ಯೋಗಿವೇಮನರ ಸಂದೇಶ ಜಗದಗಲ ಪಸರಿಸಲಿ: ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ

KannadaprabhaNewsNetwork |  
Published : Jan 20, 2026, 02:30 AM IST
ಕಾರ್ಯಕ್ರಮದಲ್ಲಿ ಸಚಿವ ಡಾ. ಎಚ್‌.ಕೆ. ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಸಾರಸ್ವತ ಲೋಕಕ್ಕೆ ವೇಮನರ ವಿಚಾರಧಾರೆಯನ್ನು ಪರಿಚಯಿಸುವ ಉದ್ದೇಶದಿಂದ ವೇಮನರ ಕುರಿತು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಗಿದೆ.

ಗದಗ: ಮಹಾಯೋಗಿ ವೇಮನರ ತತ್ವ ಸಿದ್ಧಾಂತಗಳು ಸಮಾಜಕ್ಕೆ ಹೆಚ್ಚು ಪ್ರಸ್ತುತವಾಗಿವೆ. ಅವುಗಳನ್ನು ಇನ್ನಷ್ಟು ಪಸರಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.

ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ, ಮಹಾಯೋಗಿ ವೇಮನ ಮತ್ತು ಜಿಲ್ಲಾ ರಡ್ಡಿ ಸಮಾಜ ಸಂಘದ ಸಹಯೋಗದಲ್ಲಿ ನಡೆದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅನ್ಯಾಯದ ವಿರುದ್ಧ ಹೋರಾಡುವ ಸ್ವಭಾವದ ಸಮಾಜ ನಮ್ಮದು. ವಡ್ಡರಿಗೆ ಗುಡ್ಡ, ರೆಡ್ಡರಿಗೆ ಹೊಲ ತೋರಿಸಬಾರದು ಎಂಬ ಗಾದೆಯಂತೆ ಶ್ರಮಜೀವಿಗಳು ರಡ್ಡಿ ಸಮುದಾಯದವರು. ಭೂಮಿಯ ಮೇಲೆ ಅಪಾರ ಮೋಹ ಇಟ್ಟುಕೊಂಡು ಪ್ರಾಮಾಣಿಕವಾಗಿ ದುಡಿದು ಬದುಕುವವರು ನಮ್ಮವರು ಎಂದರು.

ಅನೇಕ ಶ್ರೇಷ್ಠ ವ್ಯಕ್ತಿಗಳನ್ನು ಸಮಾಜಕ್ಕೆ ನೀಡಿರುವ ರಡ್ಡಿ ಸಮಾಜ ಶ್ರೇಷ್ಠವಾಗಿದೆ. ಜನರ ಪ್ರೀತಿಗೆ ಪಾತ್ರರಾದ ರಡ್ಡಿ ಸಮುದಾಯದವರು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನರಂತಹ ಮಹಾನ್ ವ್ಯಕ್ತಿತ್ವಗಳನ್ನು ಸಮಾಜಕ್ಕೆ ನೀಡಿದ್ದಾರೆ ಎಂದರು.

ಸಾರಸ್ವತ ಲೋಕಕ್ಕೆ ವೇಮನರ ವಿಚಾರಧಾರೆಯನ್ನು ಪರಿಚಯಿಸುವ ಉದ್ದೇಶದಿಂದ ವೇಮನರ ಕುರಿತು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಮುಂದಿನ 15 ದಿನಗಳೊಳಗೆ ರಡ್ಡಿ ಸಮಾಜದ ಸಮುದಾಯ ಭವನಕ್ಕೆ ಜಾಗ ದೊರೆಯಲಿದೆ. ಮುಂದಿನ ವರ್ಷ ಅಲ್ಲಿಯೇ ಮಹಾಯೋಗಿ ವೇಮನ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದರು.

ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ತಮಗಾಗಿ ಬದುಕದೇ ಸಮಾಜಕ್ಕಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳ ಜಯಂತಿಗಳನ್ನು ಆಚರಿಸುತ್ತೇವೆ. ಅಂತಹ ಮಹಾನ್ ವ್ಯಕ್ತಿಗಳಲ್ಲಿ ಮಹಾಯೋಗಿ ವೇಮನರು ಒಬ್ಬರು. ವೇಮನರು ಸಾಕಷ್ಟು ಕವನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ ಎಂದರು.

ಸಮಾಜದ ಸಮುದಾಯ ಭವನ ನಿರ್ಮಾಣಕ್ಕಾಗಿ ₹10 ಲಕ್ಷ ಅನುದಾನ ನೀಡುವುದಾಗಿ ಘೋಷಿಸಿ, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಮಾಜಿ ಸಚಿವ ಬಿ.ಆರ್. ಯಾವಗಲ್ ಮಾತನಾಡಿದರು. ಹುಲಕೋಟಿಯ ಶ್ರೀ ರಾಜರಾಜೇಶ್ವರಿ ವಿದ್ಯಾನಿಕೇತನದ ಅನಿಲ ವೈದ್ಯ ಅವರು ಉಪನ್ಯಾಸ ನೀಡಿದರು.

ಈ ವೇಳೆ ಎಸ್ಎಸ್ಎಲ್‌ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವೇಮನರ ಕುರಿತು ನಾಲ್ಕು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಕೃಷ್ಣಗೌಡ ಪಾಟೀಲ, ಎಚ್.ಎಸ್. ಶಿವನಗೌಡ್ರ, ವಾಸಣ್ಣ ಕುರಡಗಿ, ಶ್ರೀನಿವಾಸ ದ್ಯಾವನಗೌಡ್ರ, ಮುಚ್ಚಂಡಿ, ಆರ್.ಎಸ್. ಪಾಟೀಲ, ಕರಬಸಪ್ಪ ಹಂಚಿನಾಳ, ಲಕ್ಷ್ಮಣಗೌಡ ಪಾಟೀಲ, ತಮ್ಮನಗೌಡ ಶಿರಿಯಪ್ಪಗೌಡ್ರ, ಶೇಖರಡ್ಡಿ ಗದ್ದಿಕೇರಿ, ಶಿವನಗೌಡ ಹಳ್ಳೂರ, ಜಯಶ್ರೀ ಕೋಲಕಾರ, ರವಿಂದ್ರನಾಥ ಕುಲಕರ್ಣಿ, ಜೆ.ಕೆ. ಜಮಾದಾರ, ಜಿ.ಬಿ. ಆದಾಪೂರ, ಪ್ರೊ. ಕೆ.ಎಚ್. ಬೇಲೂರ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಮಲ್ಲಣ್ಣ ಪರಡ್ಡಿ, ಹೇಮರಡ್ಡಿ ನೀಲಗುಂದ, ಪ್ರೇಮಕ್ಕ ಮೇಟಿ, ವಿ.ಆರ್. ದೇವರಡ್ಡಿ ಇತರರು ಇದ್ದರು. ರವಿ ಮೂಲಿಮನಿ ಸ್ವಾಗತಿಸಿದರು. ಸುಧಾ ಹುಚ್ಚಣ್ಣವರ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ನಿಂದ ಅರ್ಹರಿಗೆ ಅನ್ಯಾಯ ಆಗಬಾರ್ದು: ಸಿಎಂ
ದಾವೋಸ್‌ ಶೃಂಗಕ್ಕೆ ಡಿಸಿಎಂ ಡಿಕೆಶಿ ಇಂದು ಪ್ರಯಾಣ - ಎಲ್ಲರ ಸಲಹೆ ಮೇರೆಗೆ ಭೇಟಿ