ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವಂತಾಗಲಿ-ನಂದೀಶ್ವರಿ ಪಾಟೀಲ

KannadaprabhaNewsNetwork |  
Published : Sep 01, 2025, 01:04 AM IST
ಪೋಟೊ-೩೧ ಎಸ್.ಎಚ್.ಟಿ. ೧ಕೆ-ವಿಶ್ವ ಕಂಪ್ಯೂಟರ್ ಅಕ್ಯಾಡಮಿ ಸಂಸ್ಥೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪಡೆದ ಸಮೀನ ಲಕ್ಷೆö್ಮÃಶ್ವರ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಆರ್ಥಿಕ ಬದಲಾವಣೆಗಳನ್ನು ತರುವ ಮತ್ತು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವ ಮಹಿಳಾ ಮಾಲೀಕತ್ವದ ಉದ್ಯಮಗಳು, ಮೇಕಪ್ ತರಬೇತಿ ಸಮಾಜದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿವೆ ಎಂದು ನಂದೀಶ್ವರಿ ಪಾಟೀಲ ಹೇಳಿದರು.

ಶಿರಹಟ್ಟಿ: ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಆರ್ಥಿಕ ಬದಲಾವಣೆಗಳನ್ನು ತರುವ ಮತ್ತು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವ ಮಹಿಳಾ ಮಾಲೀಕತ್ವದ ಉದ್ಯಮಗಳು, ಮೇಕಪ್ ತರಬೇತಿ ಸಮಾಜದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿವೆ ಎಂದು ನಂದೀಶ್ವರಿ ಪಾಟೀಲ ಹೇಳಿದರು. ಶಿರಹಟ್ಟಿ ನಗರದ ವಿಶ್ವ ಕಂಪ್ಯೂಟರ್ ಆಕಾಡೆಮಿ ವತಿಯಿಂದ ಮಹಿಳೆಯರಿಗಾಗಿ ನಡೆದ ಉಚಿತ ಮೇಕಪ್ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಿರುದ್ಯೋಗಿ ಮಹಿಳೆಯರು ತಾವು ಪಡೆದ ಸ್ವ ಉದ್ಯೋಗದ ತರಬೇತಿಯನ್ನು ವೃತ್ತಿಗೆ ಪೂರಕವಾಗಿ ಬಳಸಿಕೊಂಡಾಗ ತರಬೇತಿ ಪಡೆದದ್ದಕ್ಕೂ ಸಾರ್ಥಕವಾಗುತ್ತದೆ ಎಂದರು.ಉದ್ಯಮ ಕ್ಷೇತ್ರದಲ್ಲಿ ಉದ್ಯಮಿಗಳಾಗಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯ ಮತ್ತು ದೇಶದಲ್ಲಿ ಗಮನಾರ್ಹ ವ್ಯವಹಾರ ಮತ್ತು ಆರ್ಥಿಕ ಬೆಳವಣಿಗೆಗೆ ಕಾರಣವಾಗಿದೆ. ಸಮಯ ಕಳೆಯಲು ತರಬೇತಿ ಪಡೆಯದೆ ಬದುಕಿನ ಉನ್ನತಿಗೆ ಪೂರಕವಾಗಿ ಅದನ್ನು ಬಳಸಿಕೊಳ್ಳಬೇಕು. ಆ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ತಿಳಿಸಿದರು.ಮಹಿಳೆಯರು ಅಡುಗೆ ಮನೆಗೆ ಸೀಮಿತ ಎನ್ನುವ ಕಾಲವೊಂದಿತ್ತು. ಆದರೀಗ ಅದು ಸಂಪೂರ್ಣ ಬದಲಾಗಿದ್ದು, ಜಲಾಂತರ್ಗಾಮಿಯಿಂದ ಅಂತರಿಕ್ಷದವರೆಗೆ ಮಹಿಳೆಯರು ತಮ್ಮ ಛಾಪು ಮೂಡಿಸಿದ್ದಾರೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಪುರುಷರನ್ನು ಅವಲಂಬಿಸಿ ಬದುಕುವ ಸ್ಥಿತಿ ನಿರ್ಮಾಣವಾಗಿತ್ತು. ನಂತರದ ದಿನಗಳಲ್ಲಿ ಮಹಿಳೆಯರು ತಮ್ಮ ಕ್ಷೇತ್ರಗಳನ್ನು ವಿಸ್ತರಿಸಿಕೊಂಡು ಹತ್ತಾರು ಕ್ಷೇತ್ರದಲ್ಲಿ ತನ್ನದೇ ಆದ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದಾರೆ ಎಂದರು.ಉಚಿತವಾಗಿ ಮಹಿಳೆಯರಿಗೆ ತರಬೇತಿ ನಿಡುತ್ತಿರುವ ವಿಶ್ವ ಕಂಪ್ಯೂಟರ್ ಆಕಾಡೆಮಿ ಸಂಸ್ಥೆಯ ಅಧ್ಯಕ್ಷರಾದ ಬಸವರಾಜ ಸಂಗಪ್ಪಶೆಟ್ಟರ ಅವರಿಗೆ ಮಹಿಳೆಯರ ಪರವಾಗಿ ಧನ್ಯವಾದ ತಿಳಿಸಿದ ಅವರು, ವಿಶ್ವ ಸಂಸ್ಥೆಯಿಂದ ಇನ್ನೂ ಹೆಚ್ಚು ಹೆಚ್ಚು ತರಬೇತಿಗಳು ನಡೆದು ಮಹಿಳೆಯರ ಜೀವನಕ್ಕೆ ಸಹಾಯವಾಗಲಿ ಎಂದರು. ವಿಶ್ವ ಕಂಪ್ಯೂಟರ್ ಸಂಸ್ಥೆಯ ಅಧ್ಯಕ್ಷ ಬಸವರಾಜ ಸಂಗಪ್ಪಶೆಟ್ಟರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಇಂದು ಮಹಿಳೆಯರು ಕಾಲಿಡದ ಕ್ಷೇತ್ರಗಳಿಲ್ಲ ಎನ್ನುವ ಮಟ್ಟಿಗೆ ಎಲ್ಲ ಕ್ಷೇತ್ರಗಳಲ್ಲೂ ತನ್ನ ಅಸ್ತಿತ್ವ ಪ್ರದರ್ಶಿಸಿದ್ದಾರೆ. ಪ್ರತಿಯೊಬ್ಬ ಮಹಿಳೆಯರು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂದು ಹೇಳಿದರು.ಬದಲಾದ ಪರಿಸ್ಥಿತಿಯಲ್ಲಿ ಮಹಿಳೆಯರು ದುಡಿದು ಗಳಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಕುಟುಂಬ ನಿರ್ವಹಣೆಗೆ ಮಹಿಳೆಯರ ದುಡಿಮೆ ನೆರವಾಗುತ್ತದೆ. ಮಹಿಳೆಯರು ಸಮಯಕ್ಕೆ ಹೆಚ್ಚು ಮಹತ್ವ ಕೊಡಬೇಕು. ಆರ್ಥಿಕ ಚಟುವಟಿಕೆ ಕೈಗೊಳ್ಳುವಾಗ ಕುಟುಂಬವನ್ನು ನಿರ್ಲಕ್ಷಿಸಬಾರದು. ಕುಟುಂಬ ಮತ್ತು ಗಳಿಕೆ ಜತೆಯಾಗಿ ನಡೆಯಬೇಕು. ಮಹಿಳೆಯರು ಸ್ವಾವಲಂಬಿಯಾಗಿ ಬದುಕುವ ಆತ್ಮಭರವಸೆ ಹೊಂದುವ ಮೂಲಕ ಸಮಾಜದಲ್ಲಿ ಆರ್ಥಿಕ ಸ್ಥಿತಿಯನ್ನು ರೂಪಿಸಿಕೊಳ್ಳಬೇಕು. ಗ್ರಾಮೀಣ ಭಾಗದ ಮಹಿಳೆಯರು ಸ್ವಾವಲಂಬಿ ಬದುಕು ನಿರ್ಮಿಸಿಕೊಳ್ಳಲು ಸಮಾಜದಲ್ಲಿ ಮುನ್ನೆಲೆಗೆ ಬರಬೇಕು ಎಂದು ಕರೆ ನೀಡಿದರು. ಇದೆ ಸಮಯದಲ್ಲಿ ರಾಜ್ಯಮಟ್ಟದ ಮೇಕಪ್ ಆರ್ಟಿಸ್ಟ್ ಪ್ರಶಸ್ತಿ ಪಡೆದ ಸಮೀನಾ ಲಕ್ಷ್ಮೇಶ್ವರ ಅವರನ್ನು ಸನ್ಮಾನಿಸಲಾಯಿತು. ಉಚಿತ ತರಬೇತಿ ಪಡೆದ ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಇದ್ದರು.

PREV

Recommended Stories

ಮಲೆನಾಡು, ಕರಾವಳಿಯಲ್ಲಿ ಮಳೆ : ಜನಜೀವನ ಅಸ್ತವ್ಯಸ್ತ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ