ಗದಗ: ಮಹಿಳೆಯರು ಮನೆ ಬಿಟ್ಟು ಹೊರಗೆ ಬರುವುದು ಕಷ್ಟವಾಗುತ್ತಿತ್ತು. ಆದರೆ ಇಂದಿನ ದಿನಮಾನದಲ್ಲಿ ಮಹಿಳೆಯರು ಪುರುಷರಷ್ಟೇ ಸರಿಸಮಾನವಾಗಿ ಮುಂದೆ ಬಂದಿರುತ್ತಾರೆ. ಯಶಸ್ವಿ ಉದ್ಯಮದಾರರಾಗಿ ಆರ್ಥಿಕವಾಗಿ ಸ್ವಾಲಂಭಿಗಳಾಗಿದ್ದಾರೆ ಎಂದು ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸಂಶಿಮಠ ಹೇಳಿದರು.
ಮಹಿಳೆಯರು ಷೇರು ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಣ ಹೂಡಿಕೆ ಮಾಡುತ್ತಿದ್ದಾರೆ. ತಾವು ಕೂಡಾ ಜಾಗೃತೆಯಿಂದ ಅದರ ಬಗ್ಗೆ ಅಭ್ಯಾಸ ಮಾಡಿ ಮುಂದೂವರೆಯುವುದು ಸೂಕ್ತವಾಗಿದೆ. ಈಗ ತಂತ್ರಜ್ಞಾನ ಸಾಕಷ್ಟು ಮುಂದೂವರೆದಿದ್ದು, ಮೊಬೈಲ್ ಬಂದ ನಂತರ ಸಾಕಷ್ಟು ಅನುಕೂಲವಾಗಿದೆ ಎಂದರು.
ಸಂಸ್ಥೆಯ ಗೌರವ ಕಾರ್ಯದರ್ಶಿ ಅಶೋಕಗೌಡ ಕೆ. ಪಾಟೀಲ ಮಾತನಾಡಿ, ಸಂಸ್ಥೆಯ ಮಹಿಳಾ ಘಟಕವು ಯಶಸ್ವಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸಾಕಷ್ಟು ಮಹಿಳಾ ಉದ್ಯಮದಾರರಿಗೆ ತಿಳಿವಳಿಕೆ ನೀಡುವಂತಹ ಕಾರ್ಯಕ್ರಮ ಏರ್ಪಡಿಸುತ್ತಿರುವುದು ಸಂತೋಷವನ್ನುಂಟು ಮಾಡುತ್ತಿದೆ ಎಂದರು.ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಜಯಶ್ರೀ ತಾತನಗೌಡ ಪಾಟೀಲ ಮಾತನಾಡಿ, ಕಳೆದ 4 ವರ್ಷಗಳಿಂದ ಹುಟ್ಟಿರುವಂತಹ ಮಹಿಳಾ ಘಟಕವು ಸಾಕಷ್ಟು ಯಶಸ್ವಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಮಹಿಳೆಯರಿಗೆ ಸಾಕಷ್ಟು ಮಾಹಿತಿ ನೀಡುವ ಕಾರ್ಯ ಮಾಡುತ್ತಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭನೆಯ ಕಡೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಬೇಕೆಂದು ತಿಳಿಸಿದರು.