ಹಿರೇಕೆರೂರು: ಕೇಂದ್ರ, ರಾಜ್ಯ ಸರ್ಕಾರಗಳು ಭಾರತದ ಜನತೆ ನೆಮ್ಮದಿಯಿಂದ ಜೀವನ ಸಾಗಿಸುವ ಹಾಗೆ ನೋಡಿಕೋಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಪಟ್ಟಣದ ಪೊಲೀಸ್ ಮೈದಾನದಲ್ಲಿ ಗುರುವಾರ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಿದ್ದ ೭೮ನೇ ಸ್ವಾತಂತ್ರ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅನೇಕ ಹಿರಿಯರ ಕನ್ನಸನ್ನು ಈಡೇರಿಸುವ ರೀತಿ ಪ್ರತಿಯೊಬ್ಬರು ಕೆಲಸ ಮಾಡಬೇಕು. ಸಂವಿಧಾನದ ಮೂಲಕ ನಮಗೆ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ್ದು, ನಾವೆಲ್ಲರೂ ಅವುಗಳನ್ನು ಪಾಲನೆ ಮಾಡುವ ಮೂಲಕ ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು. ಕಳೆದ ಎರಡು ವರ್ಷಗಳಿಂದ ರಾಜ್ಯ ಸರ್ಕಾರ ಬರಗಾಲವನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಕೂಲಿಕಾರರಿಗೆ ಕೆಲಸ, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಮುಂಜಾಗ್ರತಾ ಕ್ರಮ ಸೇರಿದಂತೆ ಜನಪರವಾದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತ ಬಂದಿದೆ. ಈ ವರ್ಷ ಮಳೆ ಚೆನ್ನಾಗಿ ಸುರಿಯುತ್ತಿರುವುದರಿಂದ ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಭಾಗ್ಯಗಳ ಗ್ಯಾರಂಟಿ ಕೊಡುವ ಮೂಲಕ ಜನಸಾಮಾನ್ಯರ ಮೇಲೆತ್ತುವ ಕೆಲಸ ಮಾಡುತ್ತಿದೆ. ದೇಶದ ಸಂವಿಧಾನದ ಆಶಯಗಳಿಗೆ ತಕ್ಕಂತೆ ನಡೆದುಕೊಂಡು, ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಪ್ರತಿಯೊಬ್ಬರು ಭವ್ಯ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.ತಹಸೀಲ್ದಾರ್ ಎಚ್. ಪ್ರಭಾಕರಗೌಡ ಧ್ವಜಾರೋಹಣ ನೆರವೇರಿಸಿದರು. ಪಪಂ ಸದಸ್ಯರಾದ ಮಹೇಂದ್ರ ಬಡಳ್ಳಿ, ಗುರುಶಾಂತ ಯತ್ತಿನಹಳ್ಳಿ, ಕಂಠಾಧರ ಅಂಗಡಿ, ಹರೀಶ ಕಾಲಾಲ್, ಅಲ್ತಾಫ್‌ಖಾನ್ ಪಠಾಣ, ಹನುಮಂತಪ್ಪ ಕುರುಬರ, ರಮೇಶ ಕೋಡಿಹಳ್ಳಿ, ಕುಸುಮಾ ಬಣಕಾರ, ವಿಜಯಶ್ರೀ ಬಂಗೇರ, ಸುಧಾ ಚಿಂದಿ, ಚಂದ್ರಕಲಾ ಕೋರಿಗೌಡ್ರ, ಶಂಶಾದ ಕುಪ್ಪೇಲೂರ, ರಜಿಯಾ ಅಸದಿ, ಕವಿತಾ ಹರ‍್ನಳ್ಳಿ, ಪೂಜಾ ತಂಬಾಕದ. ರಾಜು ಕರಡಿ, ದಿಲ್‌ಶಾಯ ಬಳೇಗಾರ್, ಸನಾವುಲ್ಲಾ ಮಕಾಂದಾರ್, ಬಸವರಾಜ ಕಟ್ಟಿಮನಿ, ಅಕ್ಷರ ದಾಸೋಹ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಚ್. ಜಾಡರ, ಕ್ಷೇತ್ರಸಮನ್ವಯಾಧಿಕಾರಿ ಎನ್.ಸುರೇಶಕುಮಾರ, ಸಿಡಿಪಿಒ ಜಿಲ್ಲಾ ಅಧಿಕಾರಿ ಶ್ರೀನಿವಾಸ ಆಲದರ್ತಿ, ಸಿಡಿಪಿಒ ಜಯಶ್ರೀ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು. ಕೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ್ ಸ್ವಾಗತಿಸಿದರು. ಮೇಗರಾಜ ಮಾಳಿಗಿಮನಿ ನಿರೂಪಿಸಿದರು ನಾಗರಾಜ ಕಟ್ಟಿಮನಿ ವಂದಿಸಿದರು,