ಯೋಗ ನಿತ್ಯಜೀವನದ ಭಾಗವಾಗಲಿ: ನವೀನ್ ಶೆಟ್ಟಿ

KannadaprabhaNewsNetwork |  
Published : Jun 23, 2026, 03:00 AM IST
ಜಿಲ್ಲಾ ಬಿಜೆಪಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆ | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತೀಯ ಯೋಗ ಪದ್ಧತಿಗೆ ವಿಶ್ವ ಮಾನ್ಯತೆ ಲಭಿಸಿದೆ. ಈ ಯೋಗದಿಂದ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಪೂರ್ಣ ಜೀವನ ಸಾಧ್ಯ. ಆದ್ದರಿಂದ ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ನಿತ್ಯ ಜೀವನದ ಭಾಗವಾಗಿರಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತೀಯ ಯೋಗ ಪದ್ಧತಿಗೆ ವಿಶ್ವ ಮಾನ್ಯತೆ ಲಭಿಸಿದೆ. ಈ ಯೋಗದಿಂದ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಪೂರ್ಣ ಜೀವನ ಸಾಧ್ಯ. ಆದ್ದರಿಂದ ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ನಿತ್ಯ ಜೀವನದ ಭಾಗವಾಗಿರಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಂಗಳೂರು ವಿಭಾಗ ಮಾಜಿ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಂದರ್, ಆರೋಗ್ಯ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಭಟ್ ಮತ್ತಿತರರಿದ್ದರು.ಯೋಗ ಶಿಕ್ಷಕಿ ಮಮತಾ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ಒಂದು ಗಂಟೆ ಕಾಲ ಸಾಮೂಹಿಕ ಯೋಗಾಭ್ಯಾಸ ನಡೆಯಿತು. ಸಹ ಶಿಕ್ಷಕ ಗಣೇಶ್ ಆಚಾರ್ಯ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಬಿಜೆಪಿ ಬೃಹತ್ ಪ್ರತಿಭಟನೆ
ನಿಪ್ಪಾಣಿಯಲ್ಲಿ ಅಕ್ರಮ ಪಡಿತರ ಅಕ್ಕಿ ದಂಧೆ ಬಯಲು