ಪ್ರತಿದಿನ ಒಂದು ಸಸಿ ನೆಡುವ ಮನಸ್ಸು ಮಾಡೋಣ: ಟಿ.ಎಂ. ಭಾಸ್ಕರ್

KannadaprabhaNewsNetwork |  
Published : Jun 06, 2024, 12:30 AM IST
ಪೋಟೋ ಪೈಲ್ ನೇಮ್ ೫ಎಸ್‌ಜಿವಿ೨  ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ಕುಲಪತಿಗಳಾದ ಪ್ರೊ.ಟಿ.ಎಂ. ಭಾಸ್ಕರ್ ವಹಿಸಿ ಅವರು ಮಾತನಾಡಿದರು. | Kannada Prabha

ಸಾರಾಂಶ

ಶಿಗ್ಗಾಂವಿ ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಡಲಾಯಿತು.

ಶಿಗ್ಗಾಂವಿ: ಒಂದು ಮರ ಕಡಿದರೆ ಏಳು ಗಿಡಗಳನ್ನು ನೆಡಬೇಕು ಎಂಬುದು ನಿಯಮ ಇದೆ. ಆದಷ್ಟು ಗಿಡಗಳನ್ನು ಕಡಿಯದೆ ಇರೋಣ. ಪ್ರತಿ ದಿನ ಒಂದು ಸಸಿ ನೆಡಬೇಕು ಎನ್ನುವ ಮನಸ್ಸು ಮಾಡೋಣ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಹೇಳಿದರು.

ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ಲಾಸ್ಟಿಕ್ ಹಾಗೂ ತಂಬಾಕುಮುಕ್ತ ವಾತಾವರಣ ನಿರ್ಮಾಣ ಮಾಡಬೇಕು. ಆದ್ದರಿಂದ ದಿನನಿತ್ಯದ ದಿನದಲ್ಲಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಚೀಲ ಬಳಸುವ ಬದಲಾಗಿ ಕಾಗದದ ಕೈ ಚೀಲಗಳನ್ನು ಬಳಸಬೇಕು ಎನ್ನುವ ಯೋಚನೆಯನ್ನು ನಮ್ಮ ರಕ್ತಗತವಾಗಿ ಮಾಡಿಕೊಳ್ಳಬೇಕು ಎಂದರು.

ಕುಲಸಚಿವ ಪ್ರೊ. ಸಿ.ಟಿ. ಗುರುಪ್ರಸಾದ್ ಮಾತನಾಡಿ, ವಿಶ್ವ ಸಂಸ್ಥೆಯಲ್ಲಿ ಚರ್ಚೆಯಾಗಿ, ಪರಿಸರ ಸಂರಕ್ಷಣೆಗಾಗಿ ದಿನಾಚರಣೆಯನ್ನು ೧೯೭೩ರಲ್ಲಿ ಜಾರಿಗೆ ತರಲಾಗಿದೆ. ಪ್ರತಿ ವರ್ಷ ಒಂದೊಂದು ಧ್ಯೇಯವಾಕ್ಯದೊಂದಿಗೆ ಆಚರಣೆ ಮಾಡಲಾಗುತ್ತದೆ. ಹಾಗೆಯೇ ಈ ವರ್ಷ ನಮ್ಮ ಭೂಮಿ ನಮ್ಮ ಭವಿಷ್ಯ-ಪೀಳಿಗೆಯ ಪುನರ್‌ಸ್ಥಾಪಕರು ನಾವು ಎಂಬುದು ಧ್ಯೇಯವಾಗಿದೆ. ತಾಪಮಾನ ಏರಿಳಿತದಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಜೀವ ಸಂಕುಲಕ್ಕೆ ತೊಂದರೆಯಾಗಿದೆ. ಹಾಗಾಗಿ ಪರಿಸರ ರಕ್ಷಣೆಗೆ ನಾವೆಲ್ಲ ನಿಲ್ಲಬೇಕಾಗಿದೆ ಎಂದರು.

ರಂಗಕರ್ಮಿ ಡಾ. ಪ್ರಕಾಶ ಗರುಡ ಮಾತನಾಡಿ, ಪರಿಸರದ ಜಾಗೃತಿ ಕುರಿತು ರಂಗ ಪ್ರದರ್ಶನ ನೀಡಿದ್ದೇವೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆವರಣ ಅತ್ಯಂತ ಹಸಿರಿನಿಂದ ಕಂಗೊಳಿಸುತ್ತಿದೆ. ಈ ಕ್ಯಾಂಪಸ್ ಅದ್ಭುತವಾಗಿದೆ. ಪರಿಸರಸ್ನೇಹಿ ರಂಗಪ್ರಕಾರಗಳನ್ನು ಅಳವಡಿಸಿಕೊಳ್ಳೋಣ ಎಂದರು.

ಎಂ.ವಿ.ಎ. ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅನ್ನಪೂರ್ಣಾ ಲಿಂಬಿಕಾಯಿ ಅವರು ಚಿತ್ರಿಸಿದ ಪರಿಸರ ಜಾಗೃತಿ ಕುರಿತಾದ ಪದ್ಮಶ್ರೀ ಸಾಲುಮರದ ತಿಮ್ಮಕ್ಕನವರ ಭಾವಚಿತ್ರ ಬಿಡುಗಡೆಗೊಳಿಸಲಾಯಿತು. ಸಂಗೀತ ನಿರ್ದೇಶಕ ರಾಘವ್ ಅವರು ಪರಿಸರ ಜಾಗೃತಿ ಕುರಿತು ಗೀತೆಗಳನ್ನು ಹಾಡಿದರು. ವಿಶ್ವವಿದ್ಯಾಲಯದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.

ಸಹಾಯಕ ಕುಲಸಚಿವ ಶಹಜಹಾನ್ ಮುದಕವಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಸಂಶೋಧನಾಧಿಕಾರಿ ಡಾ. ಕೆ. ಪ್ರೇಮಕುಮಾರ್ ಉಪಸ್ಥಿತರಿದ್ದರು. ಸಹಾಯಕ ಸಂಶೋಧನಾಧಿಕಾರಿ ಡಾ. ಮಲ್ಲಿಕಾರ್ಜುನ ಮಾನ್ಪಡೆ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ವಿಜಯಲಕ್ಷ್ಮೀ ಗೇಟಿಯವರ ಹಾಗೂ ಕಿರಿಯ ಸಹಾಯಕ ಶರೀಫ ಮಾಕಪ್ಪನವರ ಪ್ರಾರ್ಥಿಸಿದರು. ಎನ್‌ಎಸ್‌ಎಸ್‌ ಸಂಯೋಜನಾಧಿಕಾರಿ ಡಾ. ಗಿರೇಗೌಡ ಅರಳಿಹಳ್ಳಿ ವಂದಿಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌