- ಗಿಣಿಗೇರಾ ನರೇಗಾ ಕಾಮಗಾರಿ ಸ್ಥಳದಲ್ಲಿ ಸ್ವೀಪ್ ಕಾರ್ಯಕ್ರಮದಲ್ಲಿ ಪಿಡಿಒಕನ್ನಡಪ್ರಭ ವಾರ್ತೆ ಕೊಪ್ಪಳ
ಬುಧವಾರ ಕೊಪ್ಪಳ ತಾಲೂಕಿನ ಗಿಣಿಗೇರಾ ಗ್ರಾಮ ಪಂಚಾಯಿತಿಯ ನರೇಗಾ ಕಾಮಗಾರಿ ಸ್ಥಳವಾದ ಗಿಣಿಗೇರಾ ಗ್ರಾಮದ ಕೆರೆ ಕಾಮಗಾರಿಯಲ್ಲಿ ಗ್ರಾಪಂ ಸ್ವೀಪ್ ಸಮಿತಿ ವತಿಯಿಂದ ಕೂಲಿಕಾರರಿಗೆ ಜರುಗಿದ ಸ್ವೀಪ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೇ 7ರಂದು ಜರುಗುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ. ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲಾತಿ ತೆಗೆದುಕೊಂಡು ಹೋಗಿ ಸೂಕ್ತ ಎನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕು. ಸ್ವೀಪ್ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ಜಾಗೃತಿ ಮೂಡಿಸಲಾಗುತ್ತಿದ್ದು, ನರೇಗಾ ಕೂಲಿಕಾರರು ಮತದಾನ ಮಾಡಿ ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು.ಕಳೆದ ಬಾರಿಗಿಂತ ಈ ಬಾರಿ ವಿನೂತನವಾಗಿ ಸ್ವೀಪ್ ಕಾರ್ಯಕ್ರಮಗಳನ್ನು ಜರುಗಿಸುವ ಮೂಲಕ ಜಿಲ್ಲೆಯ ಮತದಾನ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಮತ ಚಲಾವಣೆ ತುಂಬಾ ಜವಾಬ್ದಾರಿಯುತವಾದ ಕಾರ್ಯ. ಆ ಮೂಲಕ ನಾವುಗಳು ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ ನಿರ್ಭಯವಾಗಿ ಮತ ಚಲಾಯಿಸಬೇಕೆಂದು ಕರೆ ನೀಡಿದರು. ನಂತರ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.