ಯೋಗಭ್ಯಾಸ ನಿತ್ಯ ಜೀವನದ ಅವಿಭಾಜ್ಯ ಅಂಗವಾಗಲಿ

KannadaprabhaNewsNetwork |  
Published : Jun 22, 2026, 02:00 AM IST
ಕ್ಯಾಪ್ಷನ21ಕೆಡಿವಿಜಿ31, 32 ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ, ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲ ರಾವ್, ಎಸ್‌ಪಿ ಎಚ್.ಟಿ.ಶೇಖರ್ ಇತರರು ಇದ್ದರು. | Kannada Prabha

ಸಾರಾಂಶ

ನಾಗರೀಕರು ಯೋಗವನ್ನು ತಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು. ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ದಿವ್ಯೌಷಧ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

- ಒತ್ತಡದ ಬದುಕಿಗೆ ಯೋಗಕಲೆ ದಿವ್ಯೌಷಧ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ನಾಗರೀಕರು ಯೋಗವನ್ನು ತಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು. ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ದಿವ್ಯೌಷಧ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.

ಭಾನುವಾರ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ, ವಿವಿಧ ಇಲಾಖೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ 12ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ-2026 ಕಾರ್ಯಕ್ರಮದಲ್ಲಿ ಯೋಗದ ಮಹತ್ವ ಉದ್ದೇಶಿಸಿ ಅವರು ಮಾತನಾಡಿದರು.

''''''''ಆರೋಗ್ಯ ವೃದ್ಧಾಕ್ಕಾಗಿ ಯೋಗ'''''''' ಎಂಬ ಘೋಷವಾಕ್ಯದೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಗವನ್ನು ಪ್ರೋತ್ಸಾಹಿಸುತ್ತಿದ್ದು, ನಾಗರೀಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಯೋಗ ದಿನಾಚರಣೆಯನ್ನು ಕೇವಲ ಸಾಂಕೇತಿಕವಾಗಿ ಆಚರಿಸದೆ, ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವ ನಿಟ್ಟಿನಲ್ಲಿ ಯೋಗವನ್ನು ದೈನಂದಿನ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳಬೇಕೆಂದು ತಿಳಿಸಿದರು.

ಯೋಗಾಭ್ಯಾಸವು ಕೇವಲ ಒಂದು ದಿನದ ಪ್ರದರ್ಶನಕ್ಕೆ ಸೀಮಿತವಾಗಬಾರದು. ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು, ಸಾಮಾನ್ಯ ನಾಗರೀಕರು ಹಾಗೂ ಗೃಹಿಣಿಯರು ಸೇರಿದಂತೆ ಪ್ರತಿಯೊಬ್ಬರೂ ಯೋಗದ ಮೂಲಕ ದಿನನಿತ್ಯದ ಒತ್ತಡಗಳಿಂದ ದೂರವಿರಬಹುದು. ನಿಯಮಿತ ಯೋಗಾಭ್ಯಾಸದಿಂದ ವಿವಿಧ ಕಾಯಿಲೆಗಳನ್ನು ತಡೆಗಟ್ಟಬಹುದು ಮತ್ತು ಆಸ್ಪತ್ರೆಗೆ ಭೇಟಿ ನೀಡುವ ಅನಿವಾರ್ಯತೆ ಕಡಿಮೆ ಮಾಡಿಕೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ 1000ಕ್ಕೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಏಕತಾ ಮತ್ತು ನಿರೀಕ್ಷಿತ ಡೊಳ್ಳಿನ್ ಯೋಗಾಭ್ಯಾಸ ಮಾಡಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಜಿಪಂ ಉಪ ಕಾರ್ಯದರ್ಶಿ ಮಮತ ಹೊಸಗೌಡರ್, ಸಿಪಿಒ ಮಲ್ಲಾನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಯೋಗೇಂದ್ರ ಕುಮಾರ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಶ್ವಿನಿ ಆಯುರ್ವೇದಿಕ್ ಕಾಲೇಜಿನ ವಿದ್ಯಾರ್ಥಿನಿಯರು ನೃತ್ಯ ರೂಪಕ ಪ್ರದರ್ಶಿಸಿದರು.

- - -

-21ಕೆಡಿವಿಜಿ31, 32 ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲ ರಾವ್, ಎಸ್‌ಪಿ ಎಚ್.ಟಿ.ಶೇಖರ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕಾಡೆಮಿಗಳಿಂದ ಹೊರನಾಡು ಕನ್ನಡಿಗರಿಗೆ ಪ್ರಾಶಸ್ತ್ಯ ಸಿಗಲಿ: ಕನ್ನಡ ಸಂಘಗಳು
ಅವೈಜ್ಞಾನಿಕ ಕಾಮಗಾರಿಗೆ ವಿರೋಧ: ರಸ್ತೆ ತಡೆದು ಪ್ರತಿಭಟನೆ