20ರಿಂದ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸೋಣ-ಜಿಲ್ಲಾಧಿಕಾರಿ

KannadaprabhaNewsNetwork |  
Published : Oct 17, 2025, 01:01 AM IST
16ಎಚ್‌ವಿಆರ್4 | Kannada Prabha

ಸಾರಾಂಶ

ಜಿಲ್ಲಾದ್ಯಂತ ಆರೋಗ್ಯಯುತ ಮತ್ತು ಸುಂದರ ಪರಿಸರವನ್ನು ಉಳಿಸಲು ಅ. 20ರಿಂದ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ಹಾವೇರಿ: ಜಿಲ್ಲಾದ್ಯಂತ ಆರೋಗ್ಯಯುತ ಮತ್ತು ಸುಂದರ ಪರಿಸರವನ್ನು ಉಳಿಸಲು ಅ. 20ರಿಂದ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವನ್ನು ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ ಹಾಗೂ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕು ಎಂದು ಕೋರಿದ್ದಾರೆ.ದೀಪಾವಳಿ ಬೆಳಕಿನ ಹಬ್ಬವು ಎಲ್ಲರೂ ಸಂಭ್ರಮ ಹಾಗೂ ಸಡಗರದಿಂದ ಆಚರಿಸುವ ಹಬ್ಬ, ಪಟಾಕಿಗಳನ್ನು ಬಳಸುವಾಗ ಎಚ್ಚರವಿರಲಿ, ಸ್ವಲ್ಪ ಮೈಮರೆತಲ್ಲಿ ಜೀವನದ ಬೆಳಕನ್ನೇ ಕಸಿದುಕೊಳ್ಳಬಹುದು. ಹಬ್ಬದ ಆಚರಣೆ ಜಾಗರೂಕತೆ ಹಾಗೂ ಸುರಕ್ಷತೆಯಿಂದ ಕೂಡಿರಲಿ ಎಂದು ತಿಳಿಸಿದ್ದಾರೆ. ಹಸಿರು ಪಟಾಕಿ ಗುರುತಿಸುವಿಕೆ: ಪಟಾಕಿ ಬಾಕ್ಸಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ಮತ್ತು ನ್ಯಾಷನಲ್ ಎನ್ವಿರಾಂಮೆಂಟಲ್ ಎಂಜಿನಿಯರಿಂಗ್ ರಿಸರ್ಚ್ ಇನ್ಸಿಟಿಟ್ಯೂಟ್ ಇವರ ಲೋಗೋ ಹಾಗೂ ನೋಂದಿತ ಸಂಖ್ಯೆಯೊಂದಿಗೆ ಮುದ್ರ‍್ರಿತವಾಗಿರಬೇಕು. ಅಧಿಕೃತ ಮಾರಾಟಗಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ನಿಷೇಧಿತ ಪಟಾಕಿಗಳ ಮಾರಾಟ ಕಂಡುಬಂದಲ್ಲಿ ಅಂತಹ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ನಿಯಮಗಳನ್ವಯ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಬೆಳಕಿನ ಹಬ್ಬ: ಸಾಧ್ಯವಾದಷ್ಟು ಹಣತೆ ದೀಪ ಹಚ್ಚುವ ಮೂಲಕ ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ. ಅಪಾರ್ಟ್‌ಮೆಂಟ್, ವಠಾರ, ನೆರೆಹೊರೆಯ ಮನೆಯವರು ಒಂದೆಡೆ ಕಲೆತು ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಿ. ಹಬ್ಬದ ಆಚರಣೆಯಲ್ಲಿ ಬೆಳಕೆ ಪ್ರಧಾನವಾಗಿರಲಿ. ಗಿಡ-ಮರಗಳು ಮತ್ತು ಪ್ರಾಣಿ-ಪಕ್ಷಿಗಳಿಗೆ ಯಾವುದೇ ಹಾನಿಯಾಗದಂತೆ ಎಚ್ಚರವಹಿಸಿ. ಶಾಶ್ವತ ಕುರುಡತನ, ಕಿವುಡುತನಗಳಿಗೆ ಎಡೆಮಾಡಿಕೊಡದಿರಿ. ಪಟಾಕಿಗಳನ್ನು ಖರೀದಿಸುವ ಮುನ್ನ ಹಸಿರು ಪಟಾಕಿಗಳ ಲೇಬಲ್‌ಗಳನ್ನು ಪರಿಶೀಲಿಸಿ ಖರೀದಿಸಲು ಕೋರಿದೆ. ನಿಷೇಧ: ಶಿಕ್ಷಣ ಸಂಸ್ಥೆ, ಆಸ್ಪತ್ರೆ ಮತ್ತು ವೃದ್ಧಾಶ್ರಮಗಳಂತಹ ಸೂಕ್ಷ್ಮ ಪ್ರದೇಶಗಳ ಹತ್ತಿರ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. 125 ಡೆಸಿಬಲ್‌ಗೂ (ಶಬ್ದದ ಪ್ರಮಾಣ) ಮೇಲ್ಪಟ್ಟ ಪಟಾಕಿಗಳ ಸಿಡಿತವನ್ನು ನಿಷೇಧಿಸಲಾಗಿದೆ. ಪಟಾಕಿಗಳ ಸಿಡಿತದ ನಂತರ ಉತ್ಪತ್ತಿಯಾಗುವ ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಬಾರದು. ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಕಸವನ್ನು ವಿಲೇವಾರಿ ಮಾಡುವ ವಾಹನಗಳಿಗೆ ನೀಡಬೇಕು.ಹಸಿರು ಪಟಾಕಿಯನ್ನು ಹೊರತುಪಡಿಸಿ ಇನ್ಯಾವುದೇ ಪಟಾಕಿಗಳನ್ನು ಹಬ್ಬದ ಸಮಯದಲ್ಲಿ ರಾತ್ರಿ 8 ಗಂಟೆಯಿಂದ 10ವರೆಗೆ ಮಾತ್ರ ಪಟಾಕಿಗಳನ್ನು ಸ್ಫೋಟಿಸಲು ಅವಕಾಶವಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟವನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಡಿದ್ದು ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟ
ಹುಟ್ಟು ಸಾವಿನ ಮಧ್ಯೆ ಸಾಧನೆ ಮಹತ್ವದ್ದು: ಡಾ.ಮುರುಗೇಶ ನಿರಾಣಿ