವರು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸುಜ್ಞಾನಮೂರ್ತಿ ಪಿ. ತಿಳಿಸಿದರು.ನಗರದ ವಿಶ್ವಕರ್ಮ ಸಮುದಾಯ ಭವನದಲ್ಲಿ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಂಗ ಸಂಸ್ಥೆಗಳ ವತಿಯಿಂದ ನಡೆದ 2026ರ ದಿನದರ್ಶಿಕೆ ಬಿಡುಗಡೆ ಹಾಗೂ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಿಂದುಳಿದವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ವಿಶ್ವಕರ್ಮ ಅಭಿವೃದ್ಧಿ ನಿಗಮ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಮಾಹಿತಿ ಪಡೆದು ಸಮಾಜದವರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ವಿಧಾನಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ ಮಾತನಾಡಿ, ಭಾರತೀಯ ಸಂಸ್ಕೃತಿ, ಪರಂಪರೆ, ಸಂಸ್ಕಾರಗಳನ್ನು ಉಳಿಸಿ ಬೆಳೆಸುವಲ್ಲಿ ವಿಶ್ವಕರ್ಮರ ಪಾತ್ರ ಅತ್ಯಂತ ಹಿರಿದಾಗಿದೆ. ಇಂದಿನ 21ನೇ ಶತಮಾನ ಜ್ಞಾನ, ವಿದ್ಯೆ, ಕೌಶಲ್ಯಗಳ ಯುಗವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ವಿಶ್ವಕರ್ಮ ಸಮಾಜದವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕು. ಶಿಕ್ಷಣವೇ ಶ್ರೇಷ್ಠ ಸಿರಿವಂತಿಕೆಯಾಗಿದೆ ಎಂದರು. ವಿಶ್ವಕರ್ಮ ಸುಮುದಾಯಗಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಾಬು ಪತ್ತಾರ ಮಾತನಾಡಿ, ಇತ್ತೀಚೆಗೆ ವಿಶ್ವಕರ್ಮ ಸಮುದಾಯ ಸಮರ್ಥವಾಗಿ ಸಂಘಟಿತವಾಗುತ್ತಿದ್ದು, ಇದರೊಟ್ಟಿಗೆ ರಾಜಕೀಯ ಕ್ಷೇತ್ರದಲ್ಲಿ ಕೂಡಾ ಛಾಪು ಮೂಡಿಸುತ್ತ ಸಾಗಬೇಕು. ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದರು.ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಗೋಪಾಲ ಡಿ. ಕಡ್ಲಿಕೊಪ್ಪ, ರಾಜ್ಯ ವಿಶ್ವಕರ್ಮ ಸಮಾಜದ ಅಧ್ಯಕ್ಷ ಈಶ್ವರಾಚಾರ್ಯ ಎಂ.ಪಿ., ನೌಕರರ ಸಂಘದ ನಿರ್ದೇಶಕ ಬಿ.ಎಂ. ಬಡಿಗೇರ ಅವರು ಮಾತನಾಡಿದರು. 2025ರ ರಾಷ್ಟ್ರ ಹಾಗೂ 2014ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ವೈ. ಶಿಲ್ಪಿ ಕಲಬುರಗಿ ಹಾಗೂ 2025ರ ಬಾಗಲಕೋಟಿಯ ನಾಗಲಿಂಗಪ್ಪ ಗಂಗೂರ, ಶ್ರೀಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಉಮೇಶ ಕೆ. ಅರ್ಕಸಾಲಿ, ಪತ್ರಕರ್ತರಾದ ಮೌನೇಶ ಸಿ. ಬಡಿಗೇರ(ನರೇಗಲ್ಲ), ಗಿರೀಶ ಕಮ್ಮಾರ ಹಾಗೂ ಮಂಜುನಾಥ ಪತ್ತಾರ ಅವರನ್ನು ಸನ್ಮಾನಿಸಲಾಯಿತು.ವರವಿ ಕ್ಷೇತ್ರದ ಮೌನೇಶ್ವರ ದೇವಸ್ಥಾನ ಹಾಗೂ ಮಠದ ವಿಕಾಸ ಟ್ರಸ್ಟ್ ಕಮಿಟಿ ಅಧ್ಯಕ್ಷ ಮೋಹನ ನರಗುಂದ, ಗೌರವಾಧ್ಯಕ್ಷ ಎ.ಎನ್. ಬಡಿಗೇರ, ಬಿ.ಎಂ. ಬಡಿಗೇರ, ಮೌನೇಶ ಅರ್ಕಸಾಲಿ, ಶ್ರೀಧರ ಕೊಣ್ಣೂರ, ಕೆ.ಎಸ್. ಬಡಿಗೇರ, ರಿಂದಮ್ಮ ಬಡಿಗೇರ, ಶಿವಲೀಲಾ ಕೆ. ಬಡಿಗೇರ, ಸಿ.ವಿ. ಬಡಿಗೇರ ಇದ್ದರು. ಎಸ್.ಎನ್. ಬಡಿಗೇರ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಕೆ.ಎಸ್. ಬಡಿಗೇರ ಸ್ವಾಗತಿಸಿದರು. ಸುಮಂಗಲಾ ಪತ್ತಾರ ನಿರೂಪಿಸಿದರು. ಆರ್.ಎಂ. ಬಡಿಗೇರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌